ಆಸ್ತಿ ತೆರಿಗೆ ಹೆಚ್ಚಳ ಖಂಡಿಸಿ ಪೋಸ್ಟ್ ಕಾರ್ಡ್ ಚಳವಳಿ
Team Udayavani, Jul 10, 2021, 6:16 PM IST
ಶಿವಮೊಗ್ಗ: ಸ್ವಯಂ ಘೋಷಿತ ಆಸ್ತಿ ತೆರಿಗೆ ಹೆಚ್ಚಳ ವಿರೋಧಿಸಿ ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟದಿಂದ ನಗರದ ಗೋಪಿ ವೃತ್ತದಲ್ಲಿ ಪೋಸ್ಟ್ ಕಾರ್ಡ್ ಚಳವಳಿ ನಡೆಸಲಾಯಿತು.
ಜನ ಕೋವಿಡ್ ಅಲೆಯ ಸಂಕಷ್ಟಕ್ಕೆ ಸಿಲುಕಿದ್ದಾರೆ. ಲಾಕ್‌ಡೌನ್ ನಿಂದಾಗಿ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಇಂತಹ ಸಂದರ್ಭದಲ್ಲಿ ಗಾಯದ ಮೇಲೆ ಬರೆ ಎಳೆದಂತೆ 2021 -22 ನೇ ಸಾಲಿನ ಆಸ್ತಿ ತೆರಿಗೆಯನ್ನು ಕಾನೂನು ತಿದ್ದುಪಡಿ ಮಾಡುವ ಮೂಲಕ ಅವೈಜ್ಞಾನಿಕವಾಗಿ ಹೆಚ್ಚಿಸಲಾಗಿದೆಂದು ಪ್ರತಿಭಟನಾಕಾರರು ದೂರಿದರು.
ಎಸ್‌ಆರ್ ದರ ಆಧರಿಸಿ ವಾಸದ ಮನೆ, ವಾಣಿಜ್ಯ ಕಟ್ಟಡ, ಕೈಗಾರಿಕಾ ಕಟ್ಟಡಗಳು ಮತ್ತು ಖಾಲಿ ನಿವೇಶನಗಳಿಗೆ ಈ ಹಿಂದಿನ ವರ್ಷದ ತೆರಿಗೆ ಮೇಲೆ ಹಲವು ಪಟ್ಟು ಹೆಚ್ಚು ತೆರಿಗೆ ವಿಧಿಸಿ ಜನರ ಮೇಲೆ ಗದಾಪ್ರಹಾರ ಮಾಡಲಾಗಿದೆ. ಬೇರೆ ರಾಜ್ಯಗಳಲ್ಲಿ ಆಸ್ತಿ ತೆರಿಗೆ ಮೇಲೆ ಶೇ.50 ರಷ್ಟು ರಿಯಾಯಿತಿ ನೀಡಲಾಗಿದೆ. ಆದರೆ, ಕರ್ನಾಟಕದಲ್ಲಿ ಇದು ಏಕೆ ಸಾಧ್ಯವಾಗಿಲ್ಲ? ಎಸ್‌ಆರ್ ದರ ಆಧಾರಿತ ತೆರಿಗೆ ಕೈಬಿಡಿ. ತಿದ್ದುಪಡಿ ಮಸೂದೆ ಹಿಂದಕ್ಕೆ ಪಡೆದು ಶೇ.50 ರಷ್ಟು ವಿನಾಯಿತಿ ಘೋಷಿಸಬೇಕು. ಇಂತಹ ಸಂಕಷ್ಟದ ಸಮಯದಲ್ಲಿ ಹೆಚ್ಚಳವಾದ ಆಸ್ತಿ ತೆರಿಗೆ ಭರಿಸಲು ಸಾಧ್ಯವಿಲ್ಲ ಎಂದು ಪೋಸ್ಟ್ ಕಾರ್ಡ್ ನಲ್ಲಿ ಬರೆಯುವಂತೆ ಪ್ರತಿಭಟನಾಕಾರರು ಸಾರ್ವಜನಿಕರಿಗೆ ಮನವಿ ಮಾಡಿದರು.
ಒಕ್ಕೂಟದ ಪ್ರಮುಖರಾದ ಕೆ.ವಿ. ವಸಂತಕುಮಾರ್, ಡಾ|ಎನ್.ಎಲ್. ನಾಯಕ್, ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್, ಡಿ.ಜಿ. ಮಂಜುನಾಥ್, ಸತೀಶ್ ಕುಮಾರ್ ಶೆಟ್ಟಿ, ಪುಷ್ಪಾ ಶೆಟ್ಟಿ, ಎಸ್.ಬಿ. ಅಶೋಕ್ ಕುಮಾರ್, ವಿಜಯಕುಮಾರ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!
Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್ ನಿಂದ ಸುಳ್ಳು ಆರೋಪ: ರಾಘವೇಂದ್ರ
Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.