ಸಚಿವರಾದ ಬೆನ್ನಲ್ಲೇ ಜ್ಯೋತಿರಾದಿತ್ಯ ಸಿಂಧಿಯಾ ಫೇಸ್ ಬುಕ್ ಖಾತೆ ಹ್ಯಾಕ್!
Team Udayavani, Jul 9, 2021, 8:42 AM IST
ಹೊಸದಿಲ್ಲಿ: ಮಧ್ಯಪ್ರದೇಶದ ಯುವ ನೇತಾರ, ರಾಜ್ಯಸಭಾ ಸದಸ್ಯ ಜ್ಯೋತಿರಾದಿತ್ಯ ಸಿಂಧಿಯಾ ಅವರು ನರೇಂದ್ರ ಮೋದಿ ಕ್ಯಾಬಿನೆಟ್ ನಲ್ಲಿ ಸ್ಥಾನ ಪಡೆದಿದ್ದಾರೆ. ಬುಧವಾರ ಪುನಾರಚನೆಯಾದ ಸಂಪುಟದಲ್ಲಿ ಕ್ಯಾಬಿನೆಟ್ ದರ್ಜೆ ಸ್ಥಾನ ಪಡೆದ ಸಿಂಧಿಯಾ, ಈಗ ನಾಗರಿಕ ವಿಮಾನಯಾನ ಸಚಿವ. ಆದರೆ ಇದೀಗ ಜ್ಯೋತಿರಾದಿತ್ಯ ಸಿಂಧಿಯಾ ಫೇಸ್ ಬುಕ್ ಖಾತೆ ಹ್ಯಾಕ್ ಆಗಿದೆ.
ಜ್ಯೋತಿರಾದಿತ್ಯ ಸಿಂಧಿಯಾ ಅವರು ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಅವರ ಫೇಸ್ ಬುಕ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ. ಸಿಂಧಿಯಾ ಕಾಂಗ್ರೆಸ್ ನಲ್ಲಿದ್ದಾಗ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ವಿಡಿಯೋವೊಂದನ್ನು ಅವರ ಫೇಸ್ ಬುಕ್ ಖಾತೆಯಲ್ಲಿ ಹ್ಯಾಕರ್ ಗಳು ಅಪ್ಲೋಡ್ ಮಾಡಲಾಗಿದೆ.
ಇದನ್ನೂ ಓದಿ:ಗೇಮ್ಚೇಂಜರ್ ಆಗಲಿದೆಯೇ ಸಹಕಾರ ಸಚಿವಾಲಯ?
ಈ ವಿಡಿಯೋ ಇದೀಗ ವೈರಲ್ ಆಗಿದ್ದು, ಮಾಜಿ ಶಾಸಕ ರಮೇಶ್ ಅಗರ್ವಾಲ್ ಅವರು ನೀಡಿದ ದೂರಿನಂತೆ ಗ್ವಾಲಿಯರ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಜ್ಯೋತಿರಾದಿತ್ಯ ಸಿಂಧಿಯಾ ಅವರು ಕಳೆದ ವರ್ಷದ ಮಾರ್ಚ್ ನಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಮಧ್ಯ ಪ್ರದೇಶದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಕಾರಣವಾಗಿದ್ದರು. ನಂತರ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.