ಮೋದಿ ಸಂಪುಟ ಪುನರ್ ರಚನೆ : ಭಗವಂತ ಗುರುಬಸಪ್ಪ ಖೂಬಾ ಪ್ರಮಾಣ ವಚನ ಸ್ವೀಕಾರ
Team Udayavani, Jul 7, 2021, 7:43 PM IST
ನವ ದೆಹಲಿ : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಸಚಿವ ಸಂಪುಟಕ್ಕೆ ಸಚಿವರಾಗಿ ಇಂದು 43 ಮಂದಿ ನಾಯಕರು ಆಯ್ಕೆಯಾಗಿದ್ದು, ಆ ಪೈಕಿ ರಾಜ್ಯದ ಬಿಜೆಪಿ ನಾಯಕ ಭಗವಂತ್ ಖೂಬಾ ಕೂಡ ಒಬ್ಬರು. ಭಗವಂತ್ ಖೂಬಾ ಅವರು ಇಂದು(ಬುಧವಾರ, ಜುಲೈ 7) ಮೋದಿ ನೇತೃತ್ವದ ನೂತನ ಸಚಿವ ಸಂಪುಟಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭೋಧಿಸಿದ ಪ್ರತಿಜ್ಞಾವಿಧಿ ಸ್ವೀಕಾರ ಮಾಡಿ ಸೇರ್ಪಡೆಗೊಂಡಿದ್ದಾರೆ.
ಭಗವಂತ ಗುರುಬಸಪ್ಪ ಖೂಬಾ ರಾಜ್ಯದ ಸಕ್ರಿಯ ರಾಜಕಾರಣಿ. ಬೀದರ್ ಲೋಕಸಭಾ ಕ್ಷೇತ್ರದಿಂದ ಸಂಸತ್ ಸದಸ್ಯರಾಗಿ ಆಯ್ಕೆಯಾಗಿದ್ದ ಖೂಬಾ, ವೃತ್ತಿಯಲ್ಲಿ ಇಂಜಿನೀಯರ್. ಆರಂಭಿಕ ದಿನಗಳಿಂದ ಭಾರತೀಯ ಜನತಾ ಪಕ್ಷದೊಂದಿಗೆ ತನ್ನನ್ನು ತಾನು ಗುರುತಿಸಿಕೊಂಡು ಬಂದ ಅವರು ಇಂದು ಮೋದಿ ಸಂಪುಟಕ್ಕೆ ಸೇರಿದ್ದಾರೆ.
ಇದನ್ನೂ ಓದಿ : ಮೋದಿ ಸಂಪುಟ ಪುನರ್ ರಚನೆ : ಚಿತ್ರದುರ್ಗ ಸಂಸದ ಎ. ನಾರಾಯಣ ಸ್ವಾಮಿ ಪ್ರಮಾಣ ವಚನ ಸ್ವೀಕಾರ
ಭಗವಂತ ಗುರುಬಸಪ್ಪ ಖೂಬಾ ಅವರ ರಾಜಕೀಯ ನಡೆ
2014 ರ ಲೋಕಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಧರಂ ಸಿಂಗ್ ಅವರನ್ನು ಒಂದುವರೆ ಲಕ್ಷ ಮತಗಳ ಅಂತರದಿಂದ ಸೋಲಿಸಿದ ಖೂಬಾ ಸಂಸದರಾಗಿ ಆಯ್ಕೆಯಾಗಿದ್ದರು. 2014 ಸಪ್ಟೆಂಬರ್ 15 ರಲ್ಲಿ ಲೋಕಸಭಾ ಸದಸ್ಯರಿಗೆ ಕಂಪ್ಯೂಟರ್ ನೀಡಲು ಪರಾಮರ್ಶೆ ಸಮಿತಿಯ ಸದಸ್ಯರಾಗಿದ್ದರು.
2016 ರ ಅಕ್ಟೋಬರ್ 19 ರಂದು ಆಹಾರ, ಗ್ರಾಹಕ ವ್ಯವಹಾರ ಹಾಗೂ ಪಡಿತರ ಸರಬರಾಜು ಸ್ಥಾಯಿ ಸಮಿತಿಯ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದಾರೆ.
ಇನ್ನು, ಸಪ್ಟೆಂಬರ್ 15, 2014 ರಲ್ಲಿ ರೈಲ್ವೇ ಖಾತೆ ಸಲಹಾ ಸಮಿತಿಯ ಸದಸ್ಯರಾಗಿಯೂ ಸೇವೆ ಸಲ್ಲಿಸಿರುವ ಅವರು ಏಪ್ರಿಲ್ 3, 2018 ರಲ್ಲಿ ಯೋಜನೆ ಹಾಗೂ ಆರ್ಕಿಟೆಕ್ಚರ್ ಶಿಕ್ಷಣ ಪರಿಷತ್ತಿನ ಸದಸ್ಯರಾಗಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ.
ಇದನ್ನೂ ಓದಿ : ಮೋದಿ ಸಂಪುಟ ಪುನರ್ ರಚನೆ : ಉಡುಪಿ, ಚಿಕ್ಕಮಗಳೂರು ಸಂಸದೆ ಶೋಭಾ ಕಂರಂದ್ಲಾಜೆ ಪ್ರಮಾಣ ವಚನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…
Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್: ಏನಿದರ ಅಸಲೀಯತ್ತು?
Sabarimala: ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ
Indian Navy; ಪಾಕ್,ಚೀನಾದ ಮೂಲೆ ಮೂಲೆಗೂ ತಲುಪುವ ಕ್ಷಿಪಣಿ ಪರೀಕ್ಷೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು
Dandeli: ಕೆನರಾ ಬ್ಯಾಂಕ್ ಎಟಿಎಂ ಕೇಂದ್ರದೊಳಗೆ ಹಾವು ಪ್ರತ್ಯಕ್ಷ
BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ
ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.