ಕೋವಿಡ್ ಮೃತರ ಕುಟುಂಬಕ್ಕೆ ಪರಿಹಾರ ನೀಡಲು ಒತ್ತಾಯ
Team Udayavani, Jul 11, 2021, 10:20 PM IST
ಸಾಗರ: ತಾಲೂಕಿನಲ್ಲಿ ಕೋವಿಡ್ ನಿಂದ ಮೃತಪಟ್ಟವರ ಅವಲಂಬಿತ ಕುಟುಂಬಗಳಿಗೆ ಸುಪ್ರೀಂ ಕೋರ್ಟ್ ಸೂಚಿಸಿರುವ ಪರಿಹಾರ ದೊರೆಯುವ ತನಕ ಹೋರಾಟದಿಂದ ವಿಶ್ರಮಿಸುವುದಿಲ್ಲ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದರು.
ತಾಲೂಕಿನ ಜೋಗ್- ಕಾರ್ಗಲ್ ಪಪಂ ವ್ಯಾಪ್ತಿಯಲ್ಲಿ ಕೋವಿಡ್‌ನಿಂದ ಮೃತಪಟ್ಟ ಕುಟುಂಬಗಳ ಅವಲಂಬಿತರಿಗೆ ಆಹಾರ ಕಿಟ್ ವಿತರಿಸಿ ಮಾತನಾಡಿದ ಅವರು, ಕೆಪಿಸಿಸಿ ಆದೇಶದಂತೆ ಕೋವಿಡ್‌ನಿಂದ ಮೃತಪಟ್ಟವರ ಮತ್ತು ಅವಲಂಬಿತರ ಸಮಗ್ರ ಮಾಹಿತಿಯನ್ನು ಸಂಗ್ರಹಿಸುತ್ತಿದೆ. ಪರಿಹಾರ ಪಡೆಯುವಲ್ಲಿ ಬೇಕಾಗುವ ಮಾರ್ಗದರ್ಶನವನ್ನು ವಾರ್ಡ್ ವಾರಿಯರ್ಸ್ ಮೂಲಕ ನೊಂದವರಿಗೆ ನೀಡಲಾಗುತ್ತಿದೆ ಎಂದು ತಿಳಿಸಿದರು.
ಕೆಪಿಸಿಸಿ ಕಾರ್ಯದರ್ಶಿ ಡಾ| ರಾಜನಂದಿನಿ ಮಾತನಾಡಿ, ಡಿ.ಕೆ.ಶಿವಕುಮಾರ್ ಅವರು ನಿತ್ಯ ತಾಲೂಕುವಾರು, ಜಿಲ್ಲಾವಾರು ಕೋವಿಡ್ ಪೀಡಿತರ ಮತ್ತು ಮೃತಪಟ್ಟ ಸೋಂಕಿತರ ಬಗ್ಗೆ ವರದಿಯನ್ನು ಕೇಳಿ ಪಡೆಯುತ್ತಿದ್ದಾರೆ. ಈ ನಿಟ್ಟಿನಲ್ಲಿ ತಾಲೂಕಿನ ನಗರ ಪಾಲಿಕೆ, ಪಪಂ ಮತ್ತು 35 ಗ್ರಾಪಂಗಳಿಂದ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ತಿಳಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಆರ್.ಜಯಂತ್, ಕಾರ್ಗಲ್ ಪಪಂ ವ್ಯಾಪ್ತಿಯ ಕಾಂಗ್ರೆಸ್ ಪ್ರಮುಖರು, ಪಂಚಾಯ್ತಿ ಸದಸ್ಯರು, ವಾರ್ಡ್ ವಾರಿಯರ್ಸ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಾಗರಕ್ಕೆ ಆಗಮಿಸಿದ ಡಾ.ನಾ.ಡಿಸೋಜಾ ಪಾರ್ಥಿವ ಶರೀರ; ಗಣ್ಯರು, ಅಧಿಕಾರಿಗಳಿಂದ ಅಂತಿಮ ದರ್ಶನ
Hosanagar: ಪ್ರಪಾತಕ್ಕೆ ಉರುಳಿದ ಬಸ್; ಸಣ್ಣ ಪುಟ್ಟ ಗಾಯಗಳಿಂದ ಪ್ರಯಾಣಿಕರು ಪಾರು
Sarji sweet box case: ಲವ್ ಫೈಲ್ಯೂರ್ ಆಗಿದ್ದಕ್ಕೆ ಸೇಡಿಗಾಗಿ ಕೃತ್ಯ ಮಾಡಿದ್ದ ಲಾಯರ್!
ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…
ಸಾಹಿತ್ಯದಾಚೆಗೂ ಬೆಳೆದು ನಿಂತ ಸಾಗರದ ನಾ.ಡಿ’ಸೋಜಾ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ನೇತ್ರಾವತಿ ಸೇತುವೆ ಮೇಲಿನ ಸಿಸಿ ಕೆಮರಾಗಳಿಗಿಲ್ಲ ನಿರ್ವಹಣೆ ಭಾಗ್ಯ
Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು
ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು
Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.