ನಾಮಫ‌ಲಕಕ್ಕೆ ಮಸಿ : ಕೆಜಿಎಫ್ನಲ್ಲಿ ಪ್ರಕ್ಷುಬ್ಧ ಸ್ಥಿತಿ


Team Udayavani, Jul 13, 2021, 2:49 PM IST

12_kgf_03_1207bg_2

ಕೆಜಿಎಫ್: ನಗರದ ಕುವೆಂಪು ಬಸ್‌ ನಿಲ್ದಾಣದ ದ್ವಾರಬಾಗಿಲ ಮೇಲೆ ತಮಿಳಿನಲ್ಲಿ ಬರೆಯಲಾಗಿದ್ದ ನಾಮಫ‌ಲಕಕ್ಕೆ ಕನ್ನಡ ಚಳವಳಿ ವಾಟಾಳ್‌ ಪಕ್ಷದಅಧ್ಯಕ್ಷ ನಾಗರಾಜ್‌ ಕಪ್ಪು ಮಸಿ ಬಳಿದಿದ್ದನ್ನು ತಮಿಳು ಸಂಘ ವಿರೋಧಿಸಿದ್ದ ರಿಂದ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿದೆ.

ಭಾನುವಾರ ನಗರದ ತಮಿಳು ಸಂಘದ ಪದಾಧಿಕಾರಿಗಳು ಸಭೆ ನಡೆಸಿ ವಾಟಾಳ್‌ ನಾಗರಾಜ್‌ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಮರಳಿ ತಮಿಳು ಭಾಷೆಯಲ್ಲಿ ಬರೆಯಬೇಕು ಎಂದು ನಗರಸಭೆ ಅಧ್ಯಕ್ಷರಿಗೆ ಹಾಗೂ ಪೌರಾಯುಕ್ತರಿಗೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ನಗರಸಭೆ ಸಭಾಂಗಣದಲ್ಲಿ ಅಧ್ಯಕ್ಷ ವಕ್ಕಳ್ ಮುನಿಸ್ವಾಮಿ ನಗರಸಭೆ ಸದಸ್ಯರು, ತಮಿಳು, ಕನ್ನಡ ಸಂಘದ ಪದಾಧಿಕಾರಿಗಳ ವಿಶೇಷ ಸಭೆ ನಡೆಸಿದರು.

ಈ ಸಭೆಯಲ್ಲಿ ಮಾಜಿ ಶಾಸಕ ಎಸ್‌. ರಾಜೇಂದ್ರನ್‌ ಮಾತನಾಡಿ, ಕೆಜಿಎಫ್ ನಗರದಲ್ಲಿ ಕನ್ನಡ ಹಾಗೂ ತಮಿಳು ಭಾಷೆ ಮಾತನಾಡುವವರು ಅಣ್ಣ ತಮ್ಮಂದಿರಂತೆ ಇದ್ದೇವೆ. ಆದರೆ, ವಾಟಾಳ್‌ನಾಗರಾಜ್‌ ಕೆಜಿಎಫ್ ನಗರಕ್ಕೆ ಆಗಮಿಸಿ ಸಾಮರಸ್ಯವನ್ನು ಕದಡುವ ಕೆಲಸ ಮಾಡಿದ್ದಾರೆ. ಆದ್ದರಿಂದ ಅವರ ವಿರುದ್ಧ ಶಾಸಕರು ಪೊಲೀಸ್‌ ಠಾಣೆಯಲ್ಲಿ ದೂರು ಸಲ್ಲಿಸಬೇಕು ಎಂದು ಆಗ್ರಹಿಸಿದರು.

ಅಧಿಕಾರಿಗಳು ದೂರು ನೀಡಲಿ: ನಗರಸಭೆ ಮಾಜಿ ಅಧ್ಯಕ್ಷ ರಮೇಶ್‌ಕುಮಾರ್‌ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ವಾಟಾಳ್‌ ನಾಗರಾಜ್‌ ಅವರ ಪ್ರಚಾರ ಕಳೆಗುಂದಿದ್ದು, ಅವರ ವರ್ಚಸ್ಸು ವೃದ್ಧಿಪಡಿಸಿಕೊಳ್ಳುವ ನಿಟ್ಟಿನಲ್ಲಿ ಕೆಜಿಎಫ್ ನಗರಕ್ಕೆ ಆಗಮಿಸಿ, ಶಾಂತಿ ಕದಡುವ ಪ್ರಯತ್ನ ಮಾಡಿದ್ದಾರೆ. ಆದ್ದರಿಂದ ಅವರ ವಿರುದ್ಧ ನಗರಸಭೆ ಅಧಿಕಾರಿಗಳು ದೂರು ನೀಡಬೇಕು ಎಂದು ಆಗ್ರಹಿಸಿದರು. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಾಜಿ ಜಯಪಾಲ್‌ಮಾತನಾಡಿ,ಕೆಜಿಎಫ್ನಗರದಲ್ಲಿ ಯಾವುದೇ ತಂಟೆ ತಕರಾರು ಇಲ್ಲದೆ ಅಣ್ಣ ತಮ್ಮಂದಿರಂತೆಜೀವನನಡೆಸುತ್ತಿದ್ದೇವೆ.

ಇಂತಹ ಸಂದರ್ಭದಲ್ಲಿ ಕನ್ನಡ ತಮಿಳರ ಮಧ್ಯೆ ವಿಷ ಬೀಜ ಬಿತ್ತುವ ಕೆಲಸವನ್ನು ಮಾಡಿದ್ದು ಅಕ್ಷಮ್ಯ ಅಪರಾಧವಾಗಿದೆ. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ನಗರಸಭೆ ಅಧ್ಯಕ್ಷ ವಳ್ಳಲ್‌ ಮುನಿಸ್ವಾಮಿ ಸಭೆಯಲ್ಲಿ ಆಶ್ವಾಸನೆ ನೀಡಿ, ಸಂಜೆ ನಗರಸಭೆ ಬಸ್‌ ನಿಲ್ದಾಣದ ಮೇಲೆ ತಮಿಳು ನಾಮಫ‌ಲಕ ಕುವೆಂಪು ಬಸ್‌ ನಿಲ್ದಾಣ ಎಂದು ಬರೆಯಿಸಿದ ನಂತರ ಹರ್ಷಗೊಂಡ ತಮಿಳರು ವಳ್ಳಲ್‌ ಮುನಿಸ್ವಾಮಿಗೆ ಜೈಕಾರ ಹಾಕಿದರು.

ಟಾಪ್ ನ್ಯೂಸ್

Mudhola

Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Rain-1

Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ

8

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

arest

Kundapura: ಅಂಬರ್‌ ಗ್ರೀಸ್‌ ಮಾರಾಟ ಪ್ರಕರಣ; ಮತ್ತೋರ್ವ ಆರೋಪಿಯ ಬಂಧನ

Mudhola

Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ

7

Kasaragod: ಅಂಗಡಿಗೆ ನುಗ್ಗಿದ ಕಾಡು ಹಂದಿ

5

Kadaba: ಮೇಯಲು ಬಿಟ್ಟ ದನದ ಕಾಲು ಕಡಿದ ವ್ಯಕ್ತಿ; ದೂರು

dw

Siddapura: ವಿದ್ಯುತ್‌ ಲೈನಿಗೆ ಕೊಕ್ಕೆ ತಾಗಿ ಕಾರ್ಮಿಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.