ಬೆಳಗಾವಿ ಮಾರುಕಟ್ಟೆಯಲ್ಲಿ ಏಡಿ ಮಾರಾಟ ಭರ್ಜರಿ
Team Udayavani, Jul 12, 2021, 7:47 PM IST
ಬೆಳಗಾವಿ: ಮಳೆಗಾಲ ಶುರುವಾಯಿತೆಂದರೆ ನಗರದಲ್ಲಿ ಏಡಿಗಳ ಮಾರಾಟ ಭರ್ಜರಿ ಆಗಿರುತ್ತದೆ. ಕಳೆದ ಒಂದು ತಿಂಗಳಿಂದ ನಗರದ ಕ್ಯಾಂಪ್ ಪ್ರದೇಶದಲ್ಲಿ ಏಡಿ ಖರೀದಿಗಾಗಿ ಮಾರುಕಟ್ಟೆಯಲ್ಲಿ ಗ್ರಾಹಕರ ಜನಜಂಗುಳಿ ಇದ್ದು, ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ನೆಗಡಿ, ಕೆಮ್ಮು ವಾಸಿ ಮಾಡುವ ಏಡಿಗಳಿಗೆ ಕೊರೊನಾ ಮಹಾಮಾರಿಯಲ್ಲಿ ಬೇಡಿಕೆ ಹೆಚ್ಚಾಗಿದೆ.
ಕೊರೊನಾ ಸಂಕಷ್ಟದಲ್ಲಿ ಪೌಷ್ಟಿಕಾಂಶವುಳ್ಳ ಏಡಿಗಳ ಖರೀದಿಗೆ ಜನ ಮುಗಿಬಿದ್ದಿದ್ದಾರೆ. ಹಿಡಕಲ್ ಡ್ಯಾಂ ಸೇರಿದಂತೆ ವಿವಿಧ ಕಡೆಗಳಿಂದ ಏಡಿ ಮಾರಾಟಗಾರರು ಬಂದಿದ್ದಾರೆ. ಮಳೆ ಹೆಚ್ಚಾಯಿತೆಂದರೆ ಏಡಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತವೆ. ಇತ್ತ ಪಶ್ಚಿಮ ಭಾಗದ ಮಹಾರಾಷ್ಟ್ರದ ಚಂದಗಡ ತಾಲೂಕಿನ ಹಳ್ಳಿಗಳಿಂದಲೂ ಏಡಿಗಳು ಬೆಳಗಾವಿ ಮಾರುಕಟ್ಟೆ ಬರುತ್ತಿವೆ.
ಜೋಡಿ ಏಡಿಗೆ 100-120 ರೂ. ದರ ಇದೆ. ಜನ ಹೆಚ್ಚಾಗಿ ಏಡಿಗಳನ್ನು ಖರೀದಿಸುತ್ತಿದ್ದಾರೆ. ಗೋಣಿ ಚೀಲದಲ್ಲಿ ಏಡಿ ಹಿಡಿದುಕೊಂಡು ಬಂದವರು ಭರ್ಜರಿ ವ್ಯಾಪಾರ ಮಾಡುತ್ತಿದ್ದಾರೆ. ಬೆಳಗಾವಿ ನಗರ ಮತ್ತು ತಾಲೂಕಿನ ವಿವಿಧ ಹಳ್ಳಿಗಳಿಂದ ಗ್ರಾಹಕರು ಏಡಿ ಖರೀದಿಗೆ ಬರುತ್ತಿದ್ದಾರೆ. ಕೋವಿಡ್ ಸಂಕಷ್ಟದಲ್ಲಿ ಏಡಿ ರಾಮಬಾಣ ಇದ್ದಂತೆ. ಹೀಗಾಗಿ ತುಂತುರು ಮಳೆಯಲ್ಲಿ ಏಡಿ ಸವಿಯಲು ಮಾಂಸ ಪ್ರಿಯರು ಮಾರುಕಟ್ಟೆಯತ್ತ ಧಾವಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ
Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ
Manya: ಭಜನ ಮಂದಿರದಿಂದ ಕಳವು ಆರೋಪಿಗಳಿಂದ ಮಾಹಿತಿ ಸಂಗ್ರಹ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
Bramavara: ವಿದ್ಯಾರ್ಥಿ ಕಾಲಿನ ಮೇಲೆ ಸಾಗಿದ ಪಿಕ್‌ಅಪ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.