ಕೊರೊನಾಕ್ಕೆ ಲಸಿಕೆಯೇ ಮದ್ದು : ಪ್ರಿಯಾಂಕ್
Team Udayavani, Jul 3, 2021, 5:12 PM IST
ಚಿತ್ತಾಪುರ: ಕೊರೊನಾ ಸೋಂಕು ತಡೆಯಲು ಲಸಿಕೆಯೇ ಮದ್ದು ಎಂದು ಶಾಸಕ ಪ್ರಿಯಾಂಕ್ ಖರ್ಗೆ ಹೇಳಿದರು. ಪಟ್ಟಣದ ಆರ್.ಕೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಲಸಿಕೆ ಅಭಿಯಾನ ಕಾರ್ಯಕ್ರಮದಲ್ಲಿ ಲಸಿಕೆ ಹಾಕಿಸಿಕೊಂಡು ಅವರು ಮಾತನಾಡಿದರು.
18 ವರ್ಷ ದಾಟಿದ ಪ್ರತಿಯೊಬ್ಬರೂ ಲಸಿಕೆ ಹಾಕಿಸಿಕೊಳ್ಳುವ ಮೂಲಕ ಕೋವಿಡ್ ನಿಯಂತ್ರಣಕ್ಕೆ ಇಲಾಖೆಗಳು ನಡೆಸು ತ್ತಿರುವ ಪ್ರಯತ್ನಕ್ಕೆ ಸಹಕಾರ ನೀಡಬೇಕು. ಚಿತ್ತಾಪುರ, ವಾಡಿಯಲ್ಲಿ ಮುಂದಿನ ಲಸಿಕಾ ಕಾರ್ಯಕ್ರಮ ನಡೆಸಲಾಗುತ್ತಿದ್ದು, ಎರಡು ಸಾವಿರ ಜನರಿಗೆ ಹಾಕಿಸುವ ಗುರಿ ಹೊಂದಲಾಗಿದೆ ಎಂದರು.
ತಾಲೂಕು ವೈದ್ಯಾ ಧಿಕಾರಿ ಡಾ| ದೀಪಕ ಪಾಟೀಲ ಮಾತನಾಡಿ, ಅಭಿಯಾನ ಕಾರ್ಯಕ್ರಮದಲ್ಲಿ ಒಂದು ಸಾವಿರ ಜನಕ್ಕೆ ಲಸಿಕೆ ಹಾಕಿಸುವ ಗುರಿ ಹೊಂದಿದ್ದು, 348 ಜನರು ಲಸಿಕೆ ಹಾಕಿಸಿಕೊಂಡಿದ್ದಾರೆ ಎಂದರು. ಲಸಿಕೆ ಅಭಿಯಾನ ಕೇಂದ್ರಕ್ಕೆ ಬರಲು ಸಾರ್ವಜನಿಕರ ಅನುಕೂಲಕ್ಕಾಗಿ ಉಚಿತ ಆಟೋ ವ್ಯವಸ್ಥೆ ಮಾಡಲಾಗಿತ್ತು.
ವಿಧಾನ ಪರಿಷತ್ ಮಾಜಿ ಸದಸ್ಯ ತಿಪ್ಪಣಪ್ಪ ಕಮಕನೂರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಗದೇವ ಗುತ್ತೇದಾರ, ಕೆಪಿಸಿಸಿ ಸದಸ್ಯ ನಾಗರೆಡ್ಡಿ ಪಾಟೀಲ ಕರದಾಳ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ, ಪುರಸಭೆ ಅಧ್ಯಕ್ಷ ಚಂದ್ರಶೇಖರ ಕಾಶಿ, ಎಪಿಎಂಸಿ ಅಧ್ಯಕ್ಷ ಸಿದ್ದುಗೌಡ ಅಫಜಲ್‌ಪುರಕರ್, ಪ್ರಮುಖರಾದ ಶಿವಾನಂದ ಪಾಟೀಲ, ರಮೇಶ ಮರಗೋಳ, ಶಿವರುದ್ರ ಭೀಣಿ, ವೀರಣ್ಣಗೌಡ ಪರಸರೆಡ್ಡಿ, ಮುಕ್ತಾರ ಪಟೇಲ್, ಶ್ರೀನಿವಾಸ ಸಗರ, ಶೀಲಾ ಕಾಶಿ, ತಹಶೀಲ್ದಾರ ಉಮಾಕಾಂತ ಹಳ್ಳೆ, ತಾಪಂ ಇಒ ನೀಲಗಂಗಾ ಬಬಲಾದ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
MUST WATCH
ಹೊಸ ಸೇರ್ಪಡೆ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.