ಜಿಲ್ಲಾದ್ಯಂತ ಇಂದು ಮಣ್ಣೆತ್ತಿನ ಅಮಾವಾಸ್ಯೆ ಆಚರಣೆ
Team Udayavani, Jul 9, 2021, 7:58 PM IST
ಕೊಪ್ಪಳ: ಕೋವಿಡ್ ನಿಯಂತ್ರಣದ ಬಳಿಕ ಜಿಲ್ಲೆಯ ಜನರಲ್ಲಿ ಖುಷಿಯ ಭಾವನೆ ಮೂಡಿದೆ. ಹಬ್ಬಗಳಲ್ಲಿ ಸಂಭ್ರಮ, ಸಡಗರದಿಂದ ಪಾಲ್ಗೊಳ್ಳುತ್ತಿದ್ದಾರೆ. ಅದರಲ್ಲೂ ಉತ್ತರ ಕರ್ನಾಟಕದ ಪ್ರಸಿದ್ಧ ಹಬ್ಬವೆನಿಸಿರುವ ಮಣ್ಣೆತ್ತಿನ ಅಮಾವಾಸ್ಯೆಯನ್ನು ಸಂಭ್ರಮದಿಂದ ಆಚರಿಸಲು ಮುಂದಾಗಿದ್ದಾರೆ.
ಪ್ರತಿ ವರ್ಷವೂ ಸಂಪ್ರದಾಯದಂತೆ ಮಣ್ಣೆತ್ತಿನ ಅಮಾವಾಸ್ಯೆಯ ಮುನ್ನ ಕುಂಬಾರರರು ಹಳ್ಳ, ಕೊಳ್ಳ ಹಾಗೂ ಹೊಲ ಗದ್ದೆಗಳಿಂದ ಮಣ್ಣನ್ನು ತಂದು ನೀರಿನಲ್ಲಿ ನೆನೆಯಿಟ್ಟು ಹದ ಮಾಡಿ ಮಣ್ಣಿನಿಂದಲೇ ಜೋಡೆತ್ತುಗಳನ್ನು ಮಾಡುತ್ತಿದ್ದರು. ಎತ್ತುಗಳಿಗೆ ಗೋದಲಿಯನ್ನೂ ಸಿದ್ಧಪಡಿಸಿ ಪ್ರತಿ ಮನೆ ಮನೆಗೂ ಗ್ರಾಮೀಣ ಭಾಗದಲ್ಲಿ ವಿತರಣೆ ಮಾಡುವ ಸಂಪ್ರದಾಯ ಇಂದಿಗೂ ಮುನ್ನಡೆದಿದೆ.
ನಗರ ಪ್ರದೇಶದಲ್ಲಿ ತಳ್ಳು ಬಂಡಿಯಲ್ಲಿ ಎತ್ತುಗಳನ್ನು ಇರಿಸಿ ಮಾರಾಟ ಮಾಡುತ್ತಾರೆ. ರೈತಾಪಿ ವರ್ಗಕ್ಕೆ ಎತ್ತುಗಳೇ ದೇವರ ಸ್ವರೂಪಿಗಳಾಗಿವೆ. ಕಾಯಕದಲ್ಲಿ ತೊಡಗುವ ಎತ್ತುಗಳನ್ನೇ ದೇವರ ರೂಪದಲ್ಲಿ ಪೂಜೆ ಮಾಡುವ ಸಂಪ್ರದಾಯ ಹಿಂದಿನಿಂದಲೂ ನಡೆದು ಬಂದಿದೆ. ಕಾರು ಹುಣ್ಣಿಮೆಯಲ್ಲಿ ಎತ್ತುಗಳನ್ನು ಅದ್ಧೂರಿಯಿಂದ ಮೆರವಣಿಗೆ ಮಾಡಿದರೆ, ಮಣ್ಣೆತ್ತಿನ ಅಮಾವಾಸ್ಯೆಯ ವೇಳೆ ಮಣ್ಣಿನ ಎತ್ತುಗಳನ್ನು ಪೂಜೆ ಮಾಡಿ ಸಂಜೆ ವೇಳೆ ಭಕ್ತಿಯಿಂದಲೇ ನದಿತಟಗಳಿಗೆ ವಿಸರ್ಜನೆ ಮಾಡುವ ಸಂಪ್ರದಾಯವಿದೆ.’ ಗ್ರಾಮೀಣ ಭಾಗದಲ್ಲಿ ಹುಡುಗರು ಎತ್ತಿನ ಗುಡಿಯನ್ನು ಮಾಡಿ ಮನೆ ಮನೆಯಿಂದ ಕಾಳು ಕೇಳಿ ತಂದು ಸಿಹಿ ಊಟ ಮಾಡಿ ಪೂಜ್ಯನೀಯವಾಗಿ ಮಣ್ಣಿನ ಎತ್ತು ವಿಸರ್ಜನೆ ಮಾಡುವ ಪದ್ಧತಿಯಿದೆ. ಈ ಹಬ್ಬದ ಸಡಗರವೂ ಜೋರಾಗಿಯೇ ನಡೆಯುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್
ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ
ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು
Gangavathi: ಆನೆಗೊಂದಿ ರಾಜವಂಶಸ್ಥ ಎಸ್.ಆರ್.ಕೆ. ರಾಜಬಹಾದ್ದೂರ್ ನಿಧನ
Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.