ಕವಲೆದುರ್ಗ ನೂತನ ಶ್ರೀಗಳ ಗುರುಪಟ್ಟಾಧಿಕಾರ ಮಹೋತ್ಸವ
Team Udayavani, Jul 8, 2021, 11:00 PM IST
ತೀರ್ಥಹಳ್ಳಿ: ಹರ ಮುನಿದರೂ ಗುರು ಕಾಯುವನು ಎಂಬಂತೆ ಭಾರತೀಯ ಸನಾತನ ಸಂಸ್ಕ ೃತಿಯಲ್ಲಿ ಗುರು ಪರಂಪರೆ ಶ್ರೇಷ್ಠವಾಗಿದೆ. ಗುರುವಿನ ಮಾರ್ಗದರ್ಶನದಲ್ಲಿ ತಾಯಿಗೆ ಇರುವಷ್ಟು ಶ್ರೇಷ್ಠ ಸ್ಥಾನ ಗುರುವಿಗೂ ಇದೆ ಎಂದು ಉಜ್ಜಯನಿ ಸದ್ಧರ್ಮ ಸಿಂಹಾಸನಾಧೀಶ್ವರ 1008 ಜಗದ್ಗುರು ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ಹೇಳಿದರು.
ಕವಲೆದುರ್ಗ ಕೆಳದಿ ರಾಜಗುರು ಮಹಾ ಮಹತ್ತಿನ ಭುವನಗಿರಿ ಸಂಸ್ಥಾನ ಮಠದಲ್ಲಿ ಬುಧವಾರ ನಡೆದ ನೂತನ ಶ್ರೀಗಳ ಗುರುಪಟ್ಟಾಧಿಕಾರ ಮಹೋತ್ಸವ ಮತ್ತು ಶ್ರೀ ಜಗದ್ಗುರು ಧಾರಾಕಾಚಾರ್ಯ ಗುರುಕುಲ ಆರಂಭೋತ್ಸವ ಸಮಾರಂಭದ ದಿವ್ಯ ಸಾನ್ನಿಧ್ಯ ವಹಿಸಿ ಆಶೀವರ್ಚನ ನೀಡಿದರು.
ನೂತನ ಪಟ್ಟಾಧ್ಯಕ್ಷರಿಗೆ ಸಂಪುಟ ಪತ್ರ- ಕಮಂಡಲ-ಮರಳುಸಿದ್ಧ ಶಿವಾಚಾರ್ಯ ನಾಮಕರಣ ಮಾಡಿ ಅಧಿಕಾರ ಹಸ್ತಾಂತರಿಸಿ ಮಾತನಾಡಿದ ಜಗದ್ಗುರುಗಳು, ಸಮಾಜ ಎಂಬುದು ತಂದೆ-ತಾಯಿ ಇದ್ದಂತೆ. ಅದಕ್ಕೆ ಮಾರ್ಗದರ್ಶನ ಮಾಡುವ ಗುರುಗಳು ಅಗತ್ಯವಾಗಿದ್ದು, ನೂತನ ಶ್ರೀಗಳನ್ನು ತಮ್ಮ ಮಡಿಲಿಗೆ ಹಾಕುತ್ತಿದ್ದೇವೆ. ಅವರನ್ನು ಬೆಳೆಸುವ ಗುರುತರ ಜವಾಜಾªರಿ ಸಮಾಜದ ಮತ್ತು ಭಕ್ತರದ್ದಾಗಬೇಕು ಎಂದರು. ವೀರಶೈವ ಮಠಗಳು ಜಾತಿಗೆ ಸೀಮಿತ ವಾಗದೆ ಜಾತ್ಯತೀತ ಮಠಗಳಾಗುವ ಮೂಲಕ ಭಾರತೀಯರಲ್ಲಿ ಸಮನ್ವಯತೆ ಭಾವನೆ ಬೆಳೆಸುವ ಕೇಂದ್ರಗಳಾಗಬೇಕು ಎಂದು ತಿಳಿಸಿದರು.
ಶಾಸಕ ಆರಗ ಜ್ಞಾನೇಂದ್ರ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಭಾರತ ಪುಣ್ಯ ಪುರುಷ್ಯರ ಮತ್ತು ಧರ್ಮದ ನೆಲೆವಿಡಾಗಿದೆ. ಹಿಂದೂ ಸಂಸ್ಕ ೃತಿ ಉಳಿಸುವ ಕೆಲಸದಲ್ಲಿ ಮಠಗಳ ಪಾತ್ರ ಮುಖ್ಯವಾಗಿದೆ. ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ ಮತಾಂತರ ನಡೆಸಲಾಗುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದರು.
ಕವಲೇದುರ್ಗ ಮಠದ ಜೀರ್ಣೋದ್ಧಾರಕ್ಕಾಗಿ ರಾಜ್ಯ ಸರ್ಕಾರ ಅನುದಾನ ಬಿಡುಗಡೆ ಮಾಡಿದ್ದು, ಶಿಲಾಮಯ ಮಠವನ್ನು ನಿರ್ಮಿಸುವ ಮೂಲಕ ಸಂಸದ ಬಿ.ವೈ.ರಾಘವೇಂದ್ರ ಅವರ ಭರವಸೆಯಂತೆ ಸಮುದಾಯ ಭವನ ನಿರ್ಮಾಣಕ್ಕೆ 1.50 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ.
ಶೀಘ್ರದಲ್ಲಿ ಕಾಮಗಾರಿ ಆರಂಭಿಸುವ ಭರವಸೆ ನೀಡಿದರು. ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯರು, ಕೋಣಂದೂರು ಶ್ರೀಪತಿ ಪಂಡಿತಾರಾಧ್ಯ ಶ್ರೀಗಳು, ತೊಗರ್ಸಿಯ ಮಳೆ ಹಿರೇಮಠದ ಮಹಾಂತ ಶಿವಾಚಾರ್ಯ ಸ್ವಾಮೀಜಿ, ವಿಭೂತಿಮಠದ ಡಾ.ಮಹಾಂತಲಿಂಗ ಶಿವಾಚಾರ್ಯರು, ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮ ಅಭಿನವ ಚನ್ನಬಸವ ಮಹಾಸ್ವಾಮೀಜಿ, ರೆಟ್ಟಿಹಳ್ಳಿ, ಕಬ್ಬಿಣಕಂತಿಮಠದ ಶಿವಲಿಂಗ ಶಿವಾಚಾರ್ಯರು, ಬಿಳಕಿ ರಾಚೋಟೇಶ್ವರ ಶಿವಾಚಾರ್ಯರು ಹಾಗೂ ಉದ್ಯಮಿ ಕೆ.ಆರ್ .ಪ್ರಕಾಶ್, ತ್ಯಾರಂದೂರು ಮುರುಗೇಂದ್ರ, ಕಟ್ಟೆಗದ್ದೆ ಹಾಲಪ್ಪ, ತೀರ್ಥಹಳ್ಳಿ ಪಾಂಡುರಂಗ ಇನ್ನಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Holehonnuru: ಕಿರು ಅರಣ್ಯ ಪ್ರದೇಶದಲ್ಲಿ ಕಡವೆ ಬೇಟೆ; ಆರೋಪಿ ಬಂಧನ
Hosanagara: ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ; ದೇಗುಲಕ್ಕೆ ಹಾನಿ
Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ
K. S. Eshwarappa: ಮುಸ್ಲಿಮರಿಗೆ ಮೀಸಲು ನೀಡಿದರೆ ಸಂತರ ನೇತೃತ್ವದಲ್ಲಿ ದಂಗೆ
MUST WATCH
ಹೊಸ ಸೇರ್ಪಡೆ
Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ
Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.