ವಿಜಯಪುರ: ಹರಿಯುವ ಹಳ್ಳದ ರಭಸಕ್ಕೆ ಕೊಚ್ಚಿಹೋದ ರೈತ, ಹುಡುಕಾಟ ಆರಂಭ
Team Udayavani, Jul 8, 2021, 1:21 PM IST
ವಿಜಯಪುರ: ಜಿಲ್ಲೆಯಲ್ಲಿ ಬುಧವಾರ ಸುರಿದ ಮಳೆಗೆ ತುಂಬಿ ಹರಿಯುವ ಹಳ್ಳದಲ್ಲಿ ನೀರಿನ ರಭಸಕ್ಕೆ ರೈತರೊಬ್ಬರು ಕೊಚ್ಚಿಕೊಂಡು ಹೋದ ಘಟನೆ ಜರುಗಿದೆ.
ಭಾರೀ ಪ್ರಮಾಣದಲ್ಲಿ ಮಳೆ ಸುರಿದ ಕಾರಣ ಜಿಲ್ಲೆಯ ಹಲವು ಹಳ್ಳಗಳು ತುಂಬಿ ಹರಿಯುತ್ತಿವೆ. ಕುರಬತಹಳ್ಳಿ ಗ್ರಾಮದ ರೈತ ಬಸಣ್ಣ ಸಿದಪ್ಪ ಅoಬಾಗೋಳ (58 ವ) ಹಳ್ಳದ ಪ್ರವಾಹದಲ್ಲಿ ಕೊಚ್ಚಿಹೋಗಿದ್ದಾರೆ.
ಇದನ್ನೂ ಓದಿ:ಕೊಯ್ನಾನಗರ ಎಸ್‌ಡಿಆರ್‌ಎಫ್ ಯೋಜನೆ ಪ್ರಸ್ತಾವ ಸಲ್ಲಿಸಿ: ದೇಸಾಯಿ
ಜಮೀನಿನಲ್ಲಿ ಕೆಲಸಕ್ಕೆ ಹೋಗಿದ್ದಾಗ ವಿಪರೀತ ಮಳೆಯಾಗಿದ್ದು, ಮನೆಗೆ ಮರಳುವ ಹಂತದಲ್ಲಿ ಮಾರ್ಗ ಮಧ್ಯದ ಹಳ್ಳ ತುಂಬಿ ಬಂದಿದೆ. ತುಂಬಿ ಹರಿಯುತ್ತಿದ್ದ ಹಳ್ಳ ದಾಟಲು ಮುಂದಾದಾಗ ಬಸಣ್ಣ ನೀರಿನಲ್ಲಿ ಕೊಚ್ಚಿಕೊಂಡು ಹೊಗಿದ್ದಾನೆ.
ಸುದ್ದಿ ತಿಳಿಯುತ್ತಲೇ ಸ್ಥಳಕ್ಕೆ ಧಾವಿಸಿರುವ ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿ ಬಸಣ್ಣನಿಗಾಗಿ ಹಳ್ಳದಲ್ಲಿ ಶೋಧ ನಡೆಸಿದ್ದಾರೆ.
ಆಲಮೇಲ ತಾಲೂಕಿನ ದೊಡ್ಡ ಹಾಗೂ ಭೀಮಾ ನದಿಯ ಹಳ್ಳಗಳಲ್ಲಿ ಒಂದಾಗಿರುವ ಕುರಬತ್ತಹಳ್ಳಿ ಹಳ್ಳ ತಾರಾಪೂರ ಮಾರ್ಗವಾಗಿ ಭೀಮಾ ನದಿಗೆ ಸೇರುತ್ತದೆ. ಬಸಣ್ಣನ ಪತ್ತೆಗಾಗಿ ಬೋಟ್ ಮೂಲಕ ಭೀಮಾ ನದಿಯಲ್ಲೂ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸುವುದಾಗಿ ಸಿಂದಗಿ ತಹಶೀಲ್ದಾರ ಸಂಜೀವ ಕುಮಾರ ದಾಸರ ತಿಳಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು
ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು
ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.