ಇಂದು ಸಂಜೆ ಕೇಂದ್ರದ ಮೋದಿ ಸಚಿವ ಸಂಪುಟ ಪುನಾರಚನೆ : ಯಾರಿಗೆ ಒಲಿದೀತು ಅದೃಷ್ಟ?
Team Udayavani, Jul 7, 2021, 7:30 AM IST
ಹೊಸದಿಲ್ಲಿ/ ಬೆಂಗಳೂರು: ಪ್ರಧಾನಿ ಮೋದಿ ಬುಧವಾರ ಸಚಿವ ಸಂಪುಟವನ್ನು ಪುನಾರಚಿಸಲಿದ್ದು, ರಾಜ್ಯದಿಂದ ಇಬ್ಬರಿಗೆ ಸ್ಥಾನ ಸಿಗುವ ಸಾಧ್ಯತೆಗಳಿವೆ. ಹಿಂದುಳಿದ ವರ್ಗದವರು, ಯುವ ತಂತ್ರಜ್ಞರು, ಮಹಿಳೆಯರಿಗೆ ಹೆಚ್ಚಿನ ಸ್ಥಾನ ಸಿಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ರಾಜ್ಯದಿಂದ ಸಚಿವರಾಗಿದ್ದ ಸುರೇಶ್ ಅಂಗಡಿ ನಿಧನ ಹೊಂದಿ ತೆರವಾಗಿದ್ದ ಸ್ಥಾನದ ಜತೆಗೆ ಇನ್ನೊಂದು ಸ್ಥಾನ ಸಿಗಲಿದೆ ಎಂದು ಮೂಲಗಳು ತಿಳಿಸಿವೆ.
ಸದ್ಯ 28 ಸಚಿವ ಸ್ಥಾನಗಳು ಖಾಲಿ ಇದ್ದು, ಇದರಲ್ಲಿ 20ಕ್ಕೂ ಹೆಚ್ಚು ಸ್ಥಾನಗಳನ್ನು ತುಂಬುವ ಸಾಧ್ಯತೆ ಇದೆ. ಸಚಿವ ತಾವರ್‌ಚಂದ್ ಗೆಹಲೋಟ್ ಅವರನ್ನು ರಾಜ್ಯಪಾಲರನ್ನಾಗಿ ಕರ್ನಾಟಕಕ್ಕೆ ಕಳುಹಿಸಲಾಗಿದ್ದು, ಈ ಸ್ಥಾನವೂ ಖಾಲಿಯಾಗಿದೆ.
ಮುಂದಿನ ವರ್ಷ ಉತ್ತರ ಪ್ರದೇಶ, ಉತ್ತರಾಖಂಡ, ಗುಜರಾತ್, ಗೋವಾ, ಮಣಿಪುರ, ಪಂಜಾಬ್ ಮತ್ತು ಹಿಮಾಚಲ ಪ್ರದೇಶದ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ರಾಜ್ಯಗಳಿಗೆ ಆದ್ಯತೆ ನೀಡುವ ಸಾಧ್ಯತೆಗಳಿವೆ. ಸರಿಯಾಗಿ ನಿರ್ವಹಣೆ ತೋರದ 6ರಿಂದ 7 ಸಚಿವರನ್ನು ಕೈಬಿಡುವ ಸಾಧ್ಯತೆಯೂ ಇದೆ.
ಇಂದು ಸಂಜೆ ಪ್ರಮಾಣ ವಚನ?
ಬುಧವಾರ ಸಂಜೆ 5.30ರಿಂದ 6ರ ನಡುವೆ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆಯುವ ಸಾಧ್ಯತೆ ಇದೆ. ಪ್ರಮುಖವಾಗಿ ಮಧ್ಯಪ್ರದೇಶದ ಜ್ಯೋತಿರಾದಿತ್ಯ ಸಿಂಧಿಯಾ, ಅಸ್ಸಾಂನ ಮಾಜಿ ಸಿಎಂ ಸರ್ಬಾನಂದ ಸೋನಾವಾಲ್, ಬಿಹಾರದ ಮಾಜಿ ಡಿಸಿಎಂ ಸುಶೀಲ್ ಮೋದಿ, ಮಹಾರಾಷ್ಟ್ರದ ನಾರಾಯಣ ರಾಣೆ, ಉತ್ತರ ಪ್ರದೇಶದ ಅನುಪ್ರಿಯಾ ಪಟೇಲ್ ಸಹಿತ 20ಕ್ಕೂ ಹೆಚ್ಚು ಮಂದಿಗೆ ಮೋದಿಸಂಪುಟದಲ್ಲಿ ಸ್ಥಾನ ಸಿಗುವ ಸಾಧ್ಯತೆಗಳಿವೆ.
ರಾಜ್ಯಕ್ಕೆ ಎರಡು ಸ್ಥಾನ?
ಕರ್ನಾಟಕದ 25 ಸಂಸದರಿದ್ದು, ಪ್ರಹ್ಲಾದ್ ಜೋಷಿ ಮತ್ತು ಸದಾನಂದ ಗೌಡ ಸಚಿವರಾಗಿದ್ದಾರೆ. ಸುರೇಶ್ ಅಂಗಡಿ ನಿಧನದಿಂದ ಖಾಲಿಯಾಗಿರುವ ಸ್ಥಾನವನ್ನು ರಾಜ್ಯದ ಸಂಸದರಿಗೆ ನೀಡುತ್ತಾರೆ ಎಂಬ ವಿಶ್ವಾಸವಿದೆ. ಇನ್ನೂ 2 ಸ್ಥಾನ ರಾಜ್ಯಕ್ಕೆ ದೊರೆಯಬಹುದು ಎಂಬ ಮಾತು ಕೇಳಿ ಬರುತ್ತಿದೆ. ಮೂವರಿಗೆ ಅವಕಾಶ ಕಲ್ಪಿಸಿದರೆ ಹಾಲಿ ಇರುವ ಹಿರಿಯ ಸಚಿವರಲ್ಲಿ ಯಾರನ್ನಾದರೂ ಕೈಬಿಡುವ ಸಾಧ್ಯತೆಯಿದೆ.
ಇವರು ಸಂಭಾವ್ಯರು
ಬಿ.ವೈ. ರಾಘವೇಂದ್ರ, ಶಿವಕುಮಾರ ಉದಾಸಿ, ಭಗವಂತ ಖೂಬಾ, ಎ. ನಾರಾಯಣಸ್ವಾಮಿ, ರಮೇಶ್ ಜಿಗಜಿಣಗಿ , ಉಮೇಶ್ ಜಾಧವ್ , ಶೋಭಾ ಕರಂದ್ಲಾಜೆ, ಪ್ರತಾಪ್‌ಸಿಂಹ, ಪಿ.ಸಿ.ಮೋಹನ್.
ದಿಲ್ಲಿಗೆ ಬರುವಂತೆ ನನಗೆ ಬುಲಾವ್ ಬಂದಿದೆ. ಆದರೆ ಸಂಪುಟ ವಿಸ್ತರಣೆ, ಸಚಿವ ಸ್ಥಾನದ ಯಾವ ಮಾಹಿತಿಯನ್ನೂ ನೀಡಿಲ್ಲ.
-ರಮೇಶ್ ಜಿಗಜಿಣಗಿ, ಸಂಸದ
ಕೇಂದ್ರ ಸಂಪುಟ ಸೇರುವ ಬಗ್ಗೆ ಅಧಿಕೃತ ಮಾಹಿತಿ ಇಲ್ಲ. ಪಕ್ಷದ ಸೂಚನೆ ಮೇರೆಗೆ ದಿಲ್ಲಿಗೆ ತೆರಳುತ್ತಿದ್ದೇನೆ.
-ಎ. ನಾರಾಯಣಸ್ವಾಮಿ, ಸಂಸದ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ
RSS ಮುಖ್ಯಸ್ಥರಿಗೆ ಹಿಂದೂಗಳ ನೋವು ಗೊತ್ತಾಗುತ್ತಿಲ್ಲ: ಶ್ರೀ
Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!
Mourning: ಮನಮೋಹನ್ ಸಿಂಗ್ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ
Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್ ಆಸ್ಪತ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.