ಬಿಟ್ಟಿ ಚಾಕರಿ ಪದ್ದತಿ ಹೋಗಲಾಡಿಸಿ
Team Udayavani, Jul 5, 2021, 8:57 PM IST
ಕಲಬುರಗಿ: ಉತ್ತರ ಕರ್ನಾಟಕದಲ್ಲಿ ಜೀತ ಸಮಸ್ಯೆ ಮತ್ತು ಬಿಟ್ಟಿ ಚಾಕರಿ ಹೆಚ್ಚಿದ್ದು, ಈ ಪದ್ಧತಿ ಹೋಗಲಾಡಿಸಲು ಪ್ರತಿಯೊಬ್ಬರು ಕೈಜೋಡಿಸಬೇಕೆಂದು ಜೀವಿಕ ಸಂಘಟನೆ ಸಂಸ್ಥಾಪಕ ಅಧ್ಯಕ್ಷ ಡಾ| ಕಿರಣ ಪ್ರಸಾದ ಹೇಳಿದರು. ನಗರದ ಐವಾನ್-ಇ-ಶಾಹಿ ರಸ್ತೆಯಲ್ಲಿರುವ ಗುಲ್ಲಾಬಾಡಿಯ ಅಂಬೇಡ್ಕರ್ ಸಮುದಾಯ ಭವನದಲ್ಲಿ ರವಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿನ ಬಿಟ್ಟಿ ಚಾಕರಿ ವಿಷಯದ ಕುರಿತು ಅವರು ಮಾತನಾಡಿದರು.
ಜೀತ ಮತ್ತು ಬಿಟ್ಟಿ ಚಾಕರಿ ಪದ್ಧತಿ ನಿರ್ಮೂಲನೆಗೆ ಜೀವಿಕ ಸಂಘಟನೆ ನಿರಂತರವಾಗಿ ಶ್ರಮಿಸುತ್ತಿದೆ. ಬಿಟ್ಟಿ ಚಾಕರಿಯಲ್ಲಿ ತೊಡಗಿರುವ ಕುಟಂಬಗಳನ್ನು ಪತ್ತೆ ಹಚ್ಚುವ ಕೆಲಸ ಮಾಡುತ್ತಿದೆ. ಜಿಲ್ಲೆಯಲ್ಲಿ ಕಳೆದ ಎಂಟು ದಿನಗಳಿಂದ ಎಲ್ಲ ತಾಲೂಕುಗಳಲ್ಲಿ ಸಮೀಕ್ಷೆ ನಡೆಸಿ, ಬಿಟ್ಟಿ ಚಾಕರಿ ಕುಟುಂಬಗಳನ್ನು ಗುರುತಿಸಲಾಗಿದೆ ಎಂದರು. ಗುರುತಿಸಿದಂತಹ ಬಿಟ್ಟಿ ಚಾಕರಿಯ ಕುಟುಂಬಗಳಿಗೆ ಸರ್ಕಾರ ಸೌಲಭ್ಯ ಕಲ್ಪಿಸಬೇಕು. ಜೀತ ಕಾನೂನಿನಡಿ ಜೀತದಾಳುಗಳಿಗೆ ಸಿಗುವಂತಹ ಎಲ್ಲ ಸೌಲಭ್ಯಗಳನ್ನು ಬಿಟ್ಟಿ ಚಾಕರಿ ಪದ್ಧತಿಯಲ್ಲಿ ತೊಡಗಿಕೊಂಡವರಿಗೂ ಒದಗಿಸಬೇಕು.
ಈ ನಿಟ್ಟಿನಲ್ಲಿ ಈಗಾಗಲೇ ಜಿಲ್ಲಾಡಳಿತಕ್ಕೆ ಸಂಘಟನೆ ವತಿಯಿಂದ ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದರು. ಡಿಎಂಎಸ್‌ಎಸ್ ಸಂಘಟನೆ ಅಧ್ಯಕ್ಷ ಲಿಂಗರಾಜ ತಾರಫೈಲ್ ಮಾತನಾಡಿ, ಮನುಷ್ಯ ತನ್ನ ಕೆಲಸದಿಂದ ಶ್ರೇಷ್ಠ ವಾಗುತ್ತಾನೆಯೇ ಹೊರತು ಹುಟ್ಟಿನಿಂದ ಅಲ್ಲ. ಆರೋಗ್ಯಕರ ಸಮಾಜ ಕಟ್ಟಲು ಜೀತ ಮತ್ತು ಬಿಟ್ಟಿ ಚಾಕರಿ ಪದ್ಧತಿ ಹೋಗಲಾಡಿಸುವುದು ಅವಶ್ಯವಾಗಿದೆ. ಈ ನಿಟ್ಟಿನಲ್ಲಿ ಜೀವಿಕ ಸಂಘಟನೆ ಮತ್ತು ಇದರ ಸಂಸ್ಥಾಪಕ ಡಾ| ಕಿರಣ ಪ್ರಸಾದ ಸೇವೆ ಶ್ಲಾಘನೀಯವಾಗಿದೆ ಎಂದರು. ಡಿಎಂಎಸ್‌ಎಸ್ ಸಂಘಟನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಬಸವರಾಜ ಜವಳಿ, ಜೀವಿಕ ಸಂಘಟನೆಯ ಜಿಲ್ಲಾ ಉಸ್ತುವಾರಿ ಸಂಚಾಲಕ ಡಾ| ನಾರಾಯಣಸ್ವಾಮಿ, ಮುಖಂಡರಾದ ರವಿಕುಮಾರ, ಅಮರಾವತಿ, ನರಸಿಂಹಮೂರ್ತಿ ಮತ್ತಿತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.