![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
Team Udayavani, Jul 12, 2021, 11:27 AM IST
ಹನೂರು:(ಚಾಮರಾಜನಗರ): ಪ್ರಸಿದ್ದ ಪ್ರವಾಸಿ ತಾಣವಾಗಿರುವ ಮಲೆ ಮಹದೇಶ್ವರ ದರ್ಶನ ಪಡೆಯಲು ಕಾರಿನಲ್ಲಿ ಬರುತ್ತಿದ್ದ ಭಕ್ತರ ಕಾರೊಂದು ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಅಪಘಾತಕ್ಕೊಳಗಾದ ಘಟನೆ ಮಹದೇಶ್ವರ ಬೆಟ್ಟದ ತಾಳಬೆಟ್ಟ ಸಮೀಪದ ತಡರಾತ್ರಿ ನಡೆದಿದೆ.
ಮೈಸೂರು ಜಿಲ್ಲೆಯ ವಾಜಮಂಗಲ ಗ್ರಾಮದಿಂದ ಆರು ಮಂದಿ ಸ್ವಿಫ್ಟ್ ಕಾರಿನಲ್ಲಿ ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟಕ್ಕೆ ದೇವರ ದರ್ಶನಕ್ಕೆ ಬರುತ್ತಿದ್ದರು. ತಡರಾತ್ರಿ ಸುಮಾರು 1.30 ರ ವೇಳೆಯಲ್ಲಿ ಕಾರು ಅಪಘಾತಕ್ಕೊಳಗಾಗಿದ್ದು, ಕಾರಿನಲ್ಲಿದ್ದಆರು ಮಂದಿಗೆ ಗಾಯಗಳಾಗಿದೆ. ಇವರಲ್ಲಿ ಇಬ್ಬರಿಗೆ ತೀವ್ರತರವಾದ ಗಾಯವಾಗಿದೆ.
ಇದನ್ನೂ ಓದಿ:ಶಾಸಕ ಸುನೀಲ್ ಕುಮಾರ್ ಸೇರಿ BJP ಮುಖಂಡರ ವಿರುದ್ಧ ಮಾನನಷ್ಟ ಮೊಕದ್ದಮೆ: ರಾಧಾಕೃಷ್ಣ ಹಿರ್ಗಾನ
ಮೈಸೂರು ಜಿಲ್ಲೆಯ ವಾಜ ಮಂಗಲ ಗ್ರಾಮದ ಬಸವರಾಜು (23 ವ), ಗಣೇಶ್ ( 23 ವ) ನವೀನ್ (23 ವ) ಪ್ರತಾಪ್ (25 ವ) ಡಿ.ಶ್ರೀನಿವಾಸ್ (25 ವ) ಅಜಯ್ (22 ವ) ಎಂಬುವವರಿಗೆ ಗಾಯಗೊಂಡಿದ್ದಾರೆ. ಬಸವರಾಜು ಮತ್ತು ಗಣೇಶ್ ರವರಿಗೆ ತೀವ್ರತರವಾದ ಪೆಟ್ಟಾಗಿದೆ. ಗಾಯಾಳುಗಳನ್ನು ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಸರ್ಕಾರಿ ಆಸ್ಪತ್ರಗೆ ಕಳುಹಿಸಲಾಗಿದೆ. ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ತಡರಾತ್ರಿ ಪೊಲೀಸರು ಮತ್ತು ಅಗ್ನಿ ಶಾಮಕ ದಳದವರು ಆಗಮಿಸಿದ್ದರು.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Gundlupete: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸಾವು
Kollegala: ತೀರ್ಥ ಸ್ನಾನಕ್ಕೆ ಹೋದ ಅರ್ಚಕ ಕಾವೇರಿಯಲ್ಲಿ ಮುಳುಗಿ ಸಾವು
Hanur: ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಒಣ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯ ಬಂಧನ
Hanur: ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ
Surathkal: ಆರು ಬಾರಿಯ ಚಾಂಪಿಯನ್, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ
Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್
Sulya: ಪೈಪ್‌ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
You seem to have an Ad Blocker on.
To continue reading, please turn it off or whitelist Udayavani.