ವೈದ್ಯರು-ಪತ್ರಕರ್ತರ ಸೇವೆ ಶ್ಲಾಘನೀಯ: ಡಾ| ಬಿಲಗುಂದಿ


Team Udayavani, Jul 2, 2021, 4:49 PM IST

ಸಡೆರತಯುಯತರೆಡ

ಕಲಬುರಗಿ: ಸಮಾಜದ ಒಳಿತಿಗೆ, ಅಭಿವೃದ್ಧಿಗೆ ಶ್ರಮಿಸುವ ವೈದ್ಯರು ಮತ್ತು ಪತ್ರಕರ್ತರ ಸೇವೆ ಸಮಾನಾಂತರದಿಂದ ಕೂಡಿದೆ ಎಂದು ಹೈದ್ರಾಬಾದ್‌ ಕರ್ನಾಟಕ ಶಿಕ್ಷಣ ಸಂಸ್ಥೆ (ಎಚ್‌ಕೆಇ) ಅಧ್ಯಕ್ಷ ಡಾ| ಭೀಮಾಶಂಕರ ಬಿಲಗುಂದಿ ಹೇಳಿದರು. ಹೈದ್ರಾಬಾದ್‌ ಕರ್ನಾಟಕ ಶಿಕ್ಷಣ ಸಂಸ್ಥೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಪತ್ರಕರ್ತರ ದಿನಾಚರಣೆ ಅಂಗವಾಗಿ ಪತ್ರಕರ್ತರಿಗೆ ಹಮ್ಮಿಕೊಳ್ಳಲಾಗಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಪತ್ರಕರ್ತರು ಹಾಗೂ ವೈದ್ಯರು ದಿನದ 24 ಗಂಟೆ ಕಾಲ ಶ್ರಮಿಸುತ್ತಾರೆ. ವೈದ್ಯರು ನಿಷ್ಕಾಳಜಿ ತೋರಿದರೆ ಜೀವ ಹಾನಿಯಾಗುತ್ತದೆ. ಪತ್ರಕರ್ತ ಜವಾಬ್ದಾರಿ ಮರೆತರೆ ಸಮಾಜದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಹೀಗಾಗಿ ಇಬ್ಬರದ್ದು ಜವಾಬ್ದಾರಿ ಕಾರ್ಯವಾಗಿದೆ ಎಂದರು. ಕೋವಿಡ್‌ ಎರಡನೇ ಅಲೆ ವೈದ್ಯರ ಮೇಲೆ ತುಂಬಾ ಪರಿಣಾಮ ಬೀರಿದೆ. ಜೀವದ ಹಂಗು ತೊರೆದು ಹೋರಾಡಿದ್ದರಿಂದ 1500ಕ್ಕೂ ಹೆಚ್ಚು ವೈದ್ಯರು ಪ್ರಾಣ ಕಳೆದುಕೊಂಡಿದ್ದಾರೆ.

ಬಸವೇಶ್ವರ ಆಸ್ಪತ್ರೆಯಲ್ಲಿ ಕೋವಿಡ್‌ ಸೇರಿದಂತೆ ಇತರ ರೋಗಗಳಿಗೆ ಸೂಪರ್‌ ಸ್ಪೆಷಾಲಿಟಿ ವೈದ್ಯಕೀಯ ಸೇವೆಯನ್ನು ಅತ್ಯಂತ ಕಡಿಮೆ ದರದಲ್ಲಿ ನೀಡಲಾಗಿದೆ. ಇದೊಂದು ಸಂಸ್ಥೆಯಾಗಿದ್ದರಿಂದ ಇಲ್ಲಿ ಲಾಭದ ಬದಲು ಸೇವೆಗೆ ಪ್ರಾಮುಖ್ಯತೆ ನೀಡಲಾಗಿದೆ. ಬಸವೇಶ್ವರ ಆಸ್ಪತ್ರೆಯಲ್ಲಿ ಕ್ಲಿಷ್ಟಕರ ಚಿಕಿತ್ಸೆಗಳನ್ನು ಯಶಸ್ವಿಯಾಗಿ ನಿರ್ವಹಿಸಲಾಗಿದೆ ಎಂದು ಹೇಳಿದರು. ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಭವಾನಿಸಿಂಗ್‌ ಠಾಕೂರ ಮಾತನಾಡಿ, ಪತ್ರಕರ್ತರು ಹಾಗೂ ವೈದ್ಯರು ಸತತವಾಗಿ ದುಡಿಯುತ್ತಾರೆ.

ಪತ್ರಕರ್ತರು ಜೀವದ ಹಂಗು ತೊರೆದು ಶ್ರಮಿಸುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ತಪಾಸಣೆ ಹಮ್ಮಿಕೊಳ್ಳಲಾಗಿದೆ ಎಂದರು. ಎಚ್‌ಕೆಇ ಉಪಾಧ್ಯಕ್ಷ ಡಾ| ಶರಣಬಸಪ್ಪ ಹರವಾಳ ಮಾತನಾಡಿ, ಎರಡನೇ ಕೋವಿಡ್‌ ಅಲೆಯಲ್ಲಿ ಬಸವೇಶ್ವರ ಆಸ್ಪತ್ರೆಯಲ್ಲಿ 1545 ಜನರಿಗೆ ವೈದ್ಯಕೀಯ ಸೇವೆ ನೀಡಲಾಗಿದೆ ಎಂದು ಹೇಳಿದರು. ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ದೇವೇಂದ್ರ ಅವಂಟಿ ಮಾತನಾಡಿದರು.

ಒಬ್ಬರಿಗೊಬ್ಬರು ಸನ್ಮಾನ: ವೈದ್ಯರ ದಿನಾಚರಣೆ ಅಂಗವಾಗಿ ಪತ್ರಕರ್ತರ ಸಂಘದ ಪರವಾಗಿ ಕೋವಿಡ್‌ ವಾರಿಯರ್ಸ್‌ಗಳಾಗಿ ಶ್ರಮಿಸುತ್ತಿರುವ ಬಸವೇಶ್ವರ ಆಸ್ಪತ್ರೆಯ ಹಿರಿಯ ವೈದ್ಯರಾದ ಡಾ| ಬಸವರಾಜ ಮಂಗಶೆಟ್ಟಿ, ಡಾ| ಬಸವರಾಜ ಬೆಳ್ಳಿ, ಡಾ| ಎಂ.ಎಸ್‌. ತೆಗನೂರ, ಡಾ| ಶಿವಾನಂದ ಮೇಳಕುಂದಿ, ಡಾ| ಕವಿತಾ ಸಲಗರ, ಡಾ| ನಿತಿನ ಕುನ್ನೂರ, ಡಾ| ಕವಿರಾಜ, ಆಸ್ಪತ್ರೆ ಆಡಳಿತಾ  ಧಿಕಾರಿ ಡಾ| ಎಂ.ಆರ್‌. ಪೂಜಾರಿ ಮತ್ತಿತರರನ್ನು ಸನ್ಮಾನಿಸಲಾಯಿತು.

ಇದೇ ರೀತಿ ಪತ್ರಿಕಾ ದಿನಾಚರಣೆ ಅಂಗವಾಗಿ ಎಚ್‌ಕೆಇ ಸಂಸ್ಥೆಯಿಂದ ಹಿರಿಯ ಪತ್ರಕರ್ತರಾದ ಟಿ.ವಿ. ಶಿವಾನಂದನ್‌, ಪತ್ರಕರ್ತರ ಸಂಘದ ಪದಾಧಿ ಕಾರಿಗಳು ಹಾಗೂ ಪತ್ರಕರ್ತರನ್ನು ಸನ್ಮಾನಿಸಲಾಯಿತು. ಎಚ್‌ಕೆಇ ಸಂಸ್ಥೆ ಕಾರ್ಯದರ್ಶಿ ಡಾ| ಜಗನ್ನಾಥ ಬಿಜಾಪುರೆ, ಆಡಳಿತ ಮಂಡಳಿ ಸದಸ್ಯರಾದ ಬಸವರಾಜ ಖಂಡೇರಾವ್‌, ಸೋಮನಾಥ ನಿಗ್ಗುಡಗಿ, ಡಾ| ಅನಿಲಕುಮಾರ ಪಟ್ಟಣ, ಡಾ| ಎನ್‌. ಗಿರಿಜಾ ಶಂಕರ ಮುಂತಾದವರಿದ್ದರು. ಡಾ| ಕಿರಣ ದೇಶಮುಖ, ಡಾ| ಕುಮಾರ ಅಂಗಡಿ ನಿರೂಪಿಸಿದರು. ಎಚ್‌ಕೆಇ ಆಡಳಿತ ಮಂಡಳಿ ಸದಸ್ಯರು ಹಾಗೂ ಬಸವೇಶ್ವರ ಆಸ್ಪತ್ರೆ ಸಂಚಾಲಕ ಡಾ| ಶರಣಬಸಪ್ಪ ಬಿ. ಕಾಮರೆಡ್ಡಿ ಸ್ವಾಗತಿಸಿದರು. ಪ್ರಾಂಶುಪಾಲ ಡಾ| ಶರಣಗೌಡ ಪಾಟೀಲ ವಂದಿಸಿದರು.

 

ಟಾಪ್ ನ್ಯೂಸ್

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Shiva-sene-Shinde

Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಶಿವಸೇನೆಗೆ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.