ಶರದ್ ಮುಂದಿನ ರಾಷ್ಟ್ರಪತಿ?: ಬಿಜೆಪಿ ವಿರುದ್ಧ ಪ್ರತಿಪಕ್ಷಗಳ ಐಕ್ಯತೆ?: ಕಿಶೋರ್ ತಂತ್ರ ಏನು.?

ರಾಷ್ಟ್ರ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಕಾರಣವಾದ ರಾಷ್ಟ್ರೀಯ ನಾಯಕರೊಂದಿಗಿನ ಪ್ರಶಾಂತ್ ಕಿಶೋರ್ ಭೇಟಿ

Team Udayavani, Jul 14, 2021, 4:52 PM IST

14-3

ನವ ದೆಹಲಿ :  ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರ ಇತ್ತೀಚಿನ ಬೆಳವಣಿಗೆಗಳು ರಾಜಕೀಯ ಪಡಸಾಲೆಯಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

ಶರದ್ ಪವಾರ್ ಅವರನ್ನು ಭಾರತದ ಮುಂದಿನ ರಾಷ್ಟ್ರಪತಿಯನ್ನಾಗಿ ಆಯ್ಕೆ ಮಾಡಲು ಪ್ರಶಾಂತ್ ಕಿಶೋರ್ ಲಾಬಿ ಮಾಡುತ್ತಿದ್ದಾರೆ ಎಂಬ ವಿಷಯ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.

ಇದನ್ನೂ ಓದಿ : ಥಾವರ್ ಚಂದ್ ಸ್ಥಾನಕ್ಕೆ ರಾಜ್ಯಸಭೆಯಲ್ಲಿ ಪಿಯೂಷ್ ಗೋಯಲ್ ಬಿಜೆಪಿಯ ನೂತನ ನಾಯಕ

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣಾ ಫಲಿತಾಂಶ ಬಂದ ನಂತರ ಪ್ರಶಾಂತ್ ಕಿಶೋರ್ ಮೂರು ಬಾರಿ ಶರದ್ ಪವಾರ್ ಅವರನ್ನು ಭೇಟಿಯಾಗಿದ್ದರು.  ಶರದ್ ಪವಾರ್ ಅವರನ್ನು ಕೇಂದ್ರ ರಾಜಕಾರಣಕ್ಕೆ ತರುವ ತಂತ್ರ ಹೂಡಿಕೆಯ ಯೋಜನೆಯಲ್ಲಿ ಪ್ರಶಾಂತ್ ಕಾರ್ಯೋನ್ಮುಖವಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಮುಂದಿನ ವಿಧಾನಸಭಾ ಚುನಾವಣೆ ಮತ್ತು 2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ವಿರುದ್ಧವಾಗಿ ಪ್ರತಿಪಕ್ಷಗಳ ಐಕ್ಯತೆಯನ್ನು ಕಟ್ಟಲು ಪ್ರಯತ್ನಿಸುತ್ತಿದ್ದಾರೆ ಎಂಬ ಊಹಾಪೋಹಗಳಿಗೂ ಕೆಲವು ದಿನಗಳಿಂದ ಪ್ರಶಾಂತ್ ಕಿಶೋರ್ ರಾಷ್ಟ್ರೀಯ ನಾಯಕರೊಂದಿಗೆ  ನಡೆಸುತ್ತಿರುವ ಸಭೆಗಳು ಚರ್ಚೆಗೆ ಗ್ರಾಸವಾಗಿವೆ.

ಆದಾಗ್ಯೂ, 2024 ರ ಸಂಸತ್ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಪ್ರತಿಪಕ್ಷಗಳ ಒಕ್ಕೂಟಕ್ಕೆ ಪ್ರಯತ್ನ ಮಾಡುತ್ತಿದ್ದಾರೆ ಎಂಬ ಊಹಾಪೋಹಗಳನ್ನು ಪ್ರಶಾಂತ್ ನಿರಾಕರಿಸಿದ್ದು, ರಾಷ್ಟ್ರ ರಾಜಕಾರಣದಲ್ಲಿ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.

ಆದರೇ, ನಿನ್ನೆಯ (ಮಂಗಳವಾರ, ಜುಲೈ 13) ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಅವರ ಭೇಟಿ ಮುಂದಿನ ಲೋಕಸಭಾ ಚುನಾವಣೆಗೆ ಬಿಜೆಪಿ ವಿರುದ್ಧದ ರಣತಂತ್ರ ಇದು ಎಂದು ಒಂದೆಡೆ ಚರ್ಚೆಯಾದರೇ, ಇನ್ನೊಂದೆಡೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆ ನಡೆಸಿರಬಹುದು ಎಂಬ ಊಹಾಪೋಹಗಳು ಕೂಡ ಕೇಳಿಬಂದವು.

ಮುಖ್ಯಮಂತ್ರಿಗಳಾದ ಮಮತಾ ಬ್ಯಾನರ್ಜಿ, ಜಗನ್ ರೆಡ್ಡಿ, ಅರವಿಂದ್ ಕೇಜ್ರಿವಾಲ್, ಸ್ಟಾಲಿನ್ ಮತ್ತು ಉದ್ಧವ್ ಠಾಕ್ರೆ ಅವರೊಂದಿಗೆ ಉತ್ತಮ ವೈಯಕ್ತಿಕ ಸಂಬಂಧಗಳನ್ನು ಹೊಂದಿರುವ ಪ್ರಶಾಂತ್ ಕಿಶೋರ್ ಅವರಿಗೆ ಬಿಜೆಪಿ ವಿರುದ್ಧ ತಂತ್ರ ಹೂಡುವುದು ಅಷ್ಟೇನೂ ಕಷ್ಟಸಾಧ್ಯವಲ್ಲದಿದ್ದರೂ, ಕಾಂಗ್ರೆಸ್ ನೊಂದಿಗೆ ಉಳಿದೆಲ್ಲಾ ಪ್ರತಿಪಕ್ಷಗಳ ಮೈತ್ರಿಗೆ ಹೇಗೆ ಕಿಶೋರ್ ತಂತ್ರ ರೂಪಿಸುತ್ತಾರೆ ಎನ್ನುವ ಪ್ರಶ್ನೆ ಎದ್ದಿದೆ.

ಇನ್ನು, ನಿನ್ನೆ ರಾಹುಲ್ ಗಾಂಧಿ ಅವರನ್ನು ಪ್ರಶಾಂತ್ ಕಿಶೋರ್ ಅವರು ಭೇಟಿಯಾದ ಸಂದರ್ಭದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕೂಡ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗಿಯಾಗಿದ್ದರು ಎಂದು ಹೇಳಲಾಗುತ್ತಿದೆ. ಇನ್ನು, ಪ್ರಿಯಾಂಕ ಗಾಂಧಿ ಅವರು, ಕಿಶೋರ್ ಭೇಟಿಗಾಗಿಯೇ ಲಕ್ನೋ ಪ್ರವಾಸವನ್ನು ಮುಂದೂಡಿದ್ದರು ಎಂದು ವರದಿಯಾಗಿದೆ.

ಒಟ್ಟಿನಲ್ಲಿ, ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರೊಂದಿಗೆ ಪ್ರತಿಪಕ್ಷಗಳ ರಾಷ್ಟ್ರೀಯ ನಾಯಕರ ಸಭೆಗಳು ರಾಜಕೀಯ ವಲಯದಲ್ಲಿ ಹಲವು ಪ್ರಶ್ನೆಗಳನ್ನು ಎಬ್ಬಿಸಿದೆ.

ಇದನ್ನೂ ಓದಿ : ಗೋವಾದಲ್ಲಿ ಕೇಜ್ರಿವಾಲ್ ಮೈತ್ರಿ ತಂತ್ರ..?! ಚರ್ಚೆಗೆ ಆಸ್ಪದವಾದ ಧವಳೀಕರ್ ಭೇಟಿ

ಟಾಪ್ ನ್ಯೂಸ್

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

Mulki-kambala

Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

GST

Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ

fadnavis

Maharashtra; ಫ‌ಡ್ನವೀಸ್‌ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!

Uddav-2

Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್‌ ಶಿವಸೇನೆ ಇಂಗಿತ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.