ಆಹ್ವಾನದ ಹಿಂದೆ ನಾನೇ ಸುಪ್ರೀಂ ಸೂಚನೆ
Team Udayavani, Jul 4, 2021, 7:10 AM IST
ಬೆಂಗಳೂರು : ಆಪರೇಷನ್ ಕಮಲದಡಿ ಕಾಂಗ್ರೆಸ್ ತೊರೆದು ಬಿಜೆಪಿ ಸರಕಾರದಲ್ಲಿ ಸಚಿವರಾಗಿರುವವರನ್ನು ಮತ್ತೆ ಪಕ್ಷಕ್ಕೆ ಆಹ್ವಾನಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ರಾಜಕೀಯ ನಡೆಯ ಹಿಂದೆ ನಾನಾ ಲೆಕ್ಕಾಚಾರಗಳು ಅಡಗಿವೆ.
ಪಕ್ಷಕ್ಕೆ ದ್ರೋಹ ಬಗೆದು ಹೋದವರನ್ನು ವಾಪಸ್ ಸೇರಿಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಮಾಡಿದ್ದ “ಶಪಥ’ ಡಿ.ಕೆ.ಶಿ.ಗೆ ಗೊತ್ತಿಲ್ಲದ್ದೇನಲ್ಲ. ಇಷ್ಟಾದರೂ “ಪಕ್ಷದ ಅಧ್ಯಕ್ಷನಾಗಿ ಹೇಳುತ್ತಿದ್ದೇನೆ’ ಎಂದು ಅಧಿಕಾರಯುತವಾಗಿಯೇ ಹೇಳಿರುವುದು ರಾಜಕೀಯ ತಂತ್ರವಲ್ಲದೆ ಬೇರೇನಲ್ಲ.
ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ನಾಯ ಕತ್ವ ಬದಲಾವಣೆಯ ಆಂತರಿಕ ಸಂಘರ್ಷ ಬೇರೊಂದು ಸ್ವರೂಪ ಪಡೆದು, ಅವಧಿಗೆ ಮುನ್ನ ಚುನಾವಣೆ ಎದುರಾಗುವ ಸಾಧ್ಯತೆಗಳ ಹಿನ್ನೆಲೆಯಲ್ಲಿ ಈ ಹೇಳಿಕೆ ಹೊರಬಿದ್ದಿದೆ ಎಂಬ ವಿಶ್ಲೇಷಣೆಗಳೂ ಕೇಳಿಬಂದಿವೆ.
ಮುಂದಿನ ಸಿಎಂ ವಿಚಾರದಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವೆ ನಡೆಯುತ್ತಿರುವ ಮುಸುಕಿನ ಗುದ್ದಾಟದ ಹಿನ್ನೆಲೆಯಲ್ಲಿ ನೋಡುವುದಾದರೆ ಪಕ್ಷದಲ್ಲಿ ಪ್ರಭುತ್ವ ಸಾಧಿಸಲು ಡಿ.ಕೆ.ಶಿ. ಹೊರಟಿರುವುದು ಸ್ಪಷ್ಟ.
ಬಿಜೆಪಿಗೆ ಸೇರಿದವರಲ್ಲಿ ಕೆಲವರು ಕಾಂಗ್ರೆಸ್ ಸೇರುವ ಪ್ರಸ್ತಾವ ಮಂಡಿಸಿದ್ದು, ಸಿದ್ದರಾಮಯ್ಯ ನಿರಾಕರಿಸಿದ್ದಾರೆ. ಆದರೆ ಯಾರು ಬೇಕಾದರೂ ಬರಬಹುದು ಎಂಬ ಹೇಳಿರುವ ಡಿ.ಕೆ. ಶಿ. ಪಕ್ಷದ ಅಧ್ಯಕ್ಷರೇ ಸುಪ್ರೀಂ ಎಂದು ಸಾಧಿಸಿದ್ದಾರೆ.
ಹೈಕಮಾಂಡ್‌ನಲ್ಲಿ ಸೋನಿಯಾ ಗಾಂಧಿ, ಪ್ರಿಯಾಂಕಾ ವಾದ್ರಾ, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುಜೇìವಾಲಾ ಅವರು ಡಿ.ಕೆ. ಶಿವಕುಮಾರ್ ಪರ; ರಾಹುಲ್ ಗಾಂಧಿ ಹಾಗೂ ಎಐಸಿಸಿ ಸಂಘಟನ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರಿಗೆ ಸಿದ್ದರಾಮಯ್ಯ ಮೇಲೆ ಒಲವಿದೆ ಎನ್ನಲಾಗಿದೆ.
ಬಿಜೆಪಿಯಲ್ಲೂ ಚರ್ಚೆ
ಡಿ.ಕೆ. ಶಿವಕುಮಾರ್ ಹೇಳಿಕೆ ಬಿಜೆಪಿಯಲ್ಲೂ ಚರ್ಚೆಗೆ ಗ್ರಾಸವಾಗಿದೆ. ಯಾರು ಕಾಂಗ್ರೆಸ್ ಸೇರಲು ಮುಂದಾಗಿ ದ್ದಾರೆ, ಏಕೆ ಎಂಬೆಲ್ಲ ಪ್ರಶ್ನೆಗಳು ಹುಟ್ಟಿಕೊಂಡಿವೆ. ಜೆಡಿಎಸ್‌ನಲ್ಲೂ ಚಟುವಟಿಕೆ ಗರಿಗೆದರಿದ್ದು, ಇನ್ನು ಜೆಡಿಎಸ್ ಆಟ ಆರಂಭ ಎಂಬ ಎಚ್.ಡಿ.ಕೆ. ಹೇಳಿಕೆ ಬಗ್ಗೆಯೂ ನಾನಾ ವ್ಯಾಖ್ಯಾನಗಳು ಕೇಳಿಬರುತ್ತಿವೆ.
– ಎಸ್. ಲಕ್ಷ್ಮೀನಾರಾಯಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.