ನವಜಾತ ಶಿಶುವಿಗೆ ಆ್ಯಂಟಿಬಯಾಟಿಕ್‌ ನೀಡುವುದು ಎಷ್ಟು ಸುರಕ್ಷಿತ ?

ಔಷಧ ತೆಗೆದುಕೊಳ್ಳಬೇಕು ಮತ್ತು ಸರಿಯಾದ ಸಮಯಕ್ಕೆ ಮಕ್ಕಳಿಗೆ ಔಷಧ ನೀಡುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು.

Team Udayavani, Jul 8, 2021, 11:50 AM IST

ನವಜಾತ ಶಿಶುವಿಗೆ ಆ್ಯಂಟಿಬಯಾಟಿಕ್‌ ನೀಡುವುದು ಎಷ್ಟು ಸುರಕ್ಷಿತ ?

ಚಿಕ್ಕ ಮಕ್ಕಳ ಪಾಲನೆ, ಪೋಷಣೆ ಮಾಡುವುದು ಎಂದರೆ ಸುಲಭದ ಮಾತಲ್ಲ. ಅದರಲ್ಲಿಯೂ ನವ ಜಾತ ಶಿಶುಗಳ ಪಾಲನೆ ತುಂಬಾ ಸೂಕ್ಷ್ಮವಾದದ್ದು. ಎಷ್ಟು ಜಾಗ್ರತೆ ವಹಿಸಿದರೂ ಮಕ್ಕಳ ಆರೋಗ್ಯ ರಕ್ಷಣೆ ತ್ರಾಸದಾಯಕವೇ ಸರಿ. ಇಂತಹ ಸಮಸ್ಯೆಗಳನ್ನು ದೂರ ಮಾಡಲು ಇತ್ತೀಚೆಗೆ ಕಂದಮ್ಮಗಳಿಗೆ ಆ್ಯಂಟಿಬಯಾಟಿಕ್‌ ನೀಡುವುದು ಹೆತ್ತವರಿಗೆ ರೂಢಿಯಾಗುತ್ತಿದೆ. ಮಗುವಿಗೆ ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳು ಕಾಡಿದರೂ ಹೆತ್ತವರು ಆ್ಯಂಟಿಬಯಾಟಿಕ್‌ಗೆ ಶರಣಾಗುತ್ತಿದ್ದಾರೆ. ಆದರೆ ನವಜಾತ ಶಿಶು (ಹುಟ್ಟಿದ 15 ದಿನಗಳ ಒಳಗೆ)ಗಳಿಗೆ ಇಂತಹ ಆ್ಯಂಟಿಬಯಾಟಿಕ್ಸ್‌ ನೀಡುವುದರಿಂದ ಅವುಗಳ ಆರೋಗ್ಯದ ಮೇಲಾಗುವ ದುಷ್ಪರಿಣಾಮಗಳ ಬಗೆಗಿನ ಅರಿವಿನ ಕೊರತೆ ಹೆತ್ತವರನ್ನು ಕಾಡುತ್ತಿದೆ. ಇದೀಗ ಇಸ್ರೇಲಿನ ವಿಜ್ಞಾನಿಗಳು ನಡೆಸಿರುವ ಸಂಶೋಧನೆಯಲ್ಲಿ ಜನಿಸಿದ 15 ದಿನಗಳ ಒಳಗಾಗಿ ಮಗುವಿಗೆ ಯಾವುದೇ ಆ್ಯಂಟಿಬಯಾಟಿಕ್‌ ನೀಡಿದಲ್ಲಿ ಅದರ ಬೆಳವಣಿಗೆ 6 ವರ್ಷಗಳ ವರೆಗೆ ನಿಧಾನವಾಗಬಹುದು ಎಂಬುದು ಸಾಬೀತಾಗಿದೆ.

ಯಾವ ರೀತಿಯ ಪರಿಣಾಮ?
ನವಜಾತ ಶಿಶುಗಳಿಗೆ ಆ್ಯಂಟಿ ಬಯಾಟಿಕ್‌ ನೀಡುವುದರಿಂದ ಶಿಶುಗಳ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ಲಭಿಸಬಹು ದಾಗಿದೆಯಾದರೂ ಇದು ಮಕ್ಕಳ ಬೆಳವಣಿಗೆಯನ್ನು ಕುಂಠಿತಗೊಳಿಸುತ್ತದೆ. ತೂಕ ಮತ್ತು ಎತ್ತರದಲ್ಲಿ ಇನ್ನಿತರ ಮಕ್ಕಳಿಗೆ ಹೋಲಿಸಿದರೆ ಕಡಿಮೆ ಇರಬಹುದು. ಈ ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಕುಂಠಿತಗೊಂಡು ಯಾವುದೇ ತೆರನಾದ ಸೋಂಕು ತಗಲುವ ಸಾಧ್ಯತೆ ಅಧಿಕವಾಗಿರುತ್ತದೆ.

ಜನನವಾದ ಆರಂಭಿಕ ವಾರದಲ್ಲಿ ಬ್ಯಾಕ್ಟೀರಿಯಾ ಗಳಿಂದ ರಕ್ಷಿಸಲು ಈ ಆ್ಯಂಟಿಬಯಾಟಿಕ್ಸ್‌ ನೀಡಲಾಗುತ್ತದೆ. ಇದು ದೇಹಕ್ಕೆ ಅನುಕೂಲವಾಗುವ ಬ್ಯಾಕ್ಟೀರಿಯಾಗಳ ಮೇಲೂ ಪರಿಣಾಮ ಬೀರುತ್ತವೆ. ಬ್ಯಾಕ್ಟೀರಿಯಾಗಳಿಂದ ಉಂಟಾಗುವ ಸೋಂಕುಗಳ ಮೇಲೆ ಹೆಚ್ಚು ಹೆಚ್ಚು ಆ್ಯಂಟಿಬಯಾಟಿಕ್‌ಗಳನ್ನು ಬಳಸುವುದರಿಂದ ಅಂತಹ ಬ್ಯಾಕ್ಟೀರಿಯಾಗಳು ವಿಶೇಷ ರೀತಿಯ ರೋಗನಿರೋಧಕ ಶಕ್ತಿಯನ್ನು ಬೆಳೆಸಿಕೊಳ್ಳುತ್ತವೆ. ಹೀಗಾದಾಗ ಔಷಧ ಅವುಗಳ ಮೇಲೆ ನಿಷ್ಪರಿಣಾಮಕಾರಿಯಾಗುತ್ತದೆ. ಇದನ್ನು ಆ್ಯಂಟಿಮೈಕ್ರೊಬಿಯಲ್‌ ರೆಸಿಸ್ಟೆನ್ಸ್‌ (ಎಎಂಆರ್‌) ಎಂದು ಕರೆಯಲಾಗುತ್ತದೆ. ಈ ಔಷಧದ ವಿರುದ್ಧ ಬ್ಯಾಕ್ಟೀರಿಯಾಗಳು ತಮ್ಮದೇ ಆದ ರೋಗ ನಿರೋಧಕ ಶಕ್ತಿಯನ್ನು ಅಭಿವೃದ್ಧಿ ಪಡಿಸುತ್ತವೆ. ಇತ್ತೀಚಿನ ದಿನಗಳಲ್ಲಿ ಜಗತ್ತಿನಲ್ಲಿ ಇಂತಹ ಪ್ರಕರಣಗಳು ಹೆಚ್ಚಾಗಿದ್ದು ಅತಂಕಕ್ಕೆ ಕಾರಣವಾಗಿವೆ.

ಆ್ಯಂಟಿಬಯಾಟಿಕ್‌ ಬಳಕೆಯ ತಡೆಗಟ್ಟುವಿಕೆ ಹೇಗೆ?
– ಸಣ್ಣ ಮಕ್ಕಳಿಗೆ ಕೆಮ್ಮು, ಶೀತ ಅಥವಾ ತಲೆನೋವು ಕಾಣಿಸಿಕೊಂಡ ಮೊದಲ ದಿನವೇ ಔಷಧ ನೀಡುವುದನ್ನು ಕಡಿಮೆ ಮಾಡಿ.
– ಮನೆಯಲ್ಲಿರುವ ಔಷಧ ಬಳಸುವ ಮುನ್ನ ವೈದ್ಯಕೀಯ ಸಲಹೆ ಪಡೆಯಿರಿ.
– ಆ್ಯಂಟಿಬಯಾಟಿಕ್‌ಗಳನ್ನು ಬ್ಯಾಕ್ಟೀರಿಯಾಗಳು ನಾಶವಾಗಲು ಮಾತ್ರ ನೀಡುತ್ತಾರೆ. ಸಾಂಕ್ರಾಮಿಕಗಳಿಗಲ್ಲ ಎಂಬುದನ್ನು ಮರೆಯಬೇಡಿ.
– ವೈದ್ಯರ ಸಲಹೆಯಂತೆ ಔಷಧ ತೆಗೆದುಕೊಳ್ಳಬೇಕು ಮತ್ತು ಸರಿಯಾದ ಸಮಯಕ್ಕೆ ಮಕ್ಕಳಿಗೆ ಔಷಧ ನೀಡುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು.

ಟಾಪ್ ನ್ಯೂಸ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

8

Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-1

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

World Diabetes Day; ಮಧುಮೇಹದಲ್ಲಿದೆ ಹಲವು ರೀತಿ; ಇಲ್ಲಿದೆ ಅದರ ಸಂಪೂರ್ಣ ವಿವರ

World Diabetes Day; ಮಧುಮೇಹದಲ್ಲಿದೆ ಹಲವು ರೀತಿ; ಇಲ್ಲಿದೆ ಅದರ ಸಂಪೂರ್ಣ ವಿವರ

3-health

Mother: ತಾಯಂದಿರ ಮಾನಸಿಕ ಆರೋಗ್ಯ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

1-mundaragi

Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ

2

Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.