ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಕಾರು : ಕಾರಿನಲ್ಲಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು
Team Udayavani, Jul 9, 2021, 10:52 PM IST
ಅಲ್ದೂರು : ಶಾರ್ಟ್ ಸರ್ಕ್ಯೂಟ್ ನಿಂದ ಅಲ್ಟೋ ಕಾರೊಂದು ಹೊತ್ತಿ ಉರಿದ ಪರಿಣಾಮ ಕಾರಿನಲ್ಲಿದ್ದ ವ್ಯಕ್ತಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ಸಮೀಪದ ವಸ್ತಾರೆ ಗ್ರಾಮದ ಬಳಿ ಶುಕ್ರವಾರ ರಾತ್ರಿ ಸಂಭವಿಸಿದೆ.
ಮೃತ ವ್ಯಕ್ತಿಯನ್ನು ಆರೆನೂರು ಗ್ರಾಮದ ನಿವಾಸಿ ರಘು ಎಂದು ತಿಳಿದು ಬಂದಿದ್ದು ಕಾರಿನಲ್ಲಿ ಒಬ್ಬರೆ ಇದ್ದು ಚಿಕ್ಕಮಗಳೂರಿಗೆ ಹೋಗಿ ಆಲ್ದೂರಿಗೆ ಬರುವ ಮಾರ್ಗ ಮಧ್ಯೆ ಈ ದುರ್ಘಟನೆ ಸಂಭವಿಸಿದೆ.
ಕಾರಿಗೆ ಬೆಂಕಿ ಹಬ್ಬಿದ ಕೂಡಲೆ ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನಿಸಿದರು ಸಾಧ್ಯವಾಗಲಿಲ್ಲ, ರಸ್ತೆ ಸಂಪೂರ್ಣ ಟ್ರಾಫಿಕ್ ಜ್ಯಾಮ್ ಆಗಿದ್ದು ನಂತರ ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಬಂದು ಬೆಂಕಿ ನಂದಿಸಿ ಕಾರಿನಲಿದ್ದ ಮೃತದೇಹವನ್ನು ಹೊರತೆಗೆದು ವಾಹನಗಳ ಓಡಾಟ ಕ್ಕೆ ಅನುಕೂಲ ಮಾಡಿಕೊಟ್ಟರು.
ಇದನ್ನೂ ಓದಿ :ಎಚ್ಡಿಕೆ-ಸುಮಲತಾ ವಾಕ್ ಸಮರ ತಮಾಷೆಯಾಗಿದೆ, ಕೇಳಲು ನಮಗೆ ಸಮಯವಿಲ್ಲ : ಡಿಸಿಎಂ ಸವದಿ
ಮೃತ ವ್ಯಕ್ತಿ ರಘು ಕಾಫಿ, ಟಿಂಬರ್ ವ್ಯಾಪಾರ ಮಾಡುತ್ತಿದ್ದರು. ಘಟನಾ ಸ್ಥಳಕ್ಕೆ ಆಲ್ದೂರು ಪಿಎಸ್ಐ ಶಿವರುದ್ರಮ್ಮ ಹಾಗು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣ: ಲೋಕಾಯುಕ್ತದಿಂದ ಬಿಎಸ್ವೈ ವಿಚಾರಣೆ
Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ
Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್ ಸೀಮಿತ: ಆರ್. ಅಶೋಕ್
BJP; ವಿಪಕ್ಷ ನಾಯಕ ಆರ್. ಅಶೋಕ್ ನಡೆಗೆ ಕಾಂಗ್ರೆಸ್ ಖಂಡನೆ
Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್ಐಟಿ ರಚಿಸಿದ ರಾಜ್ಯ ಸರಕಾರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣ: ಲೋಕಾಯುಕ್ತದಿಂದ ಬಿಎಸ್ವೈ ವಿಚಾರಣೆ
Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ
Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್ ಸೀಮಿತ: ಆರ್. ಅಶೋಕ್
Udupi: ಜಿಲ್ಲೆಯಲ್ಲಿ ಕಾಲರಾ 8 ಪ್ರಕರಣ ಸಕ್ರಿಯ
Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.