ಎಎಪಿ ಅಧಿಕಾರಕ್ಕೆ ಬಂದರೆ ಗೋವಾದ ಪ್ರತಿ ಕುಟುಂಬಕ್ಕೆ ತಿಂಗಳಿಗೆ 300 ಯೂನಿಟ್ ಉಚಿತ ವಿದ್ಯುತ್
Team Udayavani, Jul 14, 2021, 3:14 PM IST
ಪಣಜಿ: ಗೋವಾ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದರೆ ಗೋವಾದ ಪ್ರತಿ ಕುಟುಂಬಕ್ಕೆ ತಿಂಗಳಿಗೆ 300 ಯೂನಿಟ್ ಉಚಿತ ವಿದ್ಯುತ್ ನೀಡಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ ಕೇಜರಿವಾಲ್ ನುಡಿದರು.
ಪಣಜಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು- ದೆಹಲಿಯ ಜನರು ಉಚಿತ ವಿದ್ಯುತ್ ಪಡೆಯಲು ಸಾಧ್ಯವಿದೆ, ಅಂತೆಯೇ ಗೋವಾದ ಜನರಿಗೂ ಕೂಡ ಏಕೆ ಉಚಿತ ವಿದ್ಯುತ್ ನೀಡಬಾರದು. ಮುಂದಿನ ಚುನಾವಣೆಯಲ್ಲಿ ತಾವು ಬಿಜೆಪಿ ಅಥವಾ ಕಾಂಗ್ರೇಸ್ ಪರ ಮತ ಚಲಾಯಿಸುವುದಿಲ್ಲ ಎಂದು ಸಾವಿರಾರು ಜನ ಗೋವಾದ ಜನರು ಹೇಳುತ್ತಾರೆ. ಗೋವಾ ಬದಲಾವಣೆಯನ್ನು ಜನರು ಬಯಸಿದ್ದಾರೆ ಶುದ್ಧ ರಾಜಕೀಯವನ್ನು ಬಯಸಿದ್ದಾರೆ ಇದನ್ನು ಆಮ್ ಆದ್ಮಿ ಪಕ್ಷ ನೀಡಲಿದೆ ಎಂದು ಅರವಿಂದ ಕೇಜರಿವಾಲ್ ನುಡಿದರು.
ಕಳೆದ ಗೋವಾ ವಿಧಾನಸಭಾ ಚುನಾವಣೆಯ ನಂತರ ಕಾಂಗ್ರೇಸ್ ಮತ್ತು ಇತರ ಪಕ್ಷಗಳಿಂದ ಬಿಜೆಪಿ ಸೇರಿದ ಶಾಸಕರ ವಿರುದ್ಧ ಕೇಜರಿವಾಲ್ ವಾಗ್ದಾಳಿ ನಡೆಸಿದರು. ಕಳೆದ ಬಾರಿ ಚುನಾವಣೆಯಲ್ಲಿ ಬಹುಮತದ ಆಧಾರದಲ್ಲಿ ಗಮನಿಸಿದರೆ ಪ್ರತಿಪಕ್ಷದಲ್ಲಿ ಇರಬೇಕಾದವರು ಈಗ ಗೋವಾ ರಾಜ್ಯ ಆಳುತ್ತಿದ್ದಾರೆ, ಅಧಿಕಾರದಲ್ಲಿರಬೇಕಾದವರು ಪ್ರತಿಪಕ್ಷದಲ್ಲಿದ್ದಾರೆ. ಈಗ ಅಧಿಕಾರದಲ್ಲಿದ್ದವರು ಹೇಳಿಕೊಂಡಂತೆ ಜನರ ಕೆಲಸ ಮಾಡಿದ್ದಾರೆಯೇ..? ಎಂದು ಕೇಜರಿವಾಲ್ ಪ್ರಶ್ನಿಸಿದರು. ಈ ಪತ್ರಿಕಾಗೋಷ್ಠಿಯಲ್ಲಿ ಆಮ್ ಆದ್ಮಿ ಪಕ್ಷದ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
MUST WATCH
ಹೊಸ ಸೇರ್ಪಡೆ
Our beautiful blessing..; ಚೊಚ್ಚಲ ಮಗುವಿನ ಖುಷಿ ಹಂಚಿಕೊಂಡ ರಾಹುಲ್ – ಅಥಿಯಾ ಶೆಟ್ಟಿ
ಬೆಳಗಾವಿಯ ಶ್ರೀನಿವಾಸ ಠಾಣೇದಾರ ಅಮೆರಿಕ ಸಂಸತ್‌ಗೆ ಆಯ್ಕೆ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.