ಮನೆ ಮನೆಗೆ ಗಂಗೆ ಯೋಜನೆ ಕಾರ್ಯಾರಂಭ

Team Udayavani, Jul 3, 2021, 10:20 AM IST

ಮನೆ ಮನೆಗೆ ಗಂಗೆ ಯೋಜನೆ ಕಾರ್ಯಾರಂಭ

ಸಿರಗುಪ್ಪ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಂಟಿಯಾಗಿ ಅನುಷ್ಠಾನಗೊಳಿಸುತ್ತಿರುವ “ಜಲ್‌ ಜೀವನ್‌ ಮಿಷನ್‌’ ಯೋಜನೆಯಡಿಯಲ್ಲಿ ಮನೆ ಮನೆಗೆ ಗಂಗೆ ಯೋಜನೆ ತಾಲೂಕಿನಲ್ಲಿ ಜಾರಿಗೆಬಂದಿದ್ದು, ಇದರ ಅಡಿಯಲ್ಲಿ ತಾಲೂಕಿನ ಪ್ರತಿಗ್ರಾಮಗಳ ಪ್ರತಿ ಮನೆಗೂ ನಲ್ಲಿ ಸಂಪರ್ಕದ ಮೂಲಕ ಕುಡಿಯುವ ನೀರು ಪೂರೈಸಲಾಗುವುದು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೇತೃತ್ವದ ಜಿಲ್ಲಾ ಕುಡಿಯುವ ನೀರು ಮತ್ತು ನೈರ್ಮಲ್ಯ ಸಮಿತಿಯು ಯೋಜನೆಯ ಮೇಲ್ವಿಚಾರಣೆ ಹಾಗೂ ಅನುಷ್ಠಾನದ ಜವಾಬ್ದಾರಿ ಹೊತ್ತಿದೆ.

2020-21ನೇ ಸಾಲಿನ ಮೊದಲನೇ ಹಂತದಲ್ಲಿ ತಾಲೂಕಿನ ಮೈಲಾಪುರ, ಎಚ್‌. ಹೊಸಳ್ಳಿ, ಹಾಗಲೂರು, ನಾಡಂಗ ಕ್ಯಾಂಪ್‌, ಕೊತ್ತಲಚಿಂತ, ಅಗಸನೂರು, ನಾಡಂಗ, ಎ.ಕೆ.ಹಾಳು, ಬಸರಹಳ್ಳಿ, ಬಿ.ಜಿ.ದಿನ್ನೆ, ಮಾಟಸೂಗೂರು ಕ್ಯಾಂಪ್‌, ತೊಂಡೆಹಾಳು, ಟಿ.ರಾಂಪುರ, ಉತ್ತನೂರು, ಮುದೇನೂರು ಮುಂತಾದ ಗ್ರಾಮಗಳಲ್ಲಿ ಮನೆ ಮನೆಗೆ ಗಂಗೆ ಯೋಜನೆಯನ್ನು ಅನುಷ್ಠಾನಗೊಳಿಸಲು ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ.

ಊಳೂರು, ಹಳೇಕೋಟೆ, ಬಲಕುಂದಿ, ಬೂದುಗುಪ್ಪ, ಉಪ್ಪಾರಹೊಸಳ್ಳಿ, ಬೊಮ್ಮಲಾಪುರ,ಇಟಿಗಿಹಾಳು, ಬಿ.ಎಂ.ಸೂಗೂರು, ಅಗಸನೂರು, ಕೆ.ಸೂಗೂರು, ಮಾಟಸೂಗುರು, ಕರೂರು,ರಾರಾವಿ, ಕೆ.ಬೆಳಗಲ್ಲು ಮುಂತಾದ ಗ್ರಾಮಗಳಲ್ಲಿ ಈಯೋಜನೆಯನ್ನು ಜಾರಿಗೊಳಿಸಲು ಕ್ರಿಯಾಯೋಜನೆಸಿದ್ಧಪಡಿಸಲಾಗಿದ್ದು, ಅಗಸನೂರು ಮತ್ತು ಕರೂರುಗ್ರಾಮಗಳಲ್ಲಿ ಈ ಕಾಮಗಾರಿಗೆ ಶಾಸಕರು ಭೂಮಿಪೂಜೆನೆರವೇರಿಸಿದ್ದಾರೆ. ತಾಲೂಕಿನ ಟಿ. ರಾಂಪುರ ಗ್ರಾಮದಲ್ಲಿ ಈ ಯೋಜನೆಯನ್ನು ಪ್ರಾಯೋಗಿಕವಾಗಿ ಜಾರಿಗೆ ತರಲಾಗಿದೆ.

ತಾಲೂಕಿನಲ್ಲಿ ಈಗಾಗಲೇ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಕೆರೆಗಳನ್ನು ನಿರ್ಮಿಸಲಾಗಿದ್ದು, ಗ್ರಾಮಗಳಲ್ಲಿ ಓವರ್‌ಹೆಡ್‌ ಟ್ಯಾಂಕ್‌ಗಳನ್ನು ನಿರ್ಮಿಸಲಾಗಿದ್ದು, ಕೆರೆಗಳಿಂದ ಓವರ್‌ಹೆಡ್‌ ಟ್ಯಾಂಕ್‌ಗಳಿಗೆ ನೀರು ಪೂರೈಸಲಾಗುತ್ತಿದೆ. ಅಲ್ಲಿಂದ ಮನೆ ಮನೆಗೆ ಗಂಗೆ ಯೋಜನೆಯಡಿ ಈ ಟ್ಯಾಂಕ್‌ಗಳಿಂದ ಪೈಪ್‌ಲೈನ್‌ ಮೂಲಕ ಪ್ರತಿ ಮನೆಗೂ ನೀರನ್ನು ತಲುಪಿಸಲಾಗುತ್ತದೆ.

ಗ್ರಾಮೀಣ ಭಾಗದ ಪ್ರತಿಮನೆಗೂ ದಿನದ 24 ಗಂಟೆಗಳ ಕಾಲ ವಾರದಲ್ಲಿ 7 ದಿನವೂ ಕುಡಿಯುವ ನೀರು ಪೂರೈಸುವುದು ಈ ಯೋಜನೆಯ ಮುಖ್ಯಉದ್ದೇಶವಾಗಿರುತ್ತದೆ. ಈ ಯೋಜನೆಯ ವೆಚ್ಚದಲ್ಲಿ ಶೇ. 10ರಷ್ಟು ಫಲಾನುಭವಿಗಳು ಭರಿಸಬೇಕಾಗುತ್ತದೆ. ಕಾಮಗಾರಿ ಮುಕ್ತಾಯವಾದ ಬಳಿಕ ನಿರ್ವಹಣೆ ಜವಾಬ್ದಾರಿಯನ್ನು ಆಯಾ ಗ್ರಾಮ ಪಂಚಾಯಿತಿಗಳಿಗೆನೀಡಲಾಗುವುದು. ಕಾಮಗಾರಿ ಪೂರ್ಣಗೊಂಡನಂತರ ನಿವಾಸಿಗಳಿಂದ ಅವರ ಪಾಲಿನ ಮೊತ್ತವನ್ನು ಸಂಗ್ರಹಿಸಲಾಗುತ್ತದೆ. ಪ್ರತಿ ಮನೆಯಲ್ಲಿ ಸಂಪರ್ಕಕ್ಕೂ ಮೀಟರ್‌ ಅಳವಡಿಸಲಾಗುತ್ತದೆ. ಮುಂದಿನ ದಿನಗಳಲ್ಲಿ ಗ್ರಾಮಸ್ಥರು ನೀರಿನ ಶುಲ್ಕವನ್ನುಪಾವತಿಸಬೇಕಾಗಬಹುದೆಂದು ಅ ಧಿಕಾರಿಗಳು ತಿಳಿಸಿದ್ದಾರೆ.

2024ರ ವೇಳಗೆ ಎಲ್ಲ ಗ್ರಾಮೀಣ ಕುಟುಂಬಗಳಿಗೆಕೊಳವೆ ನೀರು ಸರಬರಾಜು ಮಾಡುವುದು ಈ ಯೋಜನೆಯ ಉದ್ದೇಶವಾಗಿದ್ದು, ದೇಶಾದ್ಯಂತ ಸುಸ್ಥಿರ ನೀರು ಸರಬರಾಜು ನಿರ್ವಹಣೆಯ ಉದ್ದೇಶಗಳನ್ನು ಸಾಧಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಂದಾಗಿವೆ.

ಮಳೆಕೊಯ್ಲು, ಅಂತರ್ಜಲ ಪುನರ್‌ಭರ್ತಿ, ಕೃಷಿಯಲ್ಲಿ ಮರುಬಳಕೆಗಾಗಿ ಮನೆ ತ್ಯಾಜ್ಯ ನೀರನ್ನುನಿರ್ವಹಿಸಲು ಸ್ಥಳೀಯ ಮೂಲಸೌಕರ್ಯ ರಚಿಸುವ ಗುರಿ ಹೊಂದಿದೆ. ಜೊತೆಗೆ ಪಾಯಿಂಟ್‌ ರೀಚಾರ್ಜ್‌, ಸಣ್ಣ ನೀರಾವರಿ ಟ್ಯಾಂಕ್‌ಗಳ ನಿರ್ಜಲೀಕರಣ, ಕೃಷಿಗೆ ಗ್ರೇವಾಟರ್‌ ಬಳಕೆ ಮತ್ತು ಮೂಲಕ ಸುಸ್ಥಿರತೆಯಂಥ ವಿವಿಧ ನೀರಿನ ಸಂರಕ್ಷಣೆಯ ಪ್ರಯತ್ನಗಳನ್ನು ಆಧರಿಸಿದೆ.

ಅಂತರ್ಜಲ ಮಟ್ಟ ಕಡಿಮೆಯಾಗುತ್ತಿರುವುದರಿಂದ ದೇಶದಲ್ಲಿ ಇಂದು ನೀರಿನ ಸಂರಕ್ಷಣೆಯ ತುರ್ತು ಅವಶ್ಯಕತೆಯಾಗಿದೆ. ಆದ್ದರಿಂದ ಜಲಜೀವನ್‌ ಮಿಷನ್‌ ಸ್ಥಳೀಯ ಮಟ್ಟದಲ್ಲಿ ಸಮಗ್ರ ಬೇಡಿಕೆ ಮತ್ತು ನೀರಿನ ಪೂರೈಕೆ ನಿರ್ವಹಣೆಯತ್ತ ಗಮನ ಹರಿಸಲಿದೆ.

ತಾಲೂಕಿನ 45 ಗ್ರಾಮಗಳಲ್ಲಿ ಜಲ ಜೀವನ್‌ ಮಿಷನ್‌ ಯೋಜನೆಯಡಿಯಲ್ಲಿ ಮನೆ ಮನೆಗೆ ನೀರು ಪೂರೈಕೆ ಮಾಡುವ ಯೋಜನೆ ಕೈಗೆತ್ತಿಕೊಳ್ಳಲಾಗಿದ್ದು, ಒಟ್ಟು 3 ಕೋಟಿ 22 ಲಕ್ಷ ರೂ. ವೆಚ್ಚದಲ್ಲಿ ಒಟ್ಟು 8774 ಮನೆಗಳಿಗೆ ನೀರು ಪೂರೈಸುವ ಉದ್ದೇಶ ಹೊಂದಿದೆ. ಈಗಾಗಲೇಕೆಲ ಕಾಮಗಾರಿಗಳು ಪ್ರಾರಂಭವಾಗಿದ್ದು, ಇನ್ನು ಕೆಲವು ಟೆಂಡರ್‌ ಹಂತದಲ್ಲಿವೆ. –ರವೀಂದ್ರನಾಯ್ಕ, ಎಇಇ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ

-ಆರ್‌. ಬಸವರೆಡಿ ಕರೂರು

ಟಾಪ್ ನ್ಯೂಸ್

Sambhal Mosque Survey: ಶಾಹಿ ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್

Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್

8-I-phone

Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Jammu Kashmir: Big plan fails; Army destroys terrorist hideout

Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ

BGT 2024: Good news for Team India; A key player back in the team

BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ

ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…

ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…

Protest: ಬಾಂಗ್ಲಾದಲ್ಲಿ ಚಿನ್ಮಯ ಕೃಷ್ಣದಾಸ ಪ್ರಭು ಬಂಧನ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ

Protest: ಬಾಂಗ್ಲಾದಲ್ಲಿ ಚಿನ್ಮಯ ಕೃಷ್ಣದಾಸ ಪ್ರಭು ಬಂಧನ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ

suicide

Ballari: ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು; ಮೃತರ ಸಂಖ್ಯೆ 4ಕ್ಕೆ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

v

Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್‌ ನ ಅನ್ನಪೂರ್ಣ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Sambhal Mosque Survey: ಶಾಹಿ ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್

Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್

8-I-phone

Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Jammu Kashmir: Big plan fails; Army destroys terrorist hideout

Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.