ತಾಯಿ-ಮಕ್ಕಳ ಆಸ್ಪತ್ರೆ ಕಾಮಗಾರಿ ಶೀಘ್ರ ಮುಗಿಸಿ
Team Udayavani, Jul 11, 2021, 9:09 PM IST
ದಾವಣಗೆರೆ: ದಾವಣಗೆರೆ ನಗರದ ಚಿಗಟೇರಿ ಜಿಲ್ಲಾಸ್ಪತ್ರೆ ಆವರಣದಲ್ಲಿ ನಿರ್ಮಿಸಲಾಗುತ್ತಿರುವ 100 ಹಾಸಿಗೆ ಸಾಮರ್ಥ್ಯದ ತಾಯಿ-ಮಕ್ಕಳ ಆಸ್ಪತ್ರೆ ಕಟ್ಟಡ ಮುಂದಿನ ಸಂಕ್ರಾಂತಿ ಹಬ್ಬದ ವೇಳೆಗೆ ಉದ್ಘಾಟನೆಗೆ ಸಿದ್ಧವಾಗಿರಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಇಲಾಖೆ ಶಿಕ್ಷಣ ಸಚಿವ ಡಾ| ಕೆ. ಸುಧಾಕರ್, ಅಧಿಕಾರಿಗಳಿಗೆ ಆದೇಶ ನೀಡಿದರು.
ಜಿಲ್ಲಾಸ್ಪತ್ರೆ ಆವರಣದಲ್ಲಿ ನಿರ್ಮಿಸಲಾಗುತ್ತಿರುವ ತಾಯಿ-ಮಕ್ಕಳ ಆಸ್ಪತ್ರೆ ಹಾಗೂ ಟ್ರಾಮಾ ಕೇರ್ ಸೆಂಟರ್ ಕಟ್ಟಡ ಕಾಮಗಾರಿಯನ್ನು ಶನಿವಾರ ಪರಿಶೀಲಿಸಿ ಅವರು ಮಾತನಾಡಿದರು. ತಾಯಿ, ಮಕ್ಕಳ ಆರೈಕೆ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ 15 ತಿಂಗಳ ಕಾಲಮಿತಿ ನಿಗದಿಪಡಿಸಲಾಗಿತ್ತು.ಅದರಲ್ಲಿ ಈಗಾಗಲೇ 12 ತಿಂಗಳು ಕಳೆದಿದ್ದು, ಇನ್ನೂ ನಿರ್ಮಾಣ ಕಾರ್ಯ ಪೂರ್ಣಗೊಳ್ಳುವ ಹಂತಕ್ಕೆ ಬಂದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇದಕ್ಕೆ ಉತ್ತರಿಸಿದ ಗುತ್ತಿಗೆದಾರರು, ಕೋವಿಡ್ ಲಾಕ್‌ಡೌನ್ ಕಾರಣದಿಂದಾಗಿ ಕಾರ್ಮಿಕರ ಕೊರತೆ, ಕಟ್ಟಡ ಸಾಮಗ್ರಿ ಅಲಭ್ಯತೆ ಸೇರಿದಂತೆ ಇನ್ನಿತರ ಕಾರಣಕ್ಕೆ ಕಟ್ಟಡ ನಿರ್ಮಾಣ ಕಾರ್ಯ ನಿರೀಕ್ಷಿತ ಪ್ರಮಾಣದಲ್ಲಿ ಆಗಿಲ್ಲ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಕೋವಿಡ್ ಲಾಕ್‌ಡೌನ್ ಸಂದರ್ಭದಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿಗೆ, ಕಾರ್ಮಿಕರ ಹಾಗೂ ಸಾಮಗ್ರಿಗಳ ಸಾಗಾಣಿಕೆಗೆ ಯಾವುದೇ ನಿರ್ಬಂಧ ಇರಲಿಲ್ಲ.
ಅಲ್ಲದೆ ಆಸ್ಪತ್ರೆ ಕಟ್ಟಡ ಅತ್ಯಂತ ಅವಶ್ಯಕ ಕ್ಷೇತ್ರದ ನಿರ್ಮಾಣ ಕಾಮಗಾರಿಯಾಗಿದ್ದು, ನೀವು ನೀಡುವ ಕಾರಣ ಸಮಂಜಸವಾಗಿಲ್ಲ. ಆದಾಗ್ಯೂ ಇನ್ನು ಆರು ತಿಂಗಳ ಒಳಗಾಗಿ ಕಟ್ಟಡ ನಿರ್ಮಾಣ ಕಾರ್ಯ ಪೂರ್ಣಗೊಂಡು ಸಂಕ್ರಾಂತಿ ಹಬ್ಬದ ವೇಳೆಗೆ ಉದ್ಘಾಟನೆಗೆ ಸಿದ್ಧವಾಗಿರಬೇಕು. ಕಾಮಗಾರಿ ಗುಣಮಟ್ಟದಲ್ಲಿ ಯಾವುದೇ ಲೋಪ ದೋಷಗಳು ಕಂಡುಬಂದರೆ ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ವೈದ್ಯಕೀಯ ಕಾಲೇಜಿಗೆ ಸ್ಥಳ ಪರಿಶೀಲನೆ: ಚಿಗಟೇರಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ನಿರ್ಮಾಣ ಮಾಡಲು ಸಚಿವರು ಸ್ಥಳ ಪರಿಶೀಲನೆ ನಡೆಸಿದರು. ಜಿಲ್ಲಾ ಆಸ್ಪತ್ರೆ ಆವರಣದ ಸಂಪೂರ್ಣ ನಕ್ಷೆ, ಪ್ರಸ್ತಾವಿತ ಸರ್ಕಾರಿ ಮೆಡಿಕಲ್ ಕಾಲೇಜಿಗೆ ಹಾಗೂ ಜಯದೇವ ಹೃದ್ರೋಗ ಉಪ ಕೇಂದ್ರಕ್ಕೆ ನಿಗದಿಪಡಿಸಿರುವ ನಿವೇಶನದ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಡಾ| ಜಿ.ಎಂ. ಸಿದ್ದೇಶ್ವರ, ದಾವಣಗೆರೆ ನಗರದ ಚಿಗಟೇರಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪಿಸುವುದು ಶತಃಸಿದ್ಧ. ಈ ನಿಟ್ಟಿನಲ್ಲಿ ಭೂಮಿ ಗುರುತಿಸಿ ನಕ್ಷೆ ಸಹಿತ ವರದಿ ಸಲ್ಲಿಸಲಾಗಿದೆ. ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಶೀಘ್ರವೇ ಅನುಮೋದನೆ ಪಡೆದು ಆದಷ್ಟು ಬೇಗ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದರು.
ಶಾಸಕರಾದ ಎಸ್.ಎ. ರವೀಂದ್ರನಾಥ್, ಎಸ್.ವಿ. ರಾಮಚಂದ್ರ, ಪ್ರೊ| ಲಿಂಗಣ್ಣ, ಜಿಪಂ ಸಿಇಒ ಡಾ| ವಿಜಯ ಮಹಾಂತೇಶ್, ಡಿಎಚ್‌ಒ ಡಾ| ನಾಗರಾಜ್, ಜಿಲ್ಲಾ ಸರ್ಜನ್ ಡಾ| ಜಯಪ್ರಕಾಶ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
Davangere: ಮಹಿಳೆಯ ಮೇಲೆ ಕರಡಿ ದಾಳಿ
Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
Davanagere: ವಿಶೇಷ ತೆರಿಗೆ ಕಾರ್ಯಾಚರಣೆ: ಒಂದೇ ದಿನ 1.65 ಕೋಟಿ ತೆರಿಗೆ ಸಂಗ್ರಹ
Davanagere: ಅಸೆಂಬ್ಲಿ ಅಧಿವೇಶನಕ್ಕೆ ಮೊದಲು ಸಿದ್ದರಾಮಯ್ಯ ರಾಜೀನಾಮೆ: ಆರ್.ಅಶೋಕ್
MUST WATCH
ಹೊಸ ಸೇರ್ಪಡೆ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.