ಸಾಂಕ್ರಾಮಿಕ ರೋಗ ತಡೆಗೆ ಕ್ರಮ ವಹಿಸಿ
Team Udayavani, Jul 1, 2021, 10:22 PM IST
ಚಿಕ್ಕಮಗಳೂರು: ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸಲು ಜನಜಾಗೃತಿ ಮೂಡಿಸುವಂತೆ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಇಲಾಖೆ ಅ ಧಿಕಾರಿಗಳಿಗೆ ಸೂಚಿಸಿದರು. ನಗರದ ಜಿಲ್ಲಾ ಧಿಕಾರಿ ಕಚೇರಿ ಸಭಾಂಗಣದಲ್ಲಿ ಸಾಂಕ್ರಾಮಿಕ ರೋಗ ಡೆಂಘೀ, ಮಲೇರಿಯಾ, ಚಿಕೂನ್‌ಗುನ್ಯಾ ರೋಗಗಳ ನಿಯಂತ್ರಣ ಮತ್ತು ಮುಂಜಾಗ್ರತಾ ಕ್ರಮಗಳ ಕುರಿತು ಅಂತರ ಇಲಾಖೆ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಗ್ರಾಮೀಣಾಭಿವೃದ್ಧಿ, ಪಂಚಾಯತ್‌ರಾಜ್ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್, ನಗರಾಭಿವೃದ್ಧಿ ಪ್ರಾ ಧಿಕಾರ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸಮಾಜ ಕಲ್ಯಾಣ, ಮೀನುಗಾರಿಕೆ, ಕೈಗಾರಿಕೆ, ನೀರಾವರಿ, ಕಂದಾಯ ಗಣಿ ಮತ್ತು ಭೂವಿಜ್ಞಾನ, ರಾಜ್ಯ ರಸ್ತೆ ಸಾರಿಗೆ, ಮಾಲಿನ್ಯ ನಿಯಂತ್ರಣ ಮಂಡಳಿ, ಪಶುಸಂಗೋಪನೆ, ಪ್ರವಾಸೋದ್ಯಮ, ಕೃಷಿ ಮತ್ತು ತೋಟಗಾರಿಕೆ ಸೇರಿದಂತೆ ಇತರೆ ಇಲಾಖೆಗಳು ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದರು.
ನಗರ ಮತ್ತು ಪಟ್ಟಣ ಪ್ರದೇಶದಲ್ಲಿ ಘನತ್ಯಾಜ್ಯ ಸಮರ್ಪಕವಾಗಿ ವಿಲೇವಾರಿಯಾಗಬೇಕು. ರೋಗ ಹರಡುವ ಸೊಳ್ಳೆಗಳ ನಿಯಂತ್ರಣಕ್ಕೆ ಚರಂಡಿಯಲ್ಲಿ ನೀರು ಸರಾಗವಾಗಿ ಹರಿಯುವಂತೆ ನೋಡಿಕೊಳ್ಳಬೇಕು. ಸೊಳ್ಳೆನಾಶಕ ದ್ರಾವಣ ಸಿಂಪಡಣೆ, ಉದ್ಯಾನವನಗಳಲ್ಲಿ ನೀರು ಸಂಗ್ರಹವಾಗದಂತೆ ನಿರ್ವಹಿಸಬೇಕು. ಮೀನುಗಾರಿಕೆ ಇಲಾಖೆ ಸಹಕಾರದೊಂದಿಗೆ ಲಾರ್ವ ಹಾರಿ ಮೀನುಮರಿಗಳನ್ನು ಬಿಡಬೇಕು ಎಂದು ಪೌರಾಯುಕ್ತ ಬಿ.ಸಿ. ಬಸವರಾಜ್ ಅವರಿಗೆ ಸೂಚಿಸಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯವರ ಪಾತ್ರ ಮಹತ್ವದಾಗಿದೆ. ಶಾಲೆಗಳಲ್ಲಿ ಸೊಳ್ಳೆಗಳಿಂದ ಹರಡುವ ಸಾಂಕ್ರಾಮಿಕ ರೋಗಗಳು ಮತ್ತು ಅವುಗಳ ನಿಯಂತ್ರಣದ ಬಗ್ಗೆ ಪಠ್ಯಕ್ರಮ ಅಳವಡಿಸಬೇಕು. ಶಾಲಾ ಆವರಣದಲ್ಲಿ ಸ್ವತ್ಛತೆ ಹಾಗೂ ನೈಮಲ್ಯì ಕಾಪಾಡುವುದು. ಆರೋಗ್ಯ ಶಿಕ್ಷಣ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳುವುದರ ಮೂಲಕ ಮಕ್ಕಳಲ್ಲೂ ಜಾಗೃತಿ ಮೂಡಿಸಬೇಕು ಎಂದರು.
ಮನೆಗಳ ಮುಂದೆ ಚರಂಡಿ, ಕಲ್ಲುಕ್ವಾರಿ, ಕುಡಿಯುವ ನೀರಿನ ಬಾವಿಗಳು, ನೀರಿನ ತೊಟ್ಟಿ, ಬಸ್ ಡಿಪೋಗಳಲ್ಲಿ ಅನುಪಯುಕ್ತವಾಗಿರುವಂತಹ ಟೈರ್‌ಗಳಲ್ಲಿ, ಹೊಸದಾಗಿ ನಿರ್ಮಾಣವಾಗುತ್ತಿರುವ ಕಟ್ಟಡಗಳಲ್ಲಿ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು ಎಂದು ತಿಳಿಸಿದರು. ಜಿಲ್ಲಾ ರೋಗವಾಹಕ ಆಶ್ರಿತಾ ರೋಗಗಳ ನಿಯಂತ್ರಣಾ ಧಿಕಾರಿ ಡಾ|ಹರೀಶ್‌ಬಾಬು ಮಾತನಾಡಿ, ಶೂನ್ಯ ಮಲೇರಿಯಾ ಗುರಿಯನ್ನು ತಲುಪೋಣ ಎಂಬ ಘೋಷವಾಕ್ಯದೊಂದಿಗೆ ರಾಷ್ಟ್ರೀಯ ಮಲೇರಿಯಾ ವಿರೋಧಿ ಮಸಾಚರಣೆಯನ್ನು ಜೂನ್ ತಿಂಗಳಿನಲ್ಲಿ ಹಮ್ಮಿಕೊಳ್ಳಲಾಗಿದ್ದು, ಮಲೇರಿಯಾ ನಿವಾರಣೆಗೆ ಮುನ್ನೆಚ್ಚರಿಕೆ ಹಾಗೂ ನಿಯಂತ್ರಣ ವಿಧಾನಗಳೇ ನಮ್ಮ ಅಸ್ತ್ರವಾಗಬೇಕು ಎಂದ ಅವರು, ಸಾಂಕ್ರಾಮಿಕ ರೋಗಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಉಮೇಶ್, ಜಿಲ್ಲಾ ಸರ್ಜನ್ ಡಾ|ಮೋಹನ್ ಕುಮಾರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು
Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.