ಸಂಕಷ್ಟದಲ್ಲಿ ಗೋವಾ ಕನ್ನಡ ಶಾಲೆ SSLC ವಿದ್ಯಾರ್ಥಿಗಳು
Team Udayavani, Jul 6, 2021, 9:04 PM IST
ಪಣಜಿ: ಕರ್ನಾಟಕದಲ್ಲಿ ಜುಲೈ 19 ಮತ್ತು 22 ರಂದು ಹತ್ತನೇಯ ತರಗತಿ ಪರೀಕ್ಷೆ ನಿಗಧಿಯಾಗಿದ್ದು, ಗೋವಾದಲ್ಲಿ ಕನ್ನಡ ಶಾಲೆಯಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಕಾರವಾರಕ್ಕೆ ಪರೀಕ್ಷೆಗೆ ಆಗಮಿಸಬೇಕಾಗಿದೆ, ಆದರೆ ಈ ವಿದ್ಯಾರ್ಥಿಗಳು ಕಾರವಾರಕ್ಕೆ ಪರೀಕ್ಷೆ ಬರೆಯಲು ಆಗಮಿಸಲು ಎರಡು ಬಾರಿ ಕೋವಿಡ್ ತಪಾಸಣೆ ಮಾಡಿಸಿಕೊಳ್ಳುವುದು ಅನಿವಾರ್ಯ ಎಂಬಂತಾಗಿದೆ.
ಗೋವಾದ ಬಿರ್ಲಾ ಮತ್ತು ಬೈನಾ ಕನ್ನಡ ಶಾಲೆಯಲ್ಲಿ ಹತ್ತನೇಯ ತರಗತಿಯಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಪ್ರತಿ ವರ್ಷ ಕಾರವಾರದ ಉಳಗಾಕ್ಕೆ ಆಗಮಿಸಿ ಪರೀಕ್ಷೆ ಬರೆಯುತ್ತಾರೆ. ಆದರೆ ಕಳೆದ ವರ್ಷ ಕರೋನಾ ಭೀತಿಯ ಹಿನ್ನೆಲೆಯಲ್ಲಿ ಗೋವಾದಲ್ಲಿ ಹತ್ತನೇಯ ತರಗತಿಯಲ್ಲಿ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಗೋವಾದಲ್ಲಿಯೇ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿತ್ತು. ಆದರೆ ಪ್ರಸಕ್ತ ವರ್ಷ ಪರೀಕ್ಷೆಗೆ ಕುಳಿತ ಎಲ್ಲ ವಿದ್ಯಾರ್ಥಿಗಳನ್ನೂ ಪಾಸ್ ಮಾಡಲಾಗುವುದು ಎಂದು ಕರ್ನಾಟಕ ಸರ್ಕಾರ ಹೇಳಿರುವುದರಿಂದ ಪರೀಕ್ಷೆ ತಪ್ಪಿಸಿದರೆ ಫೇಲ್ ಆಗುವ ಭೀತಿ ವಿದ್ಯಾರ್ಥಿಗಳಿಗೆ ಎದುರಾಗಿದೆ.
ಗೋವಾ ವಾಸ್ಕೊದ ಬಿರ್ಲಾ ಕನ್ನಡ ಮಾಧ್ಯಮ ಶಾಲೆಯಲ್ಲಿ 44 ಜನ ವಿದ್ಯಾರ್ಥಿಗಳು ಮತ್ತು ಬೈನಾದ ಕನ್ನಡ ಮಾಧ್ಯಮ ಶಾಲೆಯಲ್ಲಿ 25 ಜನ ವಿದ್ಯಾರ್ಥಿಗಳು ಹತ್ತನೇಯ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಈ ವಿದ್ಯಾರ್ಥಿಗಳು ಕರ್ನಾಟಕದ ಕಾರವಾರಕ್ಕೆ ಪರೀಕ್ಷೆ ಬರೆಯಲು ತೆರಳಬೇಕಾದರೆ ಕೋವಿಡ್ ನೆಗೆಟಿವ್ ಪ್ರಮಾಣಪತ್ರ ಹೊಂದಿರುವುದು ಖಡ್ಡಾಯವಾಗಿದೆ. ಒಂದು ಬಾರಿ ಕೋವಿಡ್ ತಪಾಸಣೆ ಮಾಡಿಸಿಕೊಂಡರೆ ಅದು ಕೇವಲ 72 ಗಂಟೆ ಮಾತ್ರ ವ್ಯಾಲಿಡ್ ಆಗಿರುವುದರಿಂದ ಗೋವಾ ಕನ್ನಡ ಮಾಧ್ಯಮ ವಿದ್ಯಾರ್ಥಿಗಳು ಜುಲೈ 19 ಮತ್ತು 22 ರಂದು ಹೀಗೆ ಎರಡು ಬಾರಿ ಕೋವಿಡ್ ತಪಾಸಣೆಗೆ ಒಳಗಾಗುವುದು ಅನಿವಾರ್ಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.