ಕೇರಳ-ಕರ್ನಾಟಕ ಗಡಿ ಭಾಗದಲ್ಲಿ ಸ್ಯಾಟಲೈಟ್ ಫೋನ್ ಬಳಕೆ ಬಗ್ಗೆ ನಿಗಾ : ಸಚಿವ ಬೊಮ್ಮಾಯಿ
Team Udayavani, Jul 6, 2021, 7:20 AM IST
ಬೆಂಗಳೂರು : ಕೇರಳ-ಕರ್ನಾಟಕ ಗಡಿ ಭಾಗದಲ್ಲಿ ಸ್ಯಾಟಲೈಟ್ ಫೋನ್ ಬಳಕೆ ಮೇಲೆ ನಿರಂತರವಾಗಿ ನಿಗಾ ಇರಿಸಿದ್ದೇವೆ ಎಂದು ಗೃಹ ಮತ್ತು ಕಾನೂನು ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇರಳ ಗಡಿ ಭಾಗದಲ್ಲಿ ಸ್ಯಾಟಲೈಟ್ ಫೋನ್‌ಗಳ ಬಳಕೆ ಆಗಾಗ ಕಂಡುಬರುತ್ತಿದೆ. ಈ ಬಗ್ಗೆ ಇಲಾಖೆ ನಿರಂತರ ನಿಗಾ ಇರಿಸಿದೆ. ಕೆಲವು ಪ್ರದೇಶಗಳಲ್ಲಿ, ವಿಶೇಷವಾಗಿ ಅರಣ್ಯ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿದೆ. ಅಕ್ರಮ ಅರಣ್ಯ ಸಂಪತ್ತು ಸಾಗಾಟವನ್ನು ಪತ್ತೆ ಮಾಡಿ ಕ್ರಮ ಕೈಗೊಂಡಿದ್ದೇವೆ ಎಂದರು. “ಉದಯವಾಣಿ’ ಸೋಮವಾರ ಈ ಸಂಬಂಧ ವಿಶೇಷ ವರದಿ ಪ್ರಕಟಿಸಿತ್ತು.
ಕೇರಳ-ಕರ್ನಾಟಕ ಗಡಿಭಾಗದಲ್ಲಿ ರಾಜ್ಯ ಗುಪ್ತಚರ, ಆಂತರಿಕ ಭದ್ರತ ದಳ (ಐಎಸ್ ಡಿ)ದ ಅಧಿಕಾರಿಗಳು ಬೀಡುಬಿಟ್ಟಿದ್ದು, ಸ್ಯಾಟ್‌ಲೈಟ್ ಫೋನ್ ಗಳು ಕಾರ್ಯಾಚರಣೆ ನಡೆಸಿದ ಕೆಲವು ಸ್ಥಳಗಳ ಲೋಕೇಶನ್ ಪತ್ತೆ ಹಚ್ಚಿದ್ದಾರೆ. ಕೇರಳದಿಂದ ಬಂದು ಗ್ರಾಮಾಂತರ ವ್ಯಾಪ್ತಿಯಲ್ಲಿ ಕೃಷಿ ಚಟುವಟಿಕೆಗಳಲ್ಲಿ ತೊಡಗಿರುವ ವ್ಯಕ್ತಿಗಳ ಮೇಲೆ ಹೆಚ್ಚಿನ ನಿಗಾ ಇರಿಸುತ್ತಿದ್ದು, ಅವರ ಪೂರ್ವಾಪರ ಮಾಹಿತಿ ಸಂಗ್ರಹಿಸುವಂತೆ ಹಿರಿಯ ಅಧಿಕಾರಿಗಳು ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ
Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.