ಕೆಲವೇ ದಿನದಲ್ಲಿ ಕೇಂದ್ರ ಸಂಪುಟ ವಿಸ್ತರಣೆ: ಯಾರೆಲ್ಲಾ ಇದ್ದಾರೆ ರೇಸ್ ನಲ್ಲಿ?

Team Udayavani, Jul 2, 2021, 8:54 AM IST

ಕೆಲವೇ ದಿನದಲ್ಲಿ ಕೇಂದ್ರ ಸಂಪುಟ ವಿಸ್ತರಣೆ: ಯಾರೆಲ್ಲಾ ಇದ್ದಾರೆ ರೇಸ್ ನಲ್ಲಿ?

ಹೊಸದಿಲ್ಲಿ: ಮುಂದಿನ ದಿನಗಳಲ್ಲಿ ಎದುರಾಗುವ ಪಂಚ ರಾಜ್ಯ ವಿಧಾನ ಸಭೆ ಚುನಾವಣೆ ಮತ್ತು 2024ರ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ತಮ್ಮ ಸಚಿವ ಸಂಪುಟವನ್ನು ವಿಸ್ತರಣೆ ಮಾಡಲಿದ್ದಾರೆ. ಕಳೆದ ಕೆಲವು ವಾರಗಳಿಂದ ಈ ಬಗ್ಗೆ ದಿಲ್ಲಿಯಲ್ಲಿ ಚಟುವಟಿಕೆಗಳು ನಡೆಯುತ್ತಿದೆ. ಕೆಲವೇ ದಿನಗಳಲ್ಲಿ ನರೇಂದ್ರ ಮೋದಿಯವರು ತಮ್ಮ ಸಂಪುಟ ವಿಸ್ತರಣೆ ಮಾಡಲಿದ್ದಾರೆ ಎನ್ನುತ್ತಿವೆ ವರದಿಗಳು.

ಕೇಂದ್ರ ಸಚಿವ ಸಂಪುಟದಲ್ಲಿ 81 ಸ್ಥಾನಗಳಿವೆ. ಸದ್ಯ ಮೋದಿ ಸಂಪುಟದಲ್ಲಿ 53 ಮಂದಿ ಸಚಿವರಿದ್ದಾರೆ. ಇನ್ನೂ 28 ಮಂದಿ ಸಂಸದರಿಗೆ ಸಚಿವ ಸ್ಥಾನ ನೀಡಬಹುದಾಗಿದೆ. ಸದ್ಯ ಹೆಚ್ಚುವರಿ ಖಾತೆ ಹೊಂದಿರುವ ಸಚಿವರ ಖಾತೆಗಳನ್ನು ಹೊಸಬರಿಗೆ ನೀಡಬಹುದು.

ಮಧ್ಯಪ್ರದೇಶದಲ್ಲಿ ಬಿಜೆಪಿ ಸರ್ಕಾರ ಅಧಿಕಾರ ಪಡೆಯಲು ಕಾರಣರಾದ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು  ಅಸ್ಸಾಂನಲ್ಲಿ ಹಿಂತ್ ಬಿಸ್ವಾ ಶರ್ಮಾಗೆ ಅಧಿಕಾರ ಬಿಟ್ಟುಕೊಟ್ಟ ಮಾಜಿ ಮುಖ್ಯಮಂತ್ರಿ ಸರ್ಬಾನಂದ ಸೊನಾವಾಲ್ ಗೆ ಈ ಬಾರಿ ಕೇಂದ್ರ ಸಚಿವಗಿರಿ ಬಹುತೇಕ ಖಚಿತ ಎನ್ನಲಾಗಿದೆ.

ಇದನ್ನೂ ಓದಿ:ಬಿಜೆಪಿಯಲ್ಲಿ ಏನೋ ಸಮಸ್ಯೆಯಿದೆ. ಇದು ಆಡಳಿತದ ಮೇಲೂ ದುಷ್ಪರಿಣಾಮ ಬೀರುತ್ತಿದೆ: R.V ದೇಶಪಾಂಡೆ

2019ರಲ್ಲಿ ಸಚಿವ ಸ್ಥಾನ ನಿರಾಕರಿಸಿದ್ದ ಜೆಡಿಯು ಈ ಬಾರಿ ಎರಡು ಸ್ಥಾನಗಳ ಮೇಲೆ ಕಣ್ಣಿಟ್ಟಿದೆ ಎನ್ನಲಾಗಿದೆ. ನಿತೀಶ್ ಕುಮಾರ್ ನೇತೃತ್ವದ ಪಕ್ಷದಲ್ಲಿ ಲಲನ್ ಸಿಂಗ್, ರಾಮ್ ನಾಥ್ ಥಾಕೂರ್ ಮತ್ತು ಸಂತೋಶ್ ಕುಶ್ವಾ ಅವರು ಸಚಿವ ಸ್ಥಾನದ ರೇಸ್ ನಲ್ಲಿದ್ದಾರೆ ಎಂದು ಹೇಳಲಾಗಿದೆ.

ಇತ್ತೀಚೆಗೆ ಲೋಕ ಜನಶಕ್ತಿ ಪಕ್ಷದಲ್ಲಿ ನಡೆದ  ಬೆಳವಣಿಗೆಯ ಬಳಿಕ ಸದ್ಯ ಲೋಕಸಭೆಯಲ್ಲಿ ಎಲ್ ಜೆಪಿ ಮುಖ್ಯಸ್ಥರಾಗಿರುವ ಚಿರಾಗ್ ಪಾಸ್ವಾನ್ ರ ಚಿಕ್ಕಪ್ಪ ಪಶುಪತಿ ಪರಾಸ್ ಗೆ ಸಚಿವಗಿರಿ ಸಿಗಬಹುದು ಎನ್ನಲಾಗಿದೆ. ಇತ್ತೀಚೆಗೆ ನಿಧನರಾದ ಚಿರಾಗ್ ತಂದೆ ರಾಮ್ ವಿಲಾಸ್ ಪಾಸ್ವಾನ್ ಅವರು ಸಚಿವರಾಗಿದ್ದರು.

ಕರ್ನಾಟಕದ ಮೈಸೂರು ಸಂಸದ ಪ್ರತಾಪ್ ಸಿಂಹ, ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್‌ ಮೋದಿ, ಮಹಾರಾಷ್ಟ್ರದ ನಾರಾಯಣ ರಾಣೆ, ಬಿಹಾರ- ಗುಜರಾತ್‌ನ ಬಿಜೆಪಿ ಉಸ್ತುವಾರ ಭೂಪೇಂದ್ರ ಯಾದವ್‌ ಕೂಡ ಕೇಂದ್ರ ಸಂಪುಟದ ಆಕಾಂಕ್ಷಿಗಳಾಗಿದ್ದಾರೆ. ಉತ್ತರ ಪ್ರದೇಶದ ವರುಣ್‌ ಗಾಂಧಿ, ರಾಮಶಂಕರ್‌ ಕಠಾರಿಯಾ, ಅನಿಲ್‌ ಜೈನ್‌, ರೀಟಾ ಬಹುಗುಣ ಜೋಷಿ, ಜಾಫ‌ರ್‌ ಇಸ್ಲಾಂ ಅವರಿಗೆ, ಆ ರಾಜ್ಯದಲ್ಲಿ ಎನ್‌ಡಿಎ ಅಂಗಪಕ್ಷವಾಗಿರುವ ಅಪ್ನಾ ದಳದ ಅನುಪ್ರಿಯಾ ಪಟೇಲ್‌ಗೆ, ಉತ್ತರಾಖಂಡ್‌ನ‌ ಅಜಯ್‌ ಭಟ್‌ ಅಥವಾ ಅನಿಲ್‌ ಬಲುನಿ ಅವರಿಗೆ ಸಚಿವ ಸ್ಥಾನ ಸಿಗಬಹುದು.

ಇದನ್ನೂ ಓದಿ:ಗ್ರಾಮ ಭಾರತ: ಸಾಗರದಷ್ಟು ಸಮಸ್ಯೆಗಳಿಗೆ ಸಾಸಿವೆಯಷ್ಟೇ ಪರಿಹಾರ !

ಪಶ್ಚಿಮ ಬಂಗಾಲದ ಬಿಜೆಪಿ ನಾಯಕರಾದ ಜಗನ್ನಾಥ್‌ ಸರ್ಕಾರ್‌, ಶಾಂತನು ಠಾಕೂರ್‌, ನಿಥೀಟ್‌ ಪ್ರಾಮಾಣಿಕ್‌ ಅವರು ಸಚಿವರಾಗುವ ಸಾಧ್ಯತೆಯಿದೆ. ಇದಲ್ಲದೆ, ಬ್ರಿಜೇಂದ್ರ ಸಿಂಗ್‌ (ಹರಿಯಾಣ), ರಾಹುಲ್‌ ಕಸ್ವಾನ್‌ (ರಾಜಸ್ಥಾನ), ಅಶ್ವಿ‌ನಿ ವೈಷ್ಣವ್‌ (ಒಡಿಶಾ), ಪೂನಮ್‌ ಮಹಾಜನ್‌ ಅಥವಾ ಪ್ರೀತಮ್‌ ಮುಂಡೆ (ಮಹಾರಾಷ್ಟ್ರ) ಹಾಗೂ ಪರ್ವೇಶ್‌ ವರ್ಮಾ ಅಥವಾ ಮೀನಾಕ್ಷಿ ಲೇಖೀ (ದಿಲ್ಲಿ) ಅವರೂ ಸಂಪುಟ ಸೇರುವ ಸಾಧ್ಯತೆಯಿದೆ.

ಟಾಪ್ ನ್ಯೂಸ್

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.