ಕೇರಳದಲ್ಲಿ ಮತ್ತೆ ಮೂರು ಝೀಕಾ ದೃಢ : ರಾಜ್ಯದಲ್ಲಿ ಪ್ರಕರಣಗಳ ಸಂಖ್ಯೆ 18ಕ್ಕೆ ಏರಿಕೆ
Team Udayavani, Jul 12, 2021, 6:45 AM IST
ತಿರುವನಂತಪುರ/ಗುವಾಹಾಟಿ: ಕೇರಳದಲ್ಲಿ ರವಿವಾರ ಮತ್ತೆ ಮೂರು ಝೀಕಾ ಪ್ರಕರಣ ಗಳು ದೃಢಪಟ್ಟಿವೆ. ಹೀಗಾಗಿ, ರಾಜ್ಯದಲ್ಲಿ ದೃಢ ಪಟ್ಟ ಪ್ರಕರಣಗಳ ಸಂಖ್ಯೆ 18ಕ್ಕೆ ಏರಿಕೆಯಾಗಿದೆ.
ತಿರುವನಂತಪುರ, ತ್ರಿಶ್ಶೂರ್ ಮತ್ತು ಕಲ್ಲಿಕೋಟೆಯಲ್ಲಿರುವ ಸರಕಾರಿ ವೈದ್ಯ ಕಾಲೇಜುಗಳಲ್ಲಿ ಸೋಂಕು ದೃಢಪಡಿಸುವ ವ್ಯವಸ್ಥೆ ಮಾಡಲಾಗಿದೆ. ಆಲಪ್ಪಳದಲ್ಲಿ ರಾಷ್ಟ್ರೀಯ ವೈರಾಣು ಸಂಸ್ಥೆಯ ಘಟಕವನ್ನೂ ಆರಂಭಿಸ ಲಾಗಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.
ಎರಡು ಹಂತಗಳಲ್ಲಿ 27 ಮಾದರಿಗಳನ್ನು ಕಳುಹಿಸಲಾಗಿತ್ತು. ಮೂರನೇ ಹಂತದಲ್ಲಿ 8 ಮಾದರಿಗಳನ್ನು ಕಳುಹಿಸಿದ್ದರ ಪೈಕಿ ಮೂವರಿಗೆ ಸೋಂಕು ದೃಢಪಟ್ಟಿದೆ ಎಂದರು. ಸೋಂಕಿನ ಪತ್ತೆಗಾಗಿ 2,100 ಕಿಟ್ಗಳನ್ನು ರಾಷ್ಟ್ರೀಯ ವೈರಾಣು ಸಂಸ್ಥೆಯಿಂದ ಕೇರಳಕ್ಕೆ ನೀಡಲಾಗಿದೆ.
ಅಸ್ಸಾಂನಲ್ಲಿ 2.5 ಲಕ್ಷ ರೂ. ಪರಿಹಾರ: ಕೊರೊನಾದಿಂದಾಗಿ ಪತಿಯನ್ನು ಕಳೆದು ಕೊಂಡ ಮಹಿಳೆಯರಿಗೆ 2.5 ಲಕ್ಷ ರೂ.ಗಳ ಆರ್ಥಿಕ ನೆರವು ನೀಡಲು ಅಸ್ಸಾಂ ಸರಕಾರನಿರ್ಧರಿಸಿದೆ. ಕುಟುಂಬದ ಆದಾಯ ವರ್ಷಕ್ಕೆ 5 ಲಕ್ಷ ರೂ.ಗಳಿಗಿಂತ ಕಡಿಮೆಯಿದ್ದರೆ, ಅಂಥವರಿಗೆ ಮಾತ್ರ ಈ ನೆರವು ನೀಡಲಾಗುವುದು ಎಂದು ಸಿಎಂ ಹಿಮಂತ್ ಬಿಸ್ವಾ ಶರ್ಮಾ ಹೇಳಿದ್ದಾರೆ. “ಮುಖ್ಯಮಂತ್ರಿಳ ಕೋವಿಡ್-19 ವಿಧವಾ ನೆರವು ಯೋಜನೆ’ಗೆ ರವಿವಾರ ಚಾಲನೆ ನೀಡಿದ ಅವರು, 176 ಅರ್ಹ ಫಲಾನುಭವಿಗಳಿಗೆ ತಲಾ 2.5 ಲಕ್ಷ ರೂ.ಗಳನ್ನು ವಿತರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
MUST WATCH
ಹೊಸ ಸೇರ್ಪಡೆ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Team India: ದ.ಆಫ್ರಿಕಾ ವಿರುದ್ದದ ಗೆಲುವಿನೊಂದಿಗೆ ಪಾಕ್ ದಾಖಲೆ ಮುರಿದ ಟೀಂ ಇಂಡಿಯಾ
Udupi: ಸಿಎನ್ಜಿ ಪೂರೈಕೆಯಲ್ಲಿ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಸಂಸದ ಕೋಟ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.