ಪಾರ್ಕಿಂಗ್ ಕಟ್ಟಡ ಸ್ಥಳದ ಮಣ್ಣು ಕುಸಿತ
Team Udayavani, Jul 3, 2021, 4:24 PM IST
ಹುಬ್ಬಳ್ಳಿ: ಕೋರ್ಟ್ ವೃತ್ತ ಬಳಿ ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಿಸಲಾಗುತ್ತಿರುವ ಬಹುಪಯೋಗಿ ಪಾರ್ಕಿಂಗ್ ಕಟ್ಟಡ ಕಾಮಗಾರಿ ವೇಳೆ ತಡೆಗೋಡೆಯ ಮಣ್ಣು ಕುಸಿತಗೊಂಡ ಘಟನೆ ನಡೆದಿದೆ.
ಸುಮಾರು 55 ಕೋಟಿ ರೂ. ವೆಚ್ಚದಲ್ಲಿ ಮಲ್ಟಿ ಪಾರ್ಕಿಂಗ್ ಕಟ್ಟಡ ನಿರ್ಮಿಸಲಾಗುತ್ತಿದೆ. ಆದರೆ ಕಾಮಗಾರಿ ಆರಂಭವಾದಾಗಿನಿಂದ ಒಂದಿಲ್ಲೊಂದು ಸಮಸ್ಯೆ ಅನುಭವಿಸುತ್ತಲೇ ಇದೆ. ಕಟ್ಟಡ ಕಾಮಗಾರಿ ತಡವಾಗಿ ಆರಂಭವಾಗಿದ್ದು, ಕೊರೊನಾ, ಲಾಕ್‌ಡೌನ್ ಸೇರಿದಂತೆ ಹಲವಾರು ಕಾರಣಗಳಿಂದ ಕುಂಟುತ್ತಾ ಸಾಗುತ್ತಿದೆ.
ಇತ್ತೀಚೆಗೆ ಕಟ್ಟಡಕ್ಕೆಂದು ತೆಗೆದ ಆಳದ ಗುಂಡಿಯಿಂದಾಗಿ ಸಾಯಿ ಬಾಬಾ ಮಂದಿರದ ಮುಂಭಾಗದಲ್ಲಿ ರಸ್ತೆ ಕುಸಿತವಾಗುತ್ತಿತ್ತು. ಭಾರಿ ಗಾತ್ರದ ವಾಹನಗಳನ್ನು ಬಿಡದೇ ರಸ್ತೆ ಬಂದ್ ಮಾಡಿಕೊಡಬೇಕೆಂದು ಕಾಮಗಾರಿ ಗುತ್ತಿಗೆದಾರರು ಪೊಲೀಸ್ ಇಲಾಖೆಯವರಿಗೆ ಮನವಿ ಮಾಡಿಕೊಂಡಿದ್ದರು. ಸ್ಥಳಕ್ಕೆ ಭೇಟಿ ನೀಡಿದ್ದ ಪೊಲೀಸರು ಒಂದು ಭಾಗದ ರಸ್ತೆ ಬಂದ್ ಮಾಡಿ ಕಾಮಗಾರಿಗೆ ಅನುವು ಮಾಡಿಕೊಟ್ಟಿದ್ದರು.
ಗುರುವಾರ ರಾತ್ರಿ ಮತ್ತೆ ರಸ್ತೆಯ ಪಕ್ಕದ ಗೋಡೆಯ ಭಾಗ ಕುಸಿದಿದೆ. ಇದರಿಂದ ಕಾಮಗಾರಿಗೆ ಮತ್ತೆ ಅಡ್ಡಿಯುಂಟಾದಂತಾಗಿದೆ. ಕೆಲಸ ಮಾಡುತ್ತಿದ್ದ ವೇಳೆಯೇ ಏಕಾಏಕಿ ಮಣ್ಣು ಕುಸಿದಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani issue: ಕೇಂದ್ರ ಸರಕಾರ ಅದಾನಿಯನ್ನು ರಕ್ಷಿಸುತ್ತಿದೆ, ಕೂಡಲೇ ಬಂಧಿಸಿ: ರಾಹುಲ್ ಗಾಂಧಿ
Cyclone Fengal: ಭಾರೀ ಮಳೆಗೆ ಮುಳುಗಿದ ತಮಿಳುನಾಡು
Parliment: ವಕ್ಫ್ ಜೆಪಿಸಿ ಕಾಲಾವಧಿ ಹೆಚ್ಚಳಕ್ಕೆ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬೆಂಬಲ
Parliment: ವಯನಾಡ್ ಲೋಕಸಭಾ ಸದಸ್ಯೆಯಾಗಿ ಇಂದು ಪ್ರಿಯಾಂಕಾ ಶಪಥ ಸಾಧ್ಯತೆ
Appoint: ಲಾಕ್‌ಡೌನ್ ಟೀಕಿಸಿದ್ದ ಜಯ ಭಟ್ಟಾಚಾರ್ಯ ಅಮೆರಿಕ ಆರೋಗ್ಯ ಸಂಸ್ಥೆ ಮುಖ್ಯಸ್ಥ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Adani issue: ಕೇಂದ್ರ ಸರಕಾರ ಅದಾನಿಯನ್ನು ರಕ್ಷಿಸುತ್ತಿದೆ, ಕೂಡಲೇ ಬಂಧಿಸಿ: ರಾಹುಲ್ ಗಾಂಧಿ
Cyclone Fengal: ಭಾರೀ ಮಳೆಗೆ ಮುಳುಗಿದ ತಮಿಳುನಾಡು
Parliment: ವಕ್ಫ್ ಜೆಪಿಸಿ ಕಾಲಾವಧಿ ಹೆಚ್ಚಳಕ್ಕೆ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬೆಂಬಲ
Parliment: ವಯನಾಡ್ ಲೋಕಸಭಾ ಸದಸ್ಯೆಯಾಗಿ ಇಂದು ಪ್ರಿಯಾಂಕಾ ಶಪಥ ಸಾಧ್ಯತೆ
Appoint: ಲಾಕ್‌ಡೌನ್ ಟೀಕಿಸಿದ್ದ ಜಯ ಭಟ್ಟಾಚಾರ್ಯ ಅಮೆರಿಕ ಆರೋಗ್ಯ ಸಂಸ್ಥೆ ಮುಖ್ಯಸ್ಥ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.