ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಸೈಕಲ್ ಜಾಥಾ
Team Udayavani, Jul 10, 2021, 9:47 PM IST
ಹಾಸನ: ಪೆಟ್ರೋಲ್, ಡಿಸೇಲ್ ಹಾಗೂ ಅಡುಗೆಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಖಂಡಿಸಿ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್,ಸಂಸದ ಡಿ.ಕೆ.ಸುರೇಶ್ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್‌ಮುಖಂಡರು ಹಾಗೂ ಕಾರ್ಯಕರ್ತರು ನಗರದ ಪ್ರಮುಖ ಬೀದಿಗಳಲ್ಲಿ ಸೈಕಲ್ ಜಾಥಾ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ನಗರದ ಬಿ.ಎಂ.ರಸ್ತೆಯಲ್ಲಿರುವ ಜಿಲ್ಲಾ ಕಾಂಗ್ರೆಸ್‌ಭವನದಿಂದ ಹೊರಟ ಸೈಕಲ್ ಜಾಥಾ ಬಿಎಂ ರಸ್ತೆಮೂಲಕ ಎನ್.ಆರ್.ವೃತ್ತ, ದೇವಿಗೆರೆ ವೃತ್ತದ ಮೂಲಕಪ್ರವಾಸಿ ಮಂದಿರದ ವರೆಗೆ ಜಾಥಾ ನಡೆಸಿ ರಾಜ್ಯಹಾಗೂ ಕೇಂದ್ರ ಸರ್ಕಾರದ ಜನ ವಿರೋಧಿ ನೀತಿವಿರುದ್ಧಕಾರ್ಯಕರ್ತರು ಘೋಷಣೆ ಕೂಗಿದರು.
ಕೊರೊನಾ ಸಂಕಷ್ಟದ ಸಂದರ್ಭಲ್ಲಿ ಪೆಟ್ರೋಲ್,ಡೀಸೆಲ್, ಅಡುಗೆ ಅನಿಲ ಹಾಗೂ ಅಗತ್ಯ ವಸ್ತುಗಳಬೆಲೆ ಏರಿಕೆ ಮಾಡಿರುವುದು ಖಂಡನೀಯ. ಬಿಜೆಪಿ ಸರ್ಕಾರ ಬೆಲೆ ಇಳಿಕೆ ಮಾಡುವವರೆಗೂ ಕಾಂಗ್ರೆಸ್‌ಕಾರ್ಯಕರ್ತರು ನಿರಂತರ ಹೋರಾಟ ಮಾಡುವರುಎಂದು ಮುಖಂಡರು ಎಚ್ಚರಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಾವಗಲ್ ಮಂಜುನಾಥ್,ಮಾಜಿ ಸಚಿವ ಬಿ.ಶಿವರಾಮು, ಎಂಎಲ್‌ಸಿ ಗೋಪಾಲಸ್ವಾಮಿ, ಪಕ್ಷದ ಮುಖಂಡರಾದ ಎಚ್.ಕೆ.ಜವರೇಗೌಡ,ಸಿ.ಎಸ್.ಪುಟ್ಟೇಗೌಡ, ಎಚ್.ಕೆ.ಮಹೇಶ್, ಬಾಗೂರುಮಂಜೇಗೌಡ, ಮಾಜಿ ಮೇಯರ್ ಹುಚ್ಚಪ್ಪ, ಮಂಜುನಾಥ್ ಭಂಡಾರಿ, ಕಟ್ಟೆ ಪ್ರಕಾಶ್ ಸೇರಿದಂತೆ ಹಲವುಮುಖಂಡರು, ಕಾರ್ಯಕರ್ತರು ಪ್ರತಿಭಟನೆಯಲ್ಲಿಪಾಲ್ಗೊಂಡಿದ ªರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!
Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್ ವಿಚಾರವಾಗಿ ವಾಗ್ವಾದ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.