ಪ್ರಧಾನಿ ಮೋದಿಗೆ ಪತ್ರ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಮಹಿಳೆ
Team Udayavani, Jul 4, 2021, 7:00 AM IST
ಆಗ್ರಾ: ಉತ್ತರಪ್ರದೇಶದ ಆಗ್ರಾದ ವಿದ್ಯಾಪುರದಲ್ಲಿ ಶುಕ್ರವಾರ ಎರಡು ಮಕ್ಕಳ ತಾಯಿ ಮೋನಾ ದ್ವಿವೇದಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿಯವರಿಗೆ ಮೂರು ಪುಟಗಳ ಪತ್ರ ಬರೆದಿದ್ದಾರೆ!
ಅದರಲ್ಲಿ, ಈ ದೇಶದ ಮನೆಗಳೊಳಗೆ ಮಹಿಳೆಯರ ಮೇಲಾಗುವ ದೌರ್ಜನ್ಯ ಗಳನ್ನು ತಡೆಯುವಂತೆ ಮನವಿ ಮಾಡಿ ಕೊಂಡಿದ್ದಾರೆ. ಈ ಪತ್ರ ಎಲ್ಲ ಕಡೆ ಓಡಾಡುತ್ತ ಭಾರೀ ಚರ್ಚೆಗೆ ಕಾರಣವಾಗಿದೆ.
ಮೋನಾ ಎದೆಗೆ ಗುಂಡು ಹಾರಿಸಿಕೊಂಡ ಸದ್ದು ಕೇಳಿದ ತತ್ಕ್ಷಣ ಮನೆಯ ಇತರ ಸ್ತ್ರೀಯರು ಕೊಠಡಿಗೆ ಓಡಿದ್ದಾರೆ. ಆಸ್ಪತ್ರೆಗೆ ಒಯ್ಯುವ ದಾರಿಯಲ್ಲೇ ತೀರಿಕೊಂಡಿದ್ದಾರೆ.
ಪತ್ರದಲ್ಲೇನಿದೆ?: “ನಾನು ಬಡ ಕುಟುಂಬದಿಂದ ಬಂದವಳು. ಅಮ್ಮ ಬಾಲ್ಯದಲ್ಲೇ ತೀರಿಕೊಂಡಿದ್ದಾರೆ. ಅಪ್ಪ ಕುಡುಕ. ನನ್ನ ಗಂಡನ ಸಹೋದರರಾದ ಪಂಕಜ್, ಅಂಬುಜ್ ನಾನು ಬಡ ಕುಟುಂಬದಿಂದ ಬಂದವಳೆಂದು ಪದೇ ಪದೇ ದೈಹಿಕವಾಗಿ ಹಲ್ಲೆ ಮಾಡುತ್ತಿದ್ದರು. ಇವರೆಲ್ಲ ಉತ್ತರ ಪ್ರದೇಶದ ಆಡಳಿತ ಪಕ್ಷಕ್ಕೆ ಸೇರಿದವರು. ಅತ್ತೆ ಮಾವನೂ ನನಗೆ ಚಿತ್ರಹಿಂಸೆ ನೀಡಿದ್ದಾರೆ.
ಎಲ್ಲಿ ಪತಿ ನನ್ನನ್ನು ಮನೆಯಿಂದ ಹೊರದಬ್ಬುತ್ತಾರೋ ಎಂಬ ಹೆದರಿಕೆಯಿಂದ ಅವನ್ನೆಲ್ಲ ಸಹಿಸಿಕೊಂಡಿದ್ದೆ’ ಎಂದು ಮೋನಾ ಬರೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
Supreme Court: ಮೀಸಲಿಗಾಗಿ ಆಗುವ ಮತಾಂತರ ಸಂವಿಧಾನಕ್ಕೆ ಮೋಸ
Lokasabha: ಕರ್ನಾಟಕದ 869 ಸೇರಿ 58,929 ವಕ್ಫ್ ಆಸ್ತಿಗಳ ಅತಿಕ್ರಮ: ಕಿರಣ್ ರಿಜಿಜು
Jaipur: ಬರೋಬ್ಬರಿ 3,676 ಕಿ.ಮೀ. ಹಾರಿದ ಕೊಕ್ಕರೆ: ದಾಖಲೆ
EVM Issue: ಇವಿಎಂಗೂ ಮುನ್ನ ರಾಹುಲ್ರನ್ನು ಬದಲಿಸಿ ಕಾಂಗ್ರೆಸ್ಗೆ ಬಿಜೆಪಿ ಟಾಂಗ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್ ಅಮಾನತು
Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ
ICC World Rankings: ಟೆಸ್ಟ್ ಬೌಲಿಂಗ್ ರ್ಯಾಂಕಿಂಗ್ ಬುಮ್ರಾ ಮರಳಿ ನಂ.1
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.