ಕನ್ನಡ ಪುಸ್ತಕ ಪ್ರಾಧಿಕಾರದ 2020ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರಕಟ
Team Udayavani, Jul 2, 2021, 1:32 PM IST
ಬೆಂಗಳೂರು : ಕನ್ನಡ ಪುಸ್ತಕ ಪ್ರಾಧಿಕಾರದ 2020ನೇ ಸಾಲಿನ ವಾರ್ಷಿಕ ಪ್ರಶಸ್ತಿ ಆಯ್ಕೆ ಪ್ರಕ್ರಿಯೆ ಪೂರ್ಣ ಗೊಂಡಿದ್ದು,
ಹಿರಿಯ ಸಾಹಿತಿ, ಚಿಂತಕ ಡಾ. ಟಿ.ವಿ. ವೆಂಕಟಾಚಲ ಶಾಸ್ತ್ರೀ ಅವರನ್ನು ಡಾ. ಎಂ.ಎಂ. ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಎಂ.ಎನ್. ನಂದೀಶ್ ಹಂಚೆ ಹೇಳಿದ್ದಾರೆ.
ಕನ್ನಡ ಪುಸ್ತಕ ಪ್ರಾಧಿಕಾರದಿಂದ ನೀಡಲಾಗುವ ಅತ್ಯುತ್ತಮ ಪ್ರಕಾಶನ ಪ್ರಶಸ್ತಿಯನ್ನು ಹುಬ್ಬಳ್ಳಿಯ ಸಾಹಿತ್ಯ ಪ್ರಕಾಶನ ಕ್ಕೆ ನೀಡಲಾಗಿದೆ. ಡಾ. ಜಿ.ಪಿ. ರಾಜರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿಗೆ ಮೈಸೂರಿನ ಸಯ್ಯದ್ ಇಸಾಕ್ ಅವರನ್ನು ಆಯ್ಕೆ ಮಾಡಲಾಗಿದೆ.
ಡಾ|| ಅನುಪಮ ನಿರಂಜನ ವೈದ್ಯಕೀಯ ಹಾಗೂ ವಿಜ್ಞಾನ ಸಾಹಿತ್ಯ ಪ್ರಶಸ್ತಿಯನ್ನು ಡಾ|| ಸುಧೀಂದ್ರ ಹಾಲ್ದೊಡ್ಡೇರಿ ಅವರಿಗೆ ನೀಡಲಾಗಿದೆ ಎಂದು ಡಾ. ಎಂ.ಎನ್. ನಂದೀಶ್ ಹಂಚೆ ತಿಳಿಸಿದ್ದಾರೆ.
ಪುಸ್ತಕ ಬಹುಮಾನಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು ಕೆಲವು ದಿನಗಳಲ್ಲೇ ಪ್ರಕಟ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ. ಅತ್ಯುತ್ತಮ ಪ್ರಕಾಶನ ಪ್ರಶಸ್ತಿ ರೂ.1.00ಲಕ್ಷ ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ. ಡಾ. ಎಂ.ಎಂ. ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿ ರೂ.75,000-00 ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ.
ಡಾ. ಜಿ.ಪಿ. ರಾಜರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿ ರೂ.50,000-00 ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ. ಡಾ|| ಅನುಪಮಾ ನಿರಂಜನ ವೈದ್ಯಕೀಯ ಹಾಗೂ ವಿಜ್ಞಾನ ಸಾಹಿತ್ಯ ಪ್ರಶಸ್ತಿ ರೂ.25,000-00 ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.