ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 43,393 ಕೋವಿಡ್ ಪ್ರಕರಣ ಪತ್ತೆ, 911 ಮಂದಿ ಸಾವು
ಗುರುವಾರ 17,90,708 ಮಂದಿಯನ್ನು ಪರೀಕ್ಷಿಸಲಾಗಿದೆ ಎಂದು ತಿಳಿಸಿದೆ.
Team Udayavani, Jul 9, 2021, 10:39 AM IST
ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 43,393 ನೂತನ ಕೋವಿಡ್ 19 ಸೋಂಕು ಪ್ರಕರಣ ಪತ್ತೆಯಾಗಿದ್ದು, 911 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ (ಜುಲೈ 09) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ನಾನೊಬ್ಬ ಕಾಮನ್ ಮ್ಯಾನ್, ಜನ ಸ್ಟಾರ್ ಡಮ್ ಕೊಟ್ಟಿದ್ದಾರಷ್ಟೇ.: ಶಿವಣ್ಣ special ಮಾತು
ದೇಶದಲ್ಲಿ ಕೋವಿಡ್ 19 ಸೋಂಕು ಪ್ರಕರಣ ಒಟ್ಟು 3,07,52,950ಕ್ಕೆ ಏರಿಕೆಯಾಗಿದೆ. ಈವರೆಗೆ ಭಾರತದಲ್ಲಿ ಕೋವಿಡ್ ನಿಂದ
4,05,939 ಮಂದಿ ಸಾವನ್ನಪ್ಪಿದ್ದಾರೆ. 4,58,727 ಸಕ್ರಿಯ ಕೋವಿಡ್ 19 ಪ್ರಕರಣಗಳಿವೆ ಎಂದು ಹೇಳಿದೆ.
ದೇಶಾದ್ಯಂತ ಈವರೆಗೆ 2,98, 88,284 ಮಂದಿ ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದಾರೆ. ಕಳೆದ 24ಗಂಟೆಗಳಲ್ಲಿ 44,459 ಮಂದಿ ಚೇತರಿಸಿಕೊಂಡಿದ್ದಾರೆ. ದೇಶದಲ್ಲಿ ಚೇತರಿಕೆ ಪ್ರಮಾಣ ಶೇ.97.19ರಷ್ಟಿದೆ ಎಂದು ಅಂಕಿಅಂಶದಲ್ಲಿ ತಿಳಿಸಿದೆ.
ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ಪ್ರಕಾರ, 42,70,16,605 ಜನರನ್ನು ಕೋವಿಡ್ ಪರೀಕ್ಷೆಗೆ ಗುರಿಪಡಿಸಲಾಗಿದೆ. ಗುರುವಾರ 17,90,708 ಮಂದಿಯನ್ನು ಪರೀಕ್ಷಿಸಲಾಗಿದೆ ಎಂದು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.