ಮಹಾರಾಷ್ಟ್ರದಲ್ಲಿ ಮತ್ತೆ ಬಿಜೆಪಿ ಮತ್ತು ಶಿವಸೇನೆ ಮೈತ್ರಿ? ಠಾಕ್ರೆ ಬಣದ ಷರತ್ತುಗಳೇನು?
Team Udayavani, Jul 6, 2021, 8:10 AM IST
ನವದೆಹಲಿ/ಮುಂಬೈ: ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತು ಶಿವಸೇನೆ ಮತ್ತೂಮ್ಮೆ ಮೈತ್ರಿ ಮಾಡಿಕೊಳ್ಳುವ ವದಂತಿಗಳ ನಡುವೆಯೇ ಹೊಸ ಮಾಹಿತಿಯೊಂದು ಸೋಮವಾರ ಬಹಿರಂಗವಾಗಿದೆ.
ಸದ್ಯ ಮಹಾರಾಷ್ಟ್ರದಲ್ಲಿ ಪ್ರತಿಪಕ್ಷ ನಾಯಕ, ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಅವರನ್ನು ಕೇಂದ್ರ ಸಂಪುಟಕ್ಕೆ ಸಚಿವರನ್ನಾಗಿ ಮಾಡಬೇಕು. ಶಿವಸೇನೆ ಬಳಿಯೇ ಮುಖ್ಯಮಂತ್ರಿ ಹುದ್ದೆ ಇರಬೇಕು ಎಂಬ ಷರತ್ತನ್ನು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಬಿಜೆಪಿ ವರಿಷ್ಠರಿಗೆ ಹಾಕಿದ್ದರು. ಶೀಘ್ರದಲ್ಲಿಯೇ ಕೇಂದ್ರ ಸಚಿವ ಸಂಪುಟ ಪುನಾರಚನೆ ನಡೆಯಲಿದೆ ಎಂಬ ಚರ್ಚೆಗಳ ನಡುವೆಯೇ ಇಂಥ ಬೆಳವಣಿಗೆ ನಡೆದಿದೆ.
ಇದನ್ನೂ ಓದಿ:ಮುಂದಿನ ತಿಂಗಳಲ್ಲೇ ಕೋವಿಡ್ 3ನೇ ಅಲೆ : ಸೆಪ್ಟಂಬರ್ ನಲ್ಲಿ ಉತ್ತುಂಗಕ್ಕೆ : ವರದಿ
ಒಂದು ವೇಳೆ, ದೇವೇಂದ್ರ ಫಡ್ನವಿಸ್ ಕೇಂದ್ರ ಸಂಪುಟಕ್ಕೆ ಸೇರ್ಪಡೆ ಗೊಂಡರೆ, ಬಿಜೆಪಿಗೆ ಎರಡು ಉಪ ಮುಖ್ಯಮಂತ್ರಿ ಹುದ್ದೆಗಳನ್ನು ನೀಡಲಾಗುತ್ತದೆ ಎಂದೂ ಸಿಎಂ ಉದ್ಧವ್ ಬಿಜೆಪಿ ವರಿಷ್ಠರಿಗೆ ಮನವರಿಕೆ ಮಾಡಿದ್ದಾರೆ ಎಂದು ಮೂಲಗಳನ್ನು ಉಲ್ಲೇಖೀಸಿ “ಎನ್ ಡಿಟಿವಿ’ ವರದಿ ಮಾಡಿದೆ. ಆದರೆ, ಬಿಜೆಪಿ ಈ ಅಂಶಗಳನ್ನೆಲ್ಲ ನಿರಾಕರಿಸಿದೆ. ಜತೆಗೆ ಫಡ್ನವಿಸ್ ಕಾರಣಕ್ಕಾಗಿ ಕೇಂದ್ರ ಸಂಪುಟ ಪುನಾರಚನೆ ವಿಳಂಬವಾಗುತ್ತಿಲ್ಲ. ಮಹಾರಾಷ್ಟ್ರದಲ್ಲಿ ಬಿಜೆಪಿಗೇ ಮುಖ್ಯಮಂತ್ರಿ ಸ್ಥಾನ ಸಿಗಬೇಕು ಎಂಬ ನಿಲುವಿನಲ್ಲಿ ಬದಲಾವಣೆ ಇಲ್ಲ ಎಂದು ಪಕ್ಷದ ಮುಖಂಡರು ಹೇಳಿದ್ದಾರೆ.
ಆಮೀರ್-ಕಿರಣ್ ಇದ್ದಂತೆ: ಬಿಜೆಪಿ ಮತ್ತು ಶಿವಸೇನೆ ನಡುವಿನ ಸಂಬಂಧ ಇತ್ತೀಚೆಗೆ ವಿವಾಹ ವಿಚ್ಛೇದನ ಪ್ರಕಟಿಸಿದ ಬಾಲಿವುಡ್ ನಟ ಆಮೀರ್ ಖಾನ್- ಕಿರಣ್ ರಾವ್ ನಡುವಿನ ಸಂಬಂಧ ಇದ್ದಂತೆ ಎಂದು ರಾಜ್ಯಸಭಾ ಸದಸ್ಯ ಸಂಜಯ ರಾವುತ್ ಬಣ್ಣಿಸಿದ್ದಾರೆ. ಎರಡೂ ಪಕ್ಷಗಳ ನಡುವಿನ ಬಾಂಧವ್ಯ ಭಾರತ ಪಾಕಿಸ್ತಾನ ನಡುವಿನಂತೆ ಅಲ್ಲ. ಪಕ್ಷಗಳ ನಡುವೆ ಭಿನ್ನಾಭಿಪ್ರಾಯ ಇದ್ದರೂ, ಮಿತ್ರತ್ವ ಮುಂದುವರಿದೇ ಇರುತ್ತದೆ ಎಂದುಹೇಳಿದ್ದಾರೆ.
ಅಂಗೀಕಾರ: ಇತರ ಹಿಂದುಳಿದ ವರ್ಗ (ಒಬಿಸಿ)ಕ್ಕೆ ವ್ಯವಸ್ಥೆಗಳನ್ನು ಕಲ್ಪಿಸಲು ಮಹಾರಾಷ್ಟ್ರ ರಾಜ್ಯ ಹಿಂದುಳಿದ ವರ್ಗಕ್ಕೆ ಅನುಕೂಲ ವಾಗುವಂತೆ 2011ರ ಜನಗಣತಿಯ ವಿವರಗಳನ್ನು ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡುವ ನಿರ್ಣಯವನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai Coast: ಗೇಟ್‌ವೇ ಆಫ್ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!
Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್ ಭೇಟಿ: 21ರಿಂದ ಮೋದಿ ಪ್ರವಾಸ
GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?
Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
MUST WATCH
ಹೊಸ ಸೇರ್ಪಡೆ
Mumbai Coast: ಗೇಟ್‌ವೇ ಆಫ್ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!
Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್ ಭೇಟಿ: 21ರಿಂದ ಮೋದಿ ಪ್ರವಾಸ
Whale: ಅಂಬರ್ ಗ್ರೀಸ್ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.