ಹಾವೇರಿ: ಸಾಮಾಜಿಕ ಜಾಲತಾಣ ಬಳಸಿ ಯುವಕನಿಂದ 2.50 ಲಕ್ಷ ವಸೂಲಿ ಮಾಡಿದ ಭೂಪ.!
Team Udayavani, Jul 11, 2021, 1:17 PM IST
ಹಾವೇರಿ: ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳನ್ನು ಬಳಸಿ ಮೊಸದಿಂದ ಹಣ ವಸೂಲಿ ಮಾಡುವ ಪ್ರಕರಣಗಳು ಹೆಚ್ಚುತ್ತಿದ್ದು, ಇದಕ್ಕೆ ಸಾಕ್ಷಿ ಎಂಬಂತೆ ಫೇಸ್‍ಬುಕ್‍ನಲ್ಲಿ ಪರಿಚಯ ಮಾಡಿಕೊಂಡು 2.50 ಲಕ್ಷ ರೂ, ಫೋನ್ ಪೇ ಮತ್ತು ಪೇಟಿಎಂ ಮೂಲಕ ಯುವಕನೋರ್ವನಿಂದ ಹಣ ಹಾಕಿಸಿಕೊಂಡು ಮೋಸ ಮಾಡಿರುವ ಘಟನೆ ಜಿಲ್ಲೆಯ ಹಾನಗಲ್ಲ ಪಟ್ಟಣದಲ್ಲಿ ನಡೆದಿದೆ.
ಒಂದು ವರ್ಷದ ಹಿಂದೆ ಹಾನಗಲ್ಲ ಯುವಕನೊಬ್ಬನಿಗೆ ಫೇಸ್‍ಬುಕ್‍ನಲ್ಲಿ ಪರಿಚಯವಾದ ಮಲ್ಲನಗೌಡ ಎಂಬ ವ್ಯಕ್ತಿ ದೂರವಾಣಿ ಮೂಲಕ ಸಂಪರ್ಕಕ್ಕೆ ಬಂದು, ತನ್ನ ಗೆಳತಿ ಪೂರ್ವಿ ಶೇಟ್ ಅವರ ತಾಯಿಗೆ ಬ್ರೇನ್ ಟ್ಯೂಮರ್ ಆಗಿದೆ. ಅವಳಿಗೆ ಆಸ್ಪತ್ರೆ ಖರ್ಚಿಗೆ ಹಣಬೇಕು. 2.50 ಲಕ್ಷ ರೂ., ಹಣ ನೀಡಿದರೆ ಆಕೆ ಗುಣವಾದ ಬಳಿಕ ತಾಯಿ 5 ಲಕ್ಷ ಕೊಡುವುದಾಗಿ ನಂಬಿಸಿ, ಹಣ ಪಡೆದಿದ್ದಾನೆ.
ಇದನ್ನೂ ಓದಿ: ‘ಬೇರೆಯವರಿಗೆ ಕೆಸರನ್ನು ಹಚ್ಚಲು ಪ್ರಯತ್ನಿಸಿದರೆ ಮೊದಲು ನಮ್ಮ ಕೈ ಕೆಸರಾಗುತ್ತದೆ’
ಒಂದು ವರ್ಷದಿಂದ ನಿರಂತರ ಹಂತ ಹಂತವಾಗಿ 2.50 ಲಕ್ಷ ರೂ., ಹಾಕಿಸಿಕೊಂಡು ಈಗ ಹಣ ಕೊಡದೇ ನಾಪತ್ತೆಯಾಗಿದ್ದಾರೆ. ಸದ್ಯ ಮೋಸ ಹೋದ ಯುವಕ, ಮಲ್ಲನಗೌಡ ಮತ್ತು ಆತನ ಗೆಳತಿ ಆತ್ಮ ಜೋಯ್ಸ್, ಪೂರ್ವಿ ಶೇಟ್ ಸೇರಿದಂತೆ ಮೂವರ ಮೇಲೆ ಹಾವೇರಿ ಸಿ.ಇ.ಎನ್.ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.