ನಿರಂತರ ಮಳೆ; ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಡೆ
Team Udayavani, Jul 14, 2021, 10:00 AM IST
ಸುಬ್ರಹ್ಮಣ್ಯ: ಕಳೆದ ಕೆಲ ದಿನಗಳಿಂದ ನಿರಂತರವಾಗಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನ ಘಟ್ಟ ಬುಧವಾರ ಸಂಪೂರ್ಣ ಮುಳುಗಡೆ ಗೊಂಡಿದೆ.
ಮಂಗಳವಾರ ಸಂಜೆಯೇ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿತ್ತು. ರಾತ್ರಿ ಇಡೀ ಮಳೆಯಾದ ಪರಿಣಾಮ ನದಿಯಲ್ಲಿ ನೀರಿನ ಪ್ರಮಾಣ ಭಾರೀ ಏರಿಕೆ ಕಂಡಿದೆ.
ಸುಬ್ರಹ್ಮಣ್ಯ ಹಾಗೂ ಘಟ್ಟ ಪ್ರದೇಶದಲ್ಲೂ ಮಳೆಯಾಗುತ್ತಿದೆ. ಕುಮಾರಧಾರ ಸೇತುವೆಯ ಕೆಳ ಭಾಗದ ಕಿಂಡಿ ಅಣೆಕಟ್ಟು ಹಾಗೂ ಸ್ನಾನ ಘಟ್ಟ ನೀರಿನಿಂದ ಜಲಾವೃತಗೊಂಡಿದೆ. ಕ್ಷೇತ್ರಕ್ಕೆ ಆಗಮಿಸಿದ ಭಕ್ತಿರಿಗೆ ನದಿ ದಡದಲ್ಲಿ ತೀರ್ಥ ಸ್ನಾನ ನೆರವೇರಿಸು ಅವಕಾಶ ಕಲ್ಪಿಸಲಾಗಿದೆ.
ಆದಿ ಸುಬ್ರಹ್ಮಣ್ಯದ ದರ್ಪಣ ತೀರ್ಥ ನದಿಯಲ್ಲೂ ನೀರಿನ ಮಟ್ಟ ಹೆಚ್ಚಳ ಗೊಂಡಿದೆ. ನದಿಯ ದಡದಲ್ಲಿ ಸುಬ್ರಹ್ಮಣ್ಯ ಠಾಣಾ ಪೊಲೀಸರು, ಗೃಹ ರಕ್ಷಕ ದಳದ ಸಿಬ್ಬಂದಿಗಳು ಕಾವಲು ವ್ಯವಸ್ಥೆಯ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.