ಕೆನ್ನಾಲಿಗೆಗೆ ರವಾ ಮಿಲ್ ಆಹುತಿ
ವೀರಾಪುರ ಓಣಿಯಲ್ಲಿ ಘಟನೆ! 3 ಲಕ್ಷಕ್ಕೂ ಹೆಚ್ಚು ಮೌಲ್ಯದ ಸಾಮಗ್ರಿ ಹಾನಿ! 3 ಅಗ್ನಿಶಾಮಕ ವಾಹನದಿಂದ 6 ತಾಸು ಕಾರ್ಯಾಚರಣೆ
Team Udayavani, Jul 9, 2021, 6:34 PM IST
ಹುಬ್ಬಳ್ಳಿ: ವೀರಾಪುರ ಓಣಿಯಲ್ಲಿ ಸ್ಥಗಿತಗೊಂಡಿದ್ದ ರವಾ ಮಿಲ್‌ನಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಸುಮಾರು 3 ಲಕ್ಷ ರೂ.ಗಿಂತ ಹೆಚ್ಚು ಮೌಲ್ಯದ ಸಾಮಗ್ರಿಗಳು ಆಹುತಿಯಾದ ಘಟನೆ ಗುರುವಾರ ನಡೆದಿದೆ.
ಸ್ಥಳೀಯರು ಗಮನಿಸಿ ಅಗ್ನಿಶಾಮಕ ದಳ ಕಚೇರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಅಗ್ನಿ ಶಾಮಕಾಧಿಕಾರಿ ಚಂದ್ರಶೇಖರ ಭಂಡಾರಿ ನೇತೃತ್ವದ ತಂಡ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. ಮೂರು ವಾಹನಗಳು ಸತತವಾಗಿ ಸುಮಾರು 6 ಗಂಟೆಗಳ ಕಾಲ ಬೆಂಕಿ ನಂದಿಸುವ ಕಾರ್ಯ ನಡೆಸಿದವು. ಪ್ರಶಾಂತ ಹಬೀಬ ಎನ್ನುವವರಿಗೆ ಸೇರಿದ ಟಿ.ಕೆ.ಹಬೀಬ ರವಾ ಮಿಲ್ ಇದಾಗಿದ್ದು, ಕಳೆದ ನಾಲ್ಕೈದು ವರ್ಷಗಳ ಹಿಂದೆಯೇ ಸ್ಥಗಿತಗೊಂಡಿದೆ.
ಕಳೆದ ಮೂರ್‍ನಾಲ್ಕು ದಿನಗಳಿಂದ ತೆರವು ಕಾರ್ಯಚರಣೆ ನಡೆದಿತ್ತು ಎನ್ನಲಾಗಿದೆ. ಆದರೆ ಬೆಳಗ್ಗೆ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಆಗಿಲ್ಲ. ಕಟ್ಟಡದೊಳಗೆ ಕಟ್ಟಿಗೆ ಸಾಮಗ್ರಿಗಳು ಹೆಚ್ಚಿನ ಪ್ರಮಾಣದಲ್ಲಿದ್ದ ಕಾರಣ ಬೆಂಕಿ ತೀವ್ರತೆಯಿಂದ ಕೂಡಿತ್ತು. ಕಿಟಕಿಯ ಮೂಲಕ ಬೆಂಕಿ ಕೆನ್ನಾಲಿಗೆ ಹೊರ ಬರುತ್ತಿದ್ದಂತೆ ಸ್ಥಳೀಯರಿಗೆ ಗೊತ್ತಾಗಿದೆ. ಬೆಂಕಿಯ ತೀವ್ರತೆಯಿಂದ ಸ್ಥಳೀಯರಲ್ಲಿ ಆತಂಕ ಸೃಷ್ಟಿಯಾಗಿತ್ತು. ಕೂಡಲೇ ಬೆಂಡಿಗೇರಿ ಪೊಲೀಸರು ಆಗಮಿಸಿ ಪರಿಶೀಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.