ಸನಾದಿ ಅಪ್ಪಣ್ಣ ಸಮಾಧಿ ಸ್ಥಳಕ್ಕೆ ಭೇಟಿ

ಅಭಿವೃದ್ಧಿ-ಸ್ಮಾರಕ ಭವನ ನಿರ್ಮಾಣಕ್ಕೆ 2 ಕೋಟಿ ಕ್ರಿಯಾ ಯೋಜನೆ: ಹೇಮಾವತಿ

Team Udayavani, Jul 8, 2021, 5:52 PM IST

7 bgk-13a

ಬೀಳಗಿ: ಪಟ್ಟಣದ ಹಿಂದೂ ರುದ್ರಭೂಮಿಯಲ್ಲಿರುವ ಸನಾದಿ ಅಪ್ಪಣ್ಣ ಸಮಾಧಿ ಸ್ಥಳಕ್ಕೆ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಎನ್‌. ಹೇಮಾವತಿ ಬುಧವಾರ ಭೇಟಿ ನೀಡಿ ಪರಿಶೀಲಿಸಿದರು.

ಸನಾದಿ ಅಪ್ಪಣ್ಣ ಅವರ ಸಮಾಧಿ ಸ್ಥಳ ಅಭಿವೃದ್ಧಿ ಜತೆಗೆ ಸ್ಮಾರಕ ಭವನ ನಿರ್ಮಾಣ ಮಾಡುವ ಉದ್ದೇಶದಿಂದ ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ ನಿರಾಣಿ ಅವರು 2 ಕೋಟಿ ರೂ. ಕ್ರಿಯಾ ಯೋಜನೆ ಸಿದ್ಧಪಡಿಸಲು ತಿಳಿಸಿದ್ದಾರೆ. ಹೀಗಾಗಿ ಪರಿಣಾಮ ಸ್ಥಳ ವೀಕ್ಷಣೆ ಮಾಡಲಾಗುತ್ತಿದೆ ಎಂದರು.

ಪಟ್ಟಣದ ರುದ್ರಭೂಮಿಯ ಸನಾದಿ ಅಪ್ಪಣ ಸಮಾಧಿ ಅಭಿವೃದ್ಧಿ ಮತ್ತು ಸ್ಮಾರಕ ಭವನ ನಿರ್ಮಾಣ ಮಾಡುವ ಯೋಜನೆ ರೂಪಿಸುವಂತೆ ಸಚಿವರು ತಿಳಿಸಿದ್ದಾರೆ. ಅದರಂತೆ ಸ್ಥಳ ಪರಿಶೀಲನೆ ಮಾಡಲಾಗಿದೆ. ಸದ್ಯ ಈ ಸ್ಥಳ ಅಭಿವೃದ್ಧಿಗೆ ಬೇಕಿರುವ ಕ್ರಿಯಾ ಯೋಜನೆ ರೂಪಿಸಲಾಗುವುದು. ಸ್ಮಾರಕ ಭವನ ಇತರೆ ಅಭಿವೃದ್ಧಿ ಕೆಲಸಗಳ ಕುರಿತಾಗಿ ತಹಶೀಲ್ದಾರ್‌ ಸೇರಿದಂತೆ ವಿವಿಧ ಇಲಾಖೆಗಳೊಂದಿಗೆ ಚರ್ಚಿಸಿ ಬರುವ ದಿನಗಳಲ್ಲಿ ಭವನ ನಿರ್ಮಾಣ ಮಾಡುವ ಕ್ರಿಯಾ ಯೋಜನೆ ಮಾಡುತ್ತೇವೆ ಎಂದು ಹೇಳಿದರು.

ಅಲ್ಲದೇ ಕದಂಗಲ್‌ ಹಣಮಂತರಾಯ ರಂಗಮಂದಿರ ನಿರ್ಮಾಣ ಕಾರ್ಯ ಅರ್ಧಕ್ಕೆ ನಿಂತಿದ್ದು ಅನುದಾನ ಕೊರತೆಯಿಂದ ನಿರ್ಮಿತಿ ಕೇಂದ್ರದಿಂದ ನಿರ್ಮಾಣ ಕಾರ್ಯವಾಗಿಲ್ಲ ಎಂಬ ಮಾಹಿತಿ ಬಂದಿದ್ದು ಕೂಡಲೇ ನಿರ್ಮಾಣ ಕಾರ್ಯಕ್ಕೆ ಬೇಕಿರುವ ಎಲ್ಲ ಮಾಹಿತಿ ಕಲೆ ಹಾಕಿ ಮತ್ತೆ ಕಾಮಗಾರಿ ಆರಂಭಿಸಲಾಗುವುದು. ಸದ್ಯ ರಂಗಮಂದಿರ ಕಾಮಗಾರಿ ಸ್ಥಳ ಸ್ವತ್ಛತೆ ಮಾಡಲು ತಿಳಿಸಲಾಗಿದೆ. ಇಂದಿನಿಂದ ಕೆಲಸ ಆರಂಭವಾಗಿ ಅಲ್ಲಿನ ಪರಿಸರ ಶುದ್ಧವಾಗಿಡುತ್ತೇವೆ ಎಂದು ತಿಳಿಸಿದರು.

ಇಲಾಖೆ ಅಧಿಕಾರಿಗಳಾದ ರಾಜೇಶ ಸರೂರ, ನಿರ್ಮಿತಿ ಕೇಂದ್ರದ ಎಂಜಿನಿಯರ್‌ ಮಹಾಂತೇಶ ಕಪಲಿ, ನಾಗರಾಜ ತಿಪ್ಪನ್ನವರ, ಚವ್ಹಾಣ, ಸಮಾಜದ ಮುಖಂಡ ಬಸವರಾಜ ಭಜಂತ್ರಿ, ಪುಟ್ಟರಾಜ್‌ ಭಜಂತ್ರಿ, ಈರಪ್ಪ ಮಂಟೂರ, ಶಂಕರೆಪ್ಪ ತಂಬಾಕದ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gram panchayat: ಸ್ಥಾನ ಬಿಟ್ಟುಕೊಡದ ಉಪಾಧ್ಯಕ್ಷೆ ವಿರುದ್ದ ಕೆಂಡಾಮಂಡಲಳಾದ ಸದಸ್ಯೆ

Gram panchayat: ಸ್ಥಾನ ಬಿಟ್ಟುಕೊಡದ ಉಪಾಧ್ಯಕ್ಷೆ ವಿರುದ್ದ ಕೆಂಡಾಮಂಡಲಳಾದ ಸದಸ್ಯೆ

MUDA Case: ವಿಪಕ್ಷಗಳಿಂದ ಸಿಎಂ ಶಕ್ತಿ ಜನಪ್ರೀಯತೆ ಕುಗ್ಗಿಸುವ ಪ್ರಯತ್ನ: ಉಮಾಶ್ರೀ

MUDA Case: ವಿಪಕ್ಷಗಳಿಂದ ಸಿಎಂ ಶಕ್ತಿ ಜನಪ್ರಿಯತೆ ಕುಗ್ಗಿಸುವ ಪ್ರಯತ್ನ: ಉಮಾಶ್ರೀ

12-mudhol

Muda ಸೈಟ್ ಹಿಂತಿರುಗಿಸಿರುವ ಸಿದ್ದರಾಮಯ್ಯ ಪತ್ನಿಯ ಕ್ರಮಕ್ಕೆ ತಿಮ್ಮಾಪುರ ಪ್ರತಿಕ್ರಿಯೆ

11-

Mudhol: ಪ್ರಕರಣ ಹಿಂಪಡೆಯದಿದ್ದರೆ ಹಿಂದೂ ಪರ‌ ಸಂಘಟನೆಯಿಂದ ಜಿಲ್ಲಾದ್ಯಂತ ಹೋರಾಟದ ಎಚ್ಚರಿಕೆ

9-rabakavi

Rabkavi Banhatti: ಕನ್ನಡ ಭಾಷೆಯ ಬಗ್ಗೆ ಅಭಿಮಾನ ಬೇಕು: ಶಾಸಕ ಸಿದ್ದು ಸವದಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.