ಓಲಂಪಿಕ್‌ಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಪ್ರೋತ್ಸಾಹ ಧನ ವಿತರಣೆ


Team Udayavani, Jul 14, 2021, 5:57 PM IST

WhatsApp Image 2021-07-14 at 5.42.11 PM

ಬೆಂಗಳೂರು: ಜಪಾನ್‌ನ ಟೋಕಿಯೋದಲ್ಲಿ ನಡೆಯಲಿರುವ ಓಲಂಪಿಕ್ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲು ನಮ್ಮ ರಾಜ್ಯದಿಂದ ಆಯ್ಕೆಯಾಗಿರುವ ಮೂವರು ಕ್ರೀಡಾಪಟುಗಳಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಘೋಷಣೆ ಮಾಡಲಾಗಿದ್ದ, ತಲಾ ಹತ್ತು ಲಕ್ಷ ರೂ. ಪ್ರೋತ್ಸಾಹಧನವನ್ನು ಇಂದು ಮುಖ್ಯಮಂತ್ರಿ ಬಿಎಸ್‌ಯಡಿಯೂರಪ್ಪನವರು ವಿತರಿಸಿದರು.

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಒಲಂಪಿಕ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುವ ಕರ್ನಾಟಕದ ಹೆಮ್ಮೆಯ ಕ್ರೀಡಾಪಟು ಶ್ರೀಹರಿ ನಟರಾಜ್ ಅವರಿಗೆ ಪ್ರೋತ್ಸಾಹ ಧನ ಚೆಕ್ ವಿತರಿಸಿದರು. ಹಾಗೂ ಅಧಿತಿ ಅಶೋಕ್, ಪೌವಾದ್ ಮಿರ್ಜಾ ಇವರುಗಳಿಗೆ ಅವರ ಪರವಾಗಿ ಅವರ ಪಾಲಕರಿಗೆ ತಲಾ ಹತ್ತು ಲಕ್ಷ ರೂ. ನ ಚೆಕ್ ಅನ್ನು ಸಿಎಂ ಯಡಿಯೂರಪ್ಪ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವರಾದ ಡಾ. ನಾರಾಯಣಗೌಡ ಅವರು ಹಸ್ತಾತಂತರಿಸಿ, ಶುಭಕೋರಿದರು.

ಟೋಕಿಯೊ ಓಲಂಪಿಕ್ ನಲ್ಲಿ ಚಿನ್ನದ ಪದಕಕ್ಕೆ ಮುತ್ತಿಕ್ಕಿದವರಿಗೆ ರೂ. 5 ಕೋಟಿ, ಬೆಳ್ಳಿಗೆ -3 ಹಾಗೂ ಕಂಚಿನ ಪದಕ ಗೆದ್ದವರಿಗೆ ರೂ. 2 ಕೋಟಿ ನೀಡಿ ಪುರಸ್ಕರಿಸಲಾಗುವುದು ಎಂದು ಮುಖ್ಯಮಂತ್ರಿಗಳು ಘೋಷಿಸಿದರು.

ಈಜು ಸ್ಪರ್ಧೆ ವಿಭಾಗದಲ್ಲಿ ಇದೇ ಮೊದಲಬಾರಿಗೆ ಓಲಂಪಿಕ್ ನಲ್ಲಿ ಭಾರತ ತಂಡ ಭಾಗವಹಿಸುತ್ತಿದೆ. ಮೂವರು ಕ್ರೀಡಾಪಟುಗಳು ಆಯ್ಕೆಯಾಗಿದ್ದು, ಅವರಲ್ಲಿ  ಓರ್ವ ಕ್ರೀಡಾಪಟು ಕರ್ನಾಟಕದವರು ಎನ್ನುವುದು ನಮಗೆ ಹೆಮ್ಮೆ ವಿಚಾರ. ಓಲಂಪಿಕ್ ಗೆ ಆಯ್ಕೆಯಾಗಿರುವ ಮೂವರೂ ಕ್ರೀಡಾಪಟುಗಳು ಚಿನ್ನದ ಪದಕ ಗೆದ್ದು ದೇಶದ ಕೀರ್ತಿಯನ್ನು ಹೆಚ್ಚಿಸಲಿ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ‌. ನಾರಾಯಣಗೌಡ ಹೇಳಿದರು.

ಆದಿತಿ ಅಶೋಕ್ ಗಾಲ್ಫ್ ಕ್ರೀಡೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಕಷ್ಟು ಸಾಧನೆ ಮಾಡಿದ್ದಾರೆ. 2016ರಲ್ಲಿ ರಿಯೋ ಓಲಂಪಿಕ್‌ನಲ್ಲಿ ಪಾಲ್ಗೊಂಡಿದ್ದರು. 2016 ರಲ್ಲಿ ಹೀರೋ ವುಮನ್ ಇಂಡಿಯನ್ ಓಪನ್ ಚಾಂಪಿಯನ್ ಆಗಿದ್ದಾರೆ. 2017 ರಲ್ಲಿ ಪಾತಿಮಾ ಬಿಂಟ್ ಮುಬಾರಕ್ ಲೇಡಿಲ್ ಒಪನ್ ಚಾಂಪಿಯನ್ ಆಗಿದ್ದಾರೆ. ಅಲ್ಲದೆ 2012 ರಲ್ಲಿ ಆಲ್ ಇಂಡಿಯಾ ಜೂನಿಯರ್ ಚಾಂಪಿಯನ್ ಶಿಪ್ ಹಾಗೂ 2014 ರಲ್ಲಿ ಆಲ್ ಇಂಡಿಯಾ ಲೇಡಿಸ್ ಅಂಡ್ ಗರ್ಲ್ ಚಾಂಪಿಯನ್ ಶಿಪ್ ಆಗಿ ಸಾಧನೆ ಮಾಡಿದ್ದಾರೆ. ಈಗ ಅಧಿತಿ ಅಶೋಕ್ ಭಾರತ ಕೀರ್ತಿ ಪತಾಕೆಯನ್ನು ಹಾರಿಸಲು ಟೋಕಿಯೋ ಓಲಂಪಿಕ್‌ಗೆ ತೆರಳುತ್ತಿದ್ದಾರೆ.

ಖ್ಯಾತ ಈಜುಪಟು ಶ್ರೀಹರಿ ನಟರಾಜ್ 2016 ರಲ್ಲಿ ಸೌತ್ ಏಷಿಯನ್ ಚಾಂಪಿಯನ್ ಷಿಪ್ ನಲ್ಲಿ ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದರು. 2017 ರಲ್ಲಿ ಉಜೇಕಿಸ್ಥಾನ್ ನದಲ್ಲಿ ನಡೆದ 9ನೇ ಏಷಿಯನ್ ಚಾಂಪಿಯನ್ ಷಿಪ್ ನಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ. 2018 ರಲ್ಲಿ ಜಕಾರ್ತದಲ್ಲಿ ನಡೆದ ಏಷಿಯನ್ ಗೇಮ್ಸ್ ನಲ್ಲಿ ಪಾಲ್ಗೊಂಡಿದ್ದಾರೆ. 2016 ರಲ್ಲಿ ರಾಂಚಿಯಲ್ಲಿ ಆಯೋಜಿಸಿದ್ದ 70ನೇ ಸೀನಿಯರ್ ಚಾಂಪಿಯನ್ ಷಿಪ್ ನಲ್ಲಿ ಕಂಚು, 2017 ರಲ್ಲಿ ಇಂದೋರ್‌ನಲ್ಲಿ ನಡೆದ 71 ನೇ ಸೀನಿಯರ್ ನ್ಯಾಷನಲ್ ಚಾಂಪಿಯನ್ ಷಿಪ್‌ನಲ್ಲಿ ಚಿನ್ನ, ಹಾಗೂ 2018 ರಲ್ಲಿ ಕೇರಳದಲ್ಲಿ ನಡೆದ 72ನೇ ಸೀನಿಯರ್ ನ್ಯಾಷನಲ್ ಚಾಂಪಿಯನ್ ಷಿಪ್‌ನಲ್ಲಿ ಚಿನ್ನದ ಪದಕವನ್ನು ಪಡೆದಿದ್ದಾರೆ. ಪ್ರಸ್ತುತ ಟೋಕಿಯೋ ಓಲಂಪಿಕ್‌ಗೆ ಶ್ರೀಹರಿ ನಟರಾಜ್ ಆಯ್ಕೆಯಾಗಿದ್ದಾರೆ.

ಈಕ್ವೆಸ್ಟಿಯನ್ ಪಟು ಫೌವಾದ್ ಮಿರ್ಜಾ 2018ರಲ್ಲಿ ನಡೆದ 18ನೇ ಏಷಿಯನ್ ಗೇಮ್ಸ್‌ನಲ್ಲಿ ಬೆಳ್ಳಿ ಪದಕ ಗೆದಿದ್ದು, ಈಗ ಟೋಕಿಯೋ ಓಲಂಪಿಕ್‌ಗೆ ಅರ್ಹತೆ ಪಡೆದಿದ್ದಾರೆ.

ಈಜುಪಟು ಶ್ರೀಹರಿ ನಟರಾಜ್ ಹಾಗೂ ತರಬೇತುದಾರರು ಹಾಗೂ ಪಾಲಕರನ್ನು ಮುಖ್ಯಮಂತ್ರಿಗಳು ಗೌರವಿಸಿದರು. ಇದೇ ವೇಳೆ  ಭಾರತ ತಂಡದ ಜೆರ್ಸಿಯನ್ನು ಮುಖ್ಯಮಂತ್ರಿಗಳು ಅನಾವರಣಗೊಳಿಸಿದರು. ಬಳಿಕ ಓಲಂಪಿಕ್ ನಲ್ಲಿ ಪಾಲ್ಗೊಂಡ ಕ್ರೀಡಾಪಟುಗಳಿಗೆ ಸೆಲ್ಫಿ ಪ್ರೇಮ್ ನಲ್ಲಿ ನಿಂತು ಸಿಎಂ ಹಾಗೂ ಸಚಿವರು ಚಿಯರಪ್ ಮಾಡಿದರು‌.

ಕರ್ನಾಟಕ ಓಲಂಪಿಕ್ ಅಸೋಸಿಯೇಶನ್ ಅಧ್ಯಕ್ಷ ಗೋವಿಂದರಾಜ್, ಅಪರಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಕ್ರೀಡಾ ಇಲಾಖೆ ಆಯುಕ್ತ ಡಾ. ಗೋಪಾಲಕೃಷ್ಣ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

BJP FLAG

Maharashtra ರಾಜ್ಯಸಭೆ ಬಹುಮತದತ್ತ ಬಿಜೆಪಿ ಚಿತ್ತ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

RSS

Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

9-bng

Bengaluru: ಹನಿಟ್ರ್ಯಾಪ್‌: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ

6-bng

Bengaluru: ಬಸ್‌ಗಳಲ್ಲಿ ಮೊಬೈಲ್‌ ಕಳ್ಳತನ: ಇಬ್ಬರು ಆರೋಪಿಗಳ ಸೆರೆ‌, 60 ಫೋನ್‌ ಜಪ್ತಿ

5-bng

Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ

4-bng

Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Modi-Tour

Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

Syed Mushtaq Ali Trophy T20: ಕರ್ನಾಟಕಕ್ಕೆ 6 ರನ್‌ಗಳ ಸೋಲು

Syed Mushtaq Ali Trophy T20: ಕರ್ನಾಟಕಕ್ಕೆ 6 ರನ್‌ಗಳ ಸೋಲು

ICC Champions Trophy: ನ.26ಕ್ಕೆ ಐಸಿಸಿ ತುರ್ತು ಸಭೆ?

ICC Champions Trophy: ನ.26ಕ್ಕೆ ಐಸಿಸಿ ತುರ್ತು ಸಭೆ?

16

Pro Kabaddi: ಗುಜರಾತ್‌ಗೆ ರೋಚಕ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.