ಬೆಲೆ ಏರಿಕೆಯಲ್ಲಿ ಭಾರತ ವಿಶ್ವ ದಾಖಲೆ
Team Udayavani, Jul 8, 2021, 10:33 PM IST
ಬಳ್ಳಾರಿ: ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಬೆಲೆ ಏರಿಕೆಯಲ್ಲಿ ಭಾರತ ವಿಶ್ವ ದಾಖಲೆ ಮಾಡಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ವ್ಯಂಗ್ಯವಾಡಿದರು. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ 70 ರೂಗಳಿಗೆ ಇಳಿಕೆಯಾಗಿದ್ದರೂ, ಕೋವಿಡ್ ಸೋಂಕು ಸಂಕಷ್ಟದ ನಡುವೆಯೂ ಕಳೆದ ಎರಡು ತಿಂಗಳಲ್ಲಿ 33 ಬಾರಿ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ದರಗಳನ್ನು ಏರಿಕೆ ಮಾಡಿರುವ ಕೇಂದ್ರದ ಬಿಜೆಪಿ ಸರ್ಕಾರ ದೇಶದ ಬಡ ಜನರಿಗೆ ಶಾಪವಾಗಿ ಪರಿಣಮಿಸಿದೆ. ಹಿಂದೆ ಯುಪಿಎ ಅವಧಿಯಲ್ಲಿ ತೈಲ ಬೆಲೆ ಏರಿಕೆ ವಿರೋಧಿ ಸಿದ್ದ ಬಿಜೆಪಿಯವರೇ ಇಂದು ಅವರೇ ತೈಲ ಬೆಲೆಯನ್ನು 100 ರೂಗಳಿಗೆ ಏರಿಕೆ ಮಾಡುವ ಮೂಲಕ ಬಡವರ ರಕ್ತವನ್ನು ಹೀರುತ್ತಿದ್ದಾರೆ ಎಂದು ಆರೋಪಿಸಿದರು.
ಯುಪಿಎ ಅವ ಧಿಯಲ್ಲಿ ಅಬಕಾರಿ ಸುಂಕ, ವ್ಯಾಟ್‌ನ್ನು ಕಡಿಮೆ ವಿಧಿಸಲಾಗಿತ್ತು. ಆದರೆ, ಇಂದು ರಾಜ್ಯ ಸರ್ಕಾರ ಅಬಕಾರಿ ಸುಂಕವನ್ನು 26 ರೂ. ವಿಧಿ ಸುತ್ತಿದ್ದು, ಕೇಂದ್ರ ಸರ್ಕಾರ ಕಳೆದ ಏಳು ವರ್ಷಗಳಲ್ಲಿ 20 ಲಕ್ಷ ಕೋಟಿ ರೂ. ಹಣ ಸಂಗ್ರಹ ಮಾಡಿದೆ. ಇನ್ನು ಉಜ್ವಲ ಯೋಜನೆಯಡಿ ಪ್ರತಿ ಮನೆಗೂ ಅನಿಲ ಸೌಲಭ್ಯ ಕಲ್ಪಿಸಿದ ಕೇಂದ್ರ ಬಿಜೆಪಿ ಸರ್ಕಾರ ಇದೀಗ ಅನಿಲ ದರವನ್ನೂ ಏರಿಕೆ ಮಾಡಿ, ಸಬ್ಸಿಡಿಯನ್ನು ಕಡಿತಗೊಳಿಸಿದೆ. ಪರಿಣಾಮ ಅನಿಲ ಖರೀದಿಸಲಾಗದ ಬಡಜನರು ಪುನಃ ಕಟ್ಟಿಗೆ (ಸೌದೆ)ಯ ಮೊರೆ ಹೋಗುತ್ತಿದ್ದಾರೆ.
ಮಾನವ ಅಭಿವೃದ್ಧಿ ಸೂಚ್ಯಂಕದಲ್ಲೂ ಕುಸಿದಿದ್ದು, ಪ್ರಧಾನಿ ನರೇಂದ್ರ ಮೋದಿಯವರ ಜಿಎಸ್‌ಟಿ, ನೋಟು ಅಮಾನ್ಯಿàಕರಣಗಳಂಥ ಹುಚ್ಚು ನಿರ್ಣಯಗಳಿಂದ ದೇಶದಲ್ಲಿ ಆರ್ಥಿಕತೆ, ಜಿಡಿಪಿ ಏರಿಕೆಯಾಗುತ್ತಿಲ್ಲ. ಕೇವಲ ಉದ್ಯಮಿಗಳ ಪರವಾದ ನೀತಿಗಳನ್ನು ಜಾರಿಗೆ ತರಲಾಗುತ್ತಿದೆ ಎಂದು ಆರೋಪಿಸಿದರು. ಕೇಂದ್ರ ಸರ್ಕಾರ ತೈಲ ಬೆಲೆಯನ್ನು ಇಳಿಕೆ ಮಾಡಲೇಬೇಕು ಎಂಬ ಉದ್ದೇಶದಿಂದ ಜುಲೈ 7ರಿಂದ 17ರ ವರೆಗೆ ಹೋಬಳಿ, ತಾಲೂಕು, ಜಿಲ್ಲಾ, ರಾಜ್ಯ, ರಾಷ್ಟ್ರಮಟ್ಟದಲ್ಲೂ ಸೇರಿ ಅಧಿವೇಶನ ಒಳಗೂ, ಹೊರಗೂ ಹೋರಾಟ ನಡೆಸಲಾಗುವುದು ಎಂದರು.
ಡೆತ್ ಆಡಿಟ್ ಆಗಬೇಕು: ಕೋವಿಡ್ ಎರಡನೇ ಅಲೆ ಆವರಿಸುವ ಕುರಿತು ತಜ್ಞರ ಸಮಿತಿ ಮುನ್ಸೂಚನೆ ನೀಡಿದ್ದರೂ ನಿರ್ಲಕ್ಷéವಹಿಸಿದ ರಾಜ್ಯ ಸರ್ಕಾರ, ಯಾವುದೇ ಸಿದ್ಧತೆ ಮಾಡಿಕೊಳ್ಳದೆ ಜನರ ಮಾರಣ ಹೋಮಕ್ಕೆ ಕಾರಣವಾಗಿದೆ. ಕೋವಿಡ್ ಸೋಂಕಿನ ಸಾವಿನಲ್ಲೂ ಸುಳ್ಳು ಲೆಕ್ಕ ತೋರಿಸುತ್ತಿದೆ. ದೇಶದಲ್ಲಿ 20-25 ಲಕ್ಷ ಜನರು ಸೋಂಕಿಗೆ ಬಲಿಯಾಗಿದ್ದರೂ ಕೇವಲ 4 ಲಕ್ಷ ಜನರ ಸಾವಿನ ಸುಳ್ಳು ಲೆಕ್ಕವನ್ನು ಮಾತ್ರ ತೋರಿಸಲಾಗುತ್ತಿದೆ. ರಾಜ್ಯದಲ್ಲೂ ಇದೇ ಸುಳ್ಳು ಲೆಕ್ಕದ ಪರಿಸ್ಥಿತಿ ಇದೆ. ಹಾಗಾಗಿ ಡೆತ್ ಆಡಿಟ್ ಆಗಬೇಕು ಎಂದು ಒತ್ತಾಯಿಸಿದರು.
ಕೋವಿಡ್ ಸಾವಿನ ಬಗ್ಗೆ ಸ್ಪಷ್ಟ ಮಾಹಿತಿ ನೀಡಬೇಕು. ಕಳ್ಳಲೆಕ್ಕ ಬೇಡ, ಅದಕ್ಕಾಗಿ ನಮ್ಮಪಕ್ಷದ ಕಾರ್ಯಕರ್ತರು, ದೇಶದಾದ್ಯಾಂತ 7500 ಪಟ್ಟಣ, 7200 ಬ್ಲಾಕ್‌ಗಳಿಂದ ಕೋವಿಡ್ ಡೆತ್ ಆದ ಕುಟುಂಬಗಳ ಮನೆ ಮನೆಗೆ ಭೇಟಿ ನೀಡಿ ಸಾವಿಗೆ ಕಾರಣ ಏನು, ವೆಚ್ಚ ಎಷ್ಟಾಗಿದೆ, ಪರಿಹಾರ ದೊರೆತಿದೆಯಾ ಎಂಬ ಇತ್ಯಾದಿ ಮಾಹಿತಿಗಳನ್ನು ಕಲೆ ಹಾಕಿ ಅವರಿಗೆ ಸರ್ಕಾರದಿಂದ ಸೂಕ್ತ ಪರಿಹಾರ ಕೊಡಿಸುವ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು. ಬಳ್ಳಾರಿ ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ ಅಧಿಕಾರ ತಪ್ಪಿಸುವ ಕಾರಣಕ್ಕಾಗಿ ಮೇಯರ್-ಉಪ ಮೇಯರ್ ಚುನಾವಣೆ ಮುಂದೂಡುವಂತೆ ಸರ್ಕಾರ ಆದೇಶ ಹೊರಡಿಸಿದೆ ಎಂದು ಆರೋಪಿಸಿದರು.
ಭಿನ್ನಾಭಿಪ್ರಾಯ ಸಹಜ: ಇದೇ ವೇಳೆ ಮುಂದಿನ ಮುಖ್ಯಮಂತ್ರಿ ಕುರಿತ ಚರ್ಚೆ ಅಪ್ರಸ್ತುತ ಎಂದ ಈಶ್ವರಖಂಡ್ರೆ, ಕುಟುಂಬದಲ್ಲಿ ಅಣ್ಣತಮ್ಮಂದಿರು ಎಂದಾಕ್ಷಣ ಭಿನ್ನಾಭಿಪ್ರಾಯ ಸಹಜ. ಹಾಗಂತ ಅದನ್ನೇ ಮುಂದಿಟ್ಟುಕೊಂಡು ಮಾಧ್ಯಮಗಳು ಬಿತ್ತರಿಸುವುದು ಒಳ್ಳೆಯದಲ್ಲ. 130 ವರ್ಷಗಳ ಹಿನ್ನೆಲೆಯುಳ್ಳ ಕಾಂಗ್ರೆಸ್ ಎಂದಿಗೂ ಹೊಂದಾಣಿಕೆ ರಾಜಕಾರಣ ಮಾಡಿಲ್ಲ. ಬಸವನಗೌಡ ಪಾಟೀಲ್ ಯತ್ನಾಳ್ ಹತಾಶೆಯಿಂದ ಹೇಳಿಕೆ ನೀಡಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಗ್ರಾಮೀಣ ಶಾಸಕ ಬಿ. ನಾಗೇಂದ್ರ, ಮಾಜಿ ಸಂಸದ ಶಿವರಾಮೆಗೌಡ, ಮಾಜಿ ಶಾಸಕರಾದ ಬಿ.ಎಂ. ನಾಗರಾಜ್, ಕೆ.ಎಸ್.ಎಲ್.ಸ್ವಾಮಿ, ಜಿಪಂ ಸದಸ್ಯರಾದ ಅಲ್ಲಂ ಪ್ರಶಾಂತ್, ನಾರಾ ಭರತ್ ರೆಡ್ಡಿ, ಜಿಲ್ಲಾಧ್ಯಕ್ಷ ಜಿ.ಎಸ್. ಮೊಹಮ್ಮದ್ ರಕ್, ಬಿ.ರಾಂಪ್ರಸಾದ್, ಬೆಣಕಲ್ ಬಸವರಾಜಗೌಡ, ಕಮಲಾ ಮರಿಸ್ವಾಮಿ ಸೇರಿದಂತೆ ಹಲವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.