ಟ್ವಿಟರ್‌ಗೆ ರಕ್ಷಣೆ ನೀಡುವುದಿಲ್ಲ: ದಿಲ್ಲಿ ಹೈಕೋರ್ಟ್
Team Udayavani, Jul 7, 2021, 6:30 AM IST
ಹೊಸದಿಲ್ಲಿ: ಮಾಹಿತಿ ತಂತ್ರಜ್ಞಾನ ನಿಯಮಗಳ ಅನುಷ್ಠಾನದಲ್ಲಿ ವಿಳಂಬ ಮಾಡುತ್ತಿರುವ ಟ್ವಿಟರ್ ಸಂಸ್ಥೆಯನ್ನು ಮಂಗಳವಾರ ತರಾಟೆಗೆ ತೆಗೆದುಕೊಂಡಿರುವ ದಿಲ್ಲಿ ಹೈಕೋರ್ಟ್, “ನಾವು ಟ್ವಿಟರ್‌ಗೆ ಯಾವುದೇ ರಕ್ಷಣೆಯನ್ನು ನೀಡುವುದಿಲ್ಲ. ಅದರ ವಿರುದ್ಧ ಕ್ರಮ ಕೈಗೊಳ್ಳಲು ಕೇಂದ್ರ ಸರಕಾರಕ್ಕೆ ಮುಕ್ತ ಅವಕಾಶ ನೀಡುತ್ತೇವೆ’ ಎಂದು ಹೇಳಿದೆ.
ನಿಯಮ ಪಾಲನೆಗೆ 3 ತಿಂಗಳ ಕಾಲಾವಕಾಶ ನೀಡಿದ್ದರೂ, ಅದನ್ನು ಪಾಲಿಸುವಲ್ಲಿ ಟ್ವಿಟರ್ ವಿಫಲವಾಗಿದೆ ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಹೈಕೋರ್ಟ್ ಈ ರೀತಿ ಆಕ್ರೋಶ ಹೊರಹಾಕಿದೆ. ಜತೆಗೆ, ಹೊಸ ನಿಯಮದ ಪ್ರಕಾರ ದೇಶೀಯ ಕುಂದು ಕೊರತೆ ನಿವಾರಣ ಅಧಿಕಾರಿಯನ್ನು ಯಾವಾಗ ನೇಮಕ ಮಾಡುತ್ತೀರಿ ಎಂದು ಜು.8ರೊಳಗೆ ಮಾಹಿತಿ ನೀಡಿ ಎಂದು ಟ್ವಿಟರ್‌ಗೆ ಹೈಕೋರ್ಟ್ ಸೂಚಿಸಿದೆ. ಇದೇ ವೇಳೆ, ಗಾಜಿಯಾಬಾದ್ ಜಿಲ್ಲಾ ಪೊಲೀಸರು ತಮ್ಮನ್ನು ಬಂಧಿಸುವುದಿಲ್ಲ ಎನ್ನುವುದು ಖಾತರಿಯಾದರೆ ವಿಚಾರಣೆಗೆ ಹಾಜರಾಗುವುದಾಗಿ ಟ್ವಿಟರ್ ಇಂಡಿಯಾ ಎಂ.ಡಿ.ಮನೀಷ್ ಮಹೇಶ್ವರಿ ಕರ್ನಾಟಕ ಹೈಕೋರ್ಟ್‌ಗೆ ಅರಿಕೆ ಮಾಡಿಕೊಂಡಿದ್ದಾರೆ. ಬುಧವಾರ ವಿಚಾರಣೆ ಮುಂದುವರಿಯಲಿದೆ. ಮತ್ತೂಂದು ಬೆಳವಣಿಗೆಯಲ್ಲಿ ಐ.ಟಿ.ನಿಯಮಗಳನ್ನು ಪ್ರಶ್ನಿಸಿ ವಿವಿಧ ಹೈಕೋರ್ಟ್‌ಗಳಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ಗೆ ವರ್ಗಾಯಿಸಬೇಕು ಎಂದು ಕೇಂದ್ರ ಸರಕಾರ ಅರಿಕೆ ಮಾಡಿದೆ.
ಈ ವಾರವೇ ಅದರ ವಿಚಾರಣೆ ನಡೆಯಲಿದೆ. ಐಟಿ ನಿಯಮ ಪಾಲನೆಗೆ ಸರಕಾರ ಪಟ್ಟು ಹಿಡಿದಿರುವ ಹಿನ್ನೆಲೆಯಲ್ಲಿ ಈಗ ಟ್ವಿಟರ್, ಇನ್‌ಸ್ಟಾಗ್ರಾಂ, ವಾಟ್ಸ್ ಆ್ಯಪ್, ನೆಟ್‌ಫ್ಲಿಕ್ಸ್, ಗೂಗಲ್, ಸ್ನ್ಯಾಪ್, ನ್ಪೋಟಿಫೈ ಸೇರಿದಂತೆ ಹಲವು ಪ್ರಮುಖ ಸಾಮಾಜಿಕ ಜಾಲತಾಣ ಕಂಪೆನಿಗಳು, ಅಧಿಕಾರಿಗಳ ಶೋಧ ಕಾರ್ಯದಲ್ಲಿ ತೊಡಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.