ಅನುದಾನ ನೀಡುವಲ್ಲಿ ಸರ್ಕಾರ ತಾರತಮ್ಯ: ರಂಗನಾಥ್‌


Team Udayavani, Jul 6, 2021, 2:55 PM IST

ಅನುದಾನ ನೀಡುವಲ್ಲಿ  ಸರ್ಕಾರ ತಾರತಮ್ಯ: ರಂಗನಾಥ್‌

ಕುಣಿಗಲ್‌: ರಾಜ್ಯ ಸರ್ಕಾರ ವಿಪಕ್ಷಗಳ ಶಾಸಕರಿಗೆ ಅನುದಾನ ನೀಡುವಲ್ಲಿ ಮಲತಾಯಿ ಧೋರಣೆಅನುಸರಿಸುತ್ತಿದೆ ಎಂದು ಶಾಸಕ ಡಾ.ಎಚ್‌.ಡಿ. ರಂಗನಾಥ್‌ ಗಂಭೀರ ಆರೋಪ ಮಾಡಿದರು.

ಲೋಕೋಪಯೋಗಿ ಇಲಾಖೆಯಿಂದ ಹಮ್ಮಿಕೊಂಡಿದ್ದ 2.20 ಕೋಟಿ ರೂ. ವೆಚದ ‌c ತಾಲೂಕಿನ ಕಸಬಾ ಹೋಬಳಿ ಕೆಂಕೆರೆ ಗ್ರಾಮದಹಳೇಯ ರಾಷ್ಟ್ರೀಯ ಹೆದ್ದಾರಿ 48 ರ ಬಿ.ಎಂ.ರಸ್ತೆಯಿಂದ ದೊಂಬರಹಟ್ಟಿ ಕ್ರಾಸ್‌ವರೆಗಿನ ರಸ್ತೆಡಾಂಬರೀಕರಣ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ಈವರೆಗೂ ಹಣ ಬಿಡುಗಡೆ ಮಾಡಿಲ್ಲ: ಸರ್ಕಾರ ಬಿಜೆಪಿ ಶಾಸಕರು ಇರುವ ಕ್ಷೇತ್ರಗಳಿಗೆ ಹೆಚ್ಚು ಅನುದಾನ ನೀಡುತ್ತಿದೆ. ಆದರೆ, ವಿಪಕ್ಷದಶಾಸಕರಿರುವ ಕ್ಷೇತ್ರಗಳಿಗೆ ಅನುದಾನ ನೀಡುವಲ್ಲಿತಾರತಮ್ಯ ಮಾಡುತ್ತಿದೆ. ಸಮ್ಮಿಶ್ರ ಸರ್ಕಾರದಲ್ಲಿ ತಾಲೂಕಿನ ರಸ್ತೆ, ಇತರೆ ಕಾಮಗಾರಿಗಳಿಗೆ ಮಂಜೂರಾಗಿದ್ದ 100 ಕೋಟಿ ರೂ. ಹಣವನ್ನು ಸರ್ಕಾರ ತಡೆ ಹಿಡಿದಿದೆ. ಇದರಿಂದ ಕ್ಷೇತ್ರದ ರಸ್ತೆಅಭಿವೃದ್ಧಿ ಕುಂಠಿತಗೊಂಡಿದೆ. ಈ ಸಂಬಂಧ 11 ಬಾರಿ ಲೋಕೋಪಯೋಗಿ ಸಚಿವರು, ಒಂದು ಬಾರಿಸಿಎಂ ಯಡಿಯೂರಪ್ಪ ಅವರನ್ನು ಬೇಟಿಯಾಗಿ ತಡೆಹಿಡಿದಿರುವ ಹಣವನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಲಾಗಿತ್ತು. ಆದರೆ, ಈವರೆಗೂ ಹಣ ಬಿಡುಗಡೆ ಮಾಡಿಲ್ಲ ಎಂದರು.

ತಾಲೂಕಿನಲ್ಲಿ ಶೇ.75 ಭಾಗ ಇದ್ದ ಮಣ್ಣಿನ ರಸ್ತೆಯನ್ನು300 ಕೋಟಿರೂ.ವೆಚ್ಚದಲ್ಲಿರಸ್ತೆಅಭಿವೃದ್ಧಿ ಮಾಡಲಾಗಿದೆ. ಇನ್ನೂ ಶೇ. 30 ರಷ್ಟು ರಸ್ತೆ ಆಗಬೇಕಾಗಿದೆ ಎಂದರು.

ಕೋವಿಡ್‌ ಪರಿಹಾರ ನಿಧಿ ಗೊಂದಲ: ಕೋವಿಡ್‌ ಸೋಂಕಿನಿಂದ ದುಡಿಯುವ ಕೈ, ವಯಸ್ಕರ ವ್ಯಕ್ತಿ ಮೃತಪಟ್ಟು, ಬಿಪಿಎಲ್‌ ಕಾರ್ಡ್‌ ಹೊಂದಿರುವ ಕುಟುಂಬಗಳಿಗೆ 1ಲಕ್ಷ ರೂ. ಪರಿಹಾರವನ್ನು ರಾಜ್ಯ ಸರ್ಕಾರ ಷೋಷಣೆ ಮಾಡಿರುವುದು ಸರಿಯಲ್ಲ. ಕೋವಿಡ್‌ನಿಂದ ಮೃತಪಡುವುದು ಸ್ವಾಭಾವಿಕಸಾವಲ್ಲ. ಅದು ಅಪಘಾತ. ಹೀಗಾಗಿ ಸರ್ಕಾರದ ನಿರ್ಧಾರ ಗೊಂದಲದಿಂದ ಕೂಡಿದೆ. ಡೆತ್‌ ಅಡಿಟ್‌ಸರಿಯಾಗಿ ಮಾಡಿಲ್ಲ. ಇದರಿಂದ ಬಹುತೇಕ ಕುಟುಂಬಗಳು ಸರ್ಕಾರದ ಪರಿಹಾರ ಹಣದಿಂದ ವಂಚಿತವಾಗಿವೆ. ಈ ಸಂಬಂಧ ಅಧಿವೇಶನದಲ್ಲಿ ವಿಷಯ ಪ್ರಸ್ತಾಪಿಸುವುದಾಗಿ ತಿಳಿಸಿದರು.

ಜು.8ರಂದು ಡಿಕೆಶಿ ಭೇಟಿ: ಜು.8ರಂದು ತಾಲೂಕಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಆಗಮಿಸಿ ಕೋವಿಡ್‌ನಿಂದ ಮೃತಪಟ್ಟ ಕುಟುಂಬಗಳ ಮನೆಗಳಿಗೆ ಭೇಟಿ ನೀಡಿ ಸಾಂತ್ವನಹೇಳಿ ನೆರವು ನೀಡಲಿದ್ದಾರೆ. ಅಂದು ಬೆಳಗ್ಗೆ ಕುಣಿಗಲ್‌ ಪಟ್ಟಣ, ಬಳಿಕ ಹುಲಿಯೂರುದುರ್ಗ,ಅಮೃತೂರು, ಎಡಿಯೂರಿಗೆ ಭೇಟಿ ನೀಡಲಿದ್ದಾರೆ.ಡಿಕೆಎಸ್‌ ಚಾರಿಟಬಲ್‌ ಟ್ರಸ್ಟ್‌ನಿಂದ 2 ಸಾವಿರಉಚಿತ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಹೀಗಾಗಿ ನಾಗರಿಕರು ಸದ್ಬಳಕೆ ಮಾಡಿಕೊಳ್ಳಬೇಕೆಂದರು.

ಗ್ರಾಪಂ ಅಧ್ಯಕ್ಷೆ ಚಂದ್ರಪ್ರಭಾ, ಪಿಡಿಒ ವತ್ಸಲಾ, ಸದಸ್ಯ ದೇವರಾಜ್‌, ಮಾಜಿ ಅಧ್ಯಕ್ಷ ಅನಂತರಾಮು , ಲೋಕೋಪಯೋಗಿ ಇಲಾಖೆ ಎಇಇ ಗುರುಸಿದ್ದಪ್ಪ, ತಾಪಂ ಮಾಜಿ ಸದಸ್ಯ ಗಂಗರಂಗಯ್ಯ, ಪುರಸಭಾ ಮಾಜಿ ಸದಸ್ಯರಾದ ಪಾಪಣ್ಣ, ಶಂಕರ್‌, ಮುಖಂಡ ಪ್ರಕಾಶ್‌, ಬೇಗೂರು ನಾರಾಯಣ್‌ ಇದ್ದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Congress: ಹೈಕಮಾಂಡ್‌ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್‌.ರಾಜಣ್ಣ

14-madhugiri

Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

9

Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ

10

Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿ‌ಲ್ಲಿಂಗ್; ಓರ್ವ ಆರೋಪಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.