ಎರಡನೇ ಡೋಸ್ ಪಡೆಯದಿದ್ದರೆ ರೋಗ ನಿರೋಧಕ ಶಕ್ತಿ ವೃದ್ಧಿಯಾಗುವುದಿಲ್ಲ: ಆರೋಗ್ಯ ಇಲಾಖೆ
Team Udayavani, Jul 10, 2021, 7:16 PM IST
ಬೆಂಗಳೂರು : ಕೊರೊನಾ ಲಸಿಕೆ ಎರಡನೇ ಡೋಸ್ ಪಡೆಯದಿದ್ದರೆ ರೋಗ ನಿರೋಧಕ ಶಕ್ತಿ ವೃದ್ಧಿಯಾಗುವುದಿಲ್ಲ. ಆದ್ದರಿಂದ ಎಲ್ಲರೂ ಕಡ್ಡಾಯವಾಗಿ ಎರಡನೇ ಡೋಸ್ ಪಡೆದುಕೊಳ್ಳಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಕೆಲವರು ಎರಡನೇ ಡೋಸ್ ಲಸಿಕೆ ಹಾಕಿಸಿಕೊಳ್ಳಲು ಹಿಂದೇಟು ಹಾಕುತ್ತಿರುವ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ.
ಈ ಮಧ್ಯೆ, ಗರ್ಭಿಣಿಯರು ಹಾಗೂ ಹಾಲುಣಿಸುವ ತಾಯಂದಿರು ಲಸಿಕೆ ಪಡೆದುಕೊಳ್ಳುವಂತೆ ಕೆಂದ್ರ ಆರೋಗ್ಯ ಸಚಿವಾಲಯ ಮಾರ್ಗಸೂಚಿ ಹೊರಡಿಸಿದೆ.
ಕೊವ್ಯಾಕ್ಸಿನ್ ಲಸಿಕೆ ಪಡೆದವರು 4 ವಾರಗಳ ಬಳಿಕ ಹಾಗೂ ಕೊವಿಶೀಲ್ಡ್ ಲಸಿಕೆ ಪಡೆದವರು 12 ವಾರಗಳ ಬಳಿಕ ಎರಡನೇ ಡೋಸ್ ಹಾಕಿಸಿಕೊಳ್ಳಬೇಕು. ಮೊದಲ ಡೋಸ್ ಪಡೆದ ಬಳಿಕ ಕೊರೊನಾ ಸೋಂಕು ತಗಲಿದ್ದರೆ ಗುಣಮುಖರಾದ ಮೂರು ತಿಂಗಳ ಬಳಿಕ ಎರಡನೇ ಡೋಸ್ ಪಡೆದುಕೊಳ್ಳಬೇಕು ಎಂದು ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕಿ ಮತ್ತು ಕೊರೊನಾ ಲಸಿಕೆ ವಿಭಾಗದ ರಾಜ್ಯ ಮುಖ್ಯಸ್ಥೆ ಡಾ| ಅರುಂಧತಿ ಚಂದ್ರಶೇಖರ್ ತಿಳಿಸಿದ್ದಾರೆ.
ಇದನ್ನೂ ಓದಿ : ಮುಂದಿನ ಐದು ವರ್ಷದಲ್ಲಿ ರಾಜ್ಯದ 250 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮೇಲ್ದರ್ಜೆಗೆ : ಸುಧಾಕರ್
ಗರ್ಭಿಣಿಯರು ಲಸಿಕೆ ಪಡೆಯುವುದರಿಂದ ಮಗುವಿನ ಮೇಲೆ ಯಾವುದೇ ಅಡ್ಡ ಪರಿಣಾಮ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಮಕ್ಕಳ ಮೇಲೆ ಅಧ್ಯಯನ
ಕೊರೊನಾ ಲಸಿಕೆಯನ್ನು ಮಕ್ಕಳ ಮೇಲೆ ಅಧ್ಯಯನ ನಡೆಯುತ್ತಿರುವ ಕಾರಣ ಪ್ರಸ್ತುತ ಅವರಿಗೆ ಲಸಿಕೆ ನೀಡುತ್ತಿಲ್ಲ. 18 ವರ್ಷ ಮೇಲ್ಪಟ್ಟವರಲ್ಲಿ ದುರ್ಬಲ ವರ್ಗದವರು, ಮುಂಚೂಣಿ ಕಾರ್ಯಕರ್ತರು, ಅಂಗವಿಕಲರು ಸಹಿತ ವಿವಿಧ ವರ್ಗದವರನ್ನು ಗುರುತಿಸಿ, ಆದ್ಯತೆ ಮೇರೆಗೆ ಲಸಿಕೆ ನೀಡಲಾಗುತ್ತಿದೆ. ಶ್ರೀಘ್ರದಲ್ಲೇ ಎಲ್ಲರಿಗೂ ಲಸಿಕೆ ಒದಗಿಸಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ
Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ
ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್ ಮನವಿ
MUST WATCH
ಹೊಸ ಸೇರ್ಪಡೆ
Whale: ಅಂಬರ್ ಗ್ರೀಸ್ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.