ಜನಸಂಖ್ಯಾ ನಿಯಂತ್ರಣ ಜಾಗೃತಿ ಅಗತ್ಯ
Team Udayavani, Jul 9, 2021, 9:55 PM IST
ಚಿಕ್ಕಮಗಳೂರು : 2011ರ ಜನಗಣತಿ ಪ್ರಕಾರ ದೇಶದ ಜನಸಂಖ್ಯೆಯು 121ಕೋಟಿ ಇದ್ದು, ಪ್ರತೀ ವರ್ಷ 1.80 ಕೋಟಿ ಜನಸಂಖ್ಯೆ ಹೆಚ್ಚಳವಾಗುತ್ತಿದೆ. ಇದೇ ರೀತಿ ಮುಂದುವರಿದಲ್ಲಿ ಮುಂದಿನ 42 ವರ್ಷಗಳಲ್ಲಿ 240 ಕೋಟಿ ಜನಸಂಖ್ಯೆ ದಾಟಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಉಮೇಶ್ ಆತಂಕ ವ್ಯಕ್ತಪಡಿಸಿದರು.
ಗುರುವಾರ ನಗರದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ವಿಶ್ವ ಜನಸಂಖ್ಯಾ ದಿನಾಚರಣೆಯ ಜಾಗೃತಿ ರಥಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ದೇಶದಲ್ಲಿ ಬಾಲ್ಯವಿವಾಹ, ಮೂಢನಂಬಿಕೆ, ಅನಕ್ಷರತೆ ಸೇರಿದಂತೆ ಇತರೆ ಕಾರಣಗಳಿಂದ ಜನಸಂಖ್ಯೆ ಪ್ರಮಾಣ ನಿರಂತರವಾಗಿ ಏರಿಕೆಯಾಗುತ್ತಿದೆ. ಜನಸಂಖ್ಯೆ ನಿಯಂತ್ರಣಕ್ಕೆ ಜನಜಾಗೃತಿ ಮೂಡಿಸುವ ಅಗತ್ಯವಿದೆ ಎಂದರು. ರಾಜ್ಯದಲ್ಲಿ 6.11 ಕೋಟಿ ಜನಸಂಖ್ಯೆ ಇದ್ದು, ಮುಂದಿನ 40 ವರ್ಷದಲ್ಲಿ 12 ಕೋಟಿ ದಾಟಲಿದೆ. ಜನಸಂಖ್ಯೆ ಸೊಟಕ್ಕೆ ಕಡಿವಾಣ ಹಾಕಬೇಕು. ಈ ಕುರಿತು ಜನರಲ್ಲಿ ಅರಿವು ಮೂಡಿಸುವ ಕೆಲಸವಾಗಬೇಕು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ರೇಟ್ ಶೇ.3ಕ್ಕಿಂತ ಕಡಿಮೆಯಾಗಿದೆ. ಪ್ರವಾಸಿಗರು ಮತ್ತು ಧಾರ್ಮಿಕ ಕ್ಷೇತ್ರಗಳಿಗೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವುದರಿಂದ ಸೋಂಕು ಹೆಚ್ಚಳವಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಅಧಿ ಕಾರಿಗಳು ಮತ್ತು ಸಿಬ್ಬಂದಿ ನಿರಂತರವಾಗಿ ಶ್ರಮಿಸುತ್ತಿದ್ದಾರೆ ಎಂದರು.
ಜಿಲ್ಲಾ ಕುಟುಂಬ ಕಲ್ಯಾಣಾಧಿ ಕಾರಿ ಡಾ| ಅಶ್ವಥ್ ಬಾಬು ಮಾತನಾಡಿ, 1987, ಜು.11 ರಂದು ಯುಗೋಸ್ಲೇವಿಯಾದಲ್ಲಿನ ಗಂಡುಮಗುವೊಂದು ವಿಶ್ವದ ಜನಸಂಖ್ಯೆಯು 500ನೇ ಕೋಟಿಯ ಪ್ರಜೆಯಾಗಿ ಹುಟ್ಟಿದ್ದು, ಆ ದಿನವನ್ನು ಯುನಿಸೆಫ್ ವಿಶ್ವಜನಸಂಖ್ಯೆ ದಿನವನ್ನಾಗಿ ಆಚರಿಸಲು ನಿರ್ಧರಿಸಿತು.
ದೇಶದಲ್ಲಿ ಜನಸಂಖ್ಯೆ ದರವು 2001-2011ರ ವೇಳೆಗೆ ಶೇ.17.64ಕ್ಕೆ ಇಳಿದಿದೆ. ಮರಣ ಪ್ರಮಾಣವು ಶೇ.7.1ಕ್ಕೆ ಬಂದಿದೆ. ಜಿಲ್ಲೆಯಲ್ಲಿ 2011ರ ಜನಗಣತಿಯಂತೆ 1,137,961 ಇದೆ ಎಂದು ಮಾಹಿತಿ ನೀಡಿದರು.
ಆರ್.ಸಿ.ಎಚ್. ಡಾ| ಭರತ್ ಮಾತನಾಡಿದರು. ಡಾ| ಹರೀಶ್‌ಬಾಬು, ಸಹಾಯಕ ಆಡಳಿತ ವಿಭಾಗಾಧಿ ಕಾರಿ ಪ್ರಶಾಂತ್, ಹರ್ಷ, ಸಿಎಂಡಿ, ಎನ್‌ಎಚ್‌ಎಂ, ಆರ್‌ಸಿ ಎಚ್ ವಿಭಾಗದ ಸಿಬ್ಬಂದಿ ಇದ್ದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿ ಕಾರಿ ವೈ.ಎಂ. ಲಲಿತಾ ಸ್ವಾಗತಿಸಿ, ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Perth test: ಜಸ್ಪ್ರೀತ್ ಬುಮ್ರಾ ಬೌಲಿಂಗ್ ಶೈಲಿ ಅನುಮಾನ: ಏನಿದು ವಿವಾದ?
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Perth test: ಜಸ್ಪ್ರೀತ್ ಬುಮ್ರಾ ಬೌಲಿಂಗ್ ಶೈಲಿ ಅನುಮಾನ: ಏನಿದು ವಿವಾದ?
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.