ಟೀಂ ಇಂಡಿಯಾದ ಮಾಜಿ ನಾಯಕ, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಗೆ ಹುಟ್ಟುಹಬ್ಬದ ಸಂಭ್ರಮ
Team Udayavani, Jul 8, 2021, 8:46 AM IST
ಮುಂಬೈ: ಟೀಂ ಇಂಡಿಯಾ ಕಂಡ ಶ್ರೇಷ್ಠ ನಾಯಕರಲ್ಲಿ ಓರ್ವ, ಸದ್ಯ ಬಿಸಿಸಿಐ ಅಧ್ಯಕ್ಷರಾಗಿರುವ ಸೌರವ್ ಗಂಗೂಲಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. 49ನೇ ವರ್ಷಕ್ಕೆ ಕಾಲಿಟ್ಟ ಸೌರವ್ ಗಂಗೂಲಿ ಸಂಕಷ್ಟದ ಪರಿಸ್ಥಿತಿಯಲ್ಲಿ ತಂಡವನ್ನು ಮುನ್ನಡೆಸಿದ ಕೀರ್ತಿ ಪಡೆದವರು.
2000 ಇಸವಿಯಲ್ಲಿ ಮ್ಯಾಚ್ ಫಿಕ್ಸಿಂಗ್ ಕಳಂಕದಿಂದ ಟೀಂ ಇಂಡಿಯಾ ಅವಮಾನ ಅನುಭವಿಸಿದ್ದ ಸಮಯದಲ್ಲಿ ತಂಡದ ಚುಕ್ಕಾಣಿ ಹಿಡಿದ ಸೌರವ್ ಗಂಗೂಲಿ ಹೊಸ ಅಧ್ಯಾಯ ಬರೆದರು. ಟೀಂ ಇಂಡಿಯಾ ಕಂಡ ಕ್ರಾಂತಿಕಾರಿ ನಾಯಕ ಈ ದಾದ.
ಯುವರಾಜ್ ಸಿಂಗ್, ಜಹೀರ್ ಖಾನ್, ಮಹೇಂದ್ರ ಸಿಂಗ್ ಧೋನಿ, ಹರ್ಭಜನ್ ಸಿಂಗ್, ವೀರೆಂದ್ರ ಸೆಹವಾಗ್, ಮೊಹಮ್ಮದ್ ಕೈಫ್, ಆಶೀಶ್ ನೆಹ್ರಾ ಮುಂತಾದವರು ಸೌರವ್ ಗಂಗೂಲಿ ನಾಯಕತ್ವದಲ್ಲೇ ಟೀಂ ಇಂಡಿಯಾ ಪ್ರವೇಶ ಪಡೆದಿದ್ದರು.
ಇದನ್ನೂ ಓದಿ:30 ವರ್ಷಗಳ ಹಿಂದೆ ತಂದೆ ಮಾಧವರಾವ್ ನಿರ್ವಹಿಸಿದ್ದ ಖಾತೆಯನ್ನೇ ಪಡೆದ ಜ್ಯೋತಿರಾದಿತ್ಯ ಸಿಂಧಿಯಾ
ತಂಡದ ಹಿತಕ್ಕಾಗಿ ದಿಟ್ಟ ನಿರ್ಧಾರಗಳನ್ನು ತೆಗೆದುಕೊಂಡ ಕೀರ್ತಿ ಸೌರವ್ ಗಂಗೂಲಿಗೆ ಸೇರುತ್ತದೆ. ಮಧ್ಯಮ ಕ್ರಮಾಂಕದಲ್ಲಿ ಆಡುತ್ತಿದ್ದ ವೀರೆಂದ್ರ ಸೆಹವಾಗ್ ರನ್ನು ಟೆಸ್ಟ್ ಕ್ರಿಕೆಟ್ ನಲ್ಲಿ ಆರಂಭಿಕರನ್ನಾಗಿ ಮಾಡಿದ ಗಂಗೂಲಿ ನಂತರ ದಿಲ್ಲಿ ಕ್ರಿಕೆಟಿಗ ವೃತ್ತಿ ಜೀವನದ ದಿಕ್ಕನ್ನೇ ಬದಲಿಸಿದರು. ಮುಂದೆ ಅದೇ ಸೆಹವಾಗ್ ಟೆಸ್ಟ್ ನಲ್ಲಿ ಎರಡು ತ್ರಿಶತಕ ಬಾರಿಸಿದರು.
ತಂಡ ಸರಿಯಾದ ವಿಕೆಟ್ ಕೀಪರ್ ಗಳ ಕೊರತೆ ಅನುಭವಿಸುತ್ತಿದ್ದ ಸಮಯದಲ್ಲಿ ರಾಹುಲ್ ದ್ರಾವಿಡ್ ಗೆ ಆ ಜವಾಬ್ದಾರಿ ವಹಿಸಿದರು. ಇದರಿಂದ ಮತ್ತೋರ್ವ ಬ್ಯಾಟ್ಸಮನ್ ಆಡಲು ಸಾಧ್ಯವಾಗುತ್ತಿತ್ತು.
ಎಡಗೈ ಬ್ಯಾಟ್ಸಮನ್ ಆಗಿದ್ದ ಸೌರವ್ ಗಂಗೂಲಿ ಏಕದಿನ ಕ್ರಿಕೆಟ್ ನಲ್ಲಿ 11,363 ರನ್ ಗಳು ಮತ್ತು ಟೆಸ್ಟ್ ಕ್ರಿಕೆಟ್ ನಲ್ಲಿ 7212 ರನ್ ಗಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
FIP Padel: ಭಾರತದ ಮೊದಲ ಎಫ್ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
MUST WATCH
ಹೊಸ ಸೇರ್ಪಡೆ
Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು
BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.