ಜಿಗಳಿ ಕೆರೆ ಬಂಡು ತಾತ್ಕಾಲಿಕ ದುರಸ್ತಿ
Team Udayavani, Jul 4, 2021, 4:03 PM IST
ಕಲಘಟಗಿ: ಇತ್ತೀಚೆಗೆ ಸುರಿದ ನಿರಂತರ ಮಳೆಯಿಂದಾಗಿ ಒಡೆದು ಹೋಗಿದ್ದ ಹಟಕಿನಾಳ ಗ್ರಾಮದ ಜಿಗಳಿ ಕೆರೆಯ ಒಡ್ಡು ದುರಸ್ತಿ ಕಾರ್ಯ ಸಣ್ಣ ನೀರಾವರಿ ಇಲಾಖೆಯಿಂದ ಭರದಿಂದ ಸಾಗಿದೆ. ತಾತ್ಕಾಲಿಕವಾಗಿ ಉಸುಕು ತುಂಬಿದ ಚೀಲಗಳಿಂದ ದುರಸ್ತಿಗೊಳಿಸಲಾಗುತ್ತಿದೆ.
ಕೆರೆಯ ಸುತ್ತಮುತ್ತಲಿನ ಪ್ರದೇಶದಲ್ಲಿ ಕೆಲ ದಿನಗಳ ಹಿಂದೆ ನಿರಂತರವಾಗಿ ಸುರಿದ ಮಳೆಯಿಂದಾಗಿ ತಾಲೂಕಿನ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಜಿಗಳಿ ಕೆರೆ ಕಟ್ಟೆ ಒಡೆದು ಹೋಗಿ ಕೆರೆಯ ಒಡಲು ಬರಿದಾಗಿತ್ತು. ಅಲ್ಲದೇ ಕೆಳಭಾಗದ ರೈತರ ಬೆಳೆ ಹಾನಿಯಾಗಿತ್ತು. ಶಾಸಕ ಸಿ.ಎಂ. ನಿಂಬಣ್ಣವರ ಸ್ಥಳ ಪರಿಶೀಲನೆ ನಡೆಸಿ, ಕೆರೆ ಕಟ್ಟೆ ಪುನರ್ ನಿರ್ಮಾಣಕ್ಕೆ ಹೆಚ್ಚುವರಿ ಅನುದಾನ ಕಲ್ಪಿಸುವಂತೆ ಸರಕಾರಕ್ಕೆ ಮನವಿ ಸಲ್ಲಿಸಲು ಪ್ರಸ್ತಾವನೆ ತಯಾರಿಸುವಂತೆ ಸಣ್ಣ ನೀರಾವರಿ ಇಲಾಖೆ ಅಧಿ ಕಾರಿಗಳಿಗೆ ಸೂಚಿಸಿದ್ದರು. ಅಲ್ಲದೇ ಬೆಳೆ ಹಾನಿ ಕುರಿತು ಸಮರ್ಪಕ ಯಾದಿ ತಯಾರಿಸಿ ಪರಿಹಾರ ಒದಗಿಸುವಂತೆಯೂ ಕೃಷಿ ಹಾಗೂ ಕಂದಾಯ ಇಲಾಖೆ ಅಧಿ ಕಾರಿಗಳಿಗೂ ಸೂಚಿಸಿದ್ದರು.
ಸಣ್ಣ ನೀರಾವರಿ ಇಲಾಖೆ ಸುಪರ್ದಿಯಲ್ಲಿರುವ ಕೆರೆಯು 27 ಎಕರೆ ವಿಸ್ತೀರ್ಣ ವ್ಯಾಪ್ತಿ ಹೊಂದಿದ್ದು, 8.43 ಎಂಸಿಎಫ್‌ಟಿ ನೀರನ್ನು ಸಂಗ್ರಹಿಸುವ ಸಾಮರ್ಥ್ಯ ಹೊಂದಿದೆ. ಕೆರೆಯು 545 ಮೀಟರ್ ಉದ್ದದ ಬಂಡನ್ನು ಹೊಂದಿದೆ. ಈಗಾಗಲೇ ಮಳೆ ಪುನಃ ಆರಂಭಗೊಳ್ಳುವ ಮುನ್ಸೂಚನೆ ಇದ್ದು, ಕೆರೆಯ ಒಡಲು ಸಂಪೂರ್ಣ ತುಂಬಿದಲ್ಲಿ ನೂರಾರು ಎಕರೆ ಜಮೀನಿಗೆ ನೀರಾವರಿಗೆ ಸಹಕಾರಿಯಾಗಲೆಂದು ತಾತ್ಕಾಲಿಕ ದುರಸ್ತಿ ಕಾಮಗಾರಿ ಆರಂಭಿಸಲಾಗಿದೆ. ಸುಮಾರು 4ರಿಂದ 5 ಸಾವಿರ ಉಸುಕಿನ ಚೀಲಗಳನ್ನು ತುಂಬಿಸಿ ಕೆರೆಯ ಒಡ್ಡನ್ನು ದುರಸ್ತಿಗೊಳಿಸಲು ಮುಂದಾಗಲಾಗಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತ ಎಚ್.ಟಿ.ನಟೇಶ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
Punjalkatte: ಬೈಕ್ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!
Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು
Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ
MUST WATCH
ಹೊಸ ಸೇರ್ಪಡೆ
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.