ಅಗ್ನಿಶಾಮಕ ಠಾಣಾಧಿಕಾರಿ ರಾಜುಗೆ ಸಿಎಂ ಚಿನ್ನದ ಪದಕ
Team Udayavani, Jul 14, 2021, 9:27 PM IST
ಕುಷ್ಟಗಿ: ತಾಲೂಕಿನಲ್ಲಿ ಬಂಡರಗಲ್ ಹಳ್ಳದ ಪ್ರವಾಹಕ್ಕೆ ಕೊಚ್ಚಿ ಹೋದ ಯುವಕನ ರಕ್ಷಣೆಗೆ ಜೀವದ ಹಂಗು ತೊರೆದು ಕರ್ತವ್ಯ ಪ್ರಜ್ಞೆ ಮೆರೆದ ಕುಷ್ಟಗಿಯ ಅಗ್ನಿಶಾಮಕ ಠಾಣಾಧಿಕಾರಿ ಎನ್. ರಾಜು ಅವರು ಮುಖ್ಯಮಂತ್ರಿ ಪದಕ ಪುರಸ್ಕೃತರಾಗಿದ್ದಾರೆ.
ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೇಟ್ ಸಭಾಂಗಣದಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿನ ಅತ್ಯುತ್ತಮ ಸೇವೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಎನ್. ರಾಜು ಅವರಿಗೆ ಪದಕ ಪ್ರದಾನ ಮಾಡಿದರು.
ಕುಷ್ಟಗಿ ಅಗ್ನಿಶಾಮಕ ಠಾಣೆಯ ಠಾಣಾಧಿಕಾರಿಯಾಗಿ ಸೇವೆಯಲ್ಲಿದ್ದಾರೆ. ಕಳೆದ 2020, ಅಕ್ಟೋಬರ್ 2013ರಂದು ಮಧ್ಯರಾತ್ರಿ ತಾಲೂಕಿನ ಬಂಡರಗಲ್-ಹೂಲಗೇರ ಮಧ್ಯೆ ಹರಿಯುವ ಹಳ್ಳದ ಪ್ರವಾಹದಲ್ಲಿ ಯುವಕ ಕೊಚ್ಚಿ ಹೋಗಿ ಸಿಕ್ಕಿಹಾಕಿಕೊಂಡಿದ್ದ. ಈ ಸಂದರ್ಭದಲ್ಲಿ ಅಗ್ನಿಶಾಮಕ ಠಾಣಾಧಿಕಾರಿ ತಮ್ಮ ಜೀವ ಲೆಕ್ಕಿಸದೇ ಯುವಕನ ಜೀವ ರಕ್ಷಣೆ ಮಾಡಿದ್ದರು. ಅಗ್ನಿ ಅವಘಡ ಪ್ರಕರಣಗಳಲ್ಲಿ ಕೆರೆಯಲ್ಲಿ ಮುಳುಗಿದವರ ಪತ್ತೆಗಾಗಿ ಮುಂಚೂಣಿಯಾಗಿ ಸೇವೆ ಸಲ್ಲಿಸಿದ್ದರಲ್ಲದೇ ಅಗ್ನಿಶಾಮಕ ಠಾಣೆಯ ಉದ್ಯಾನವನದ ಹಸಿರೀಕರಣ ಸೇರಿದಂತೆ ಅಗ್ನಿ ವಿಪತ್ತುಗಳ ಬಗ್ಗೆ ಸಾರ್ವಜನಿಕರಿಗೆ ಶಾಲೆ, ಕಾಲೇಜುಗಳಲ್ಲಿ ಜಾಗೃತಿಯ ಹಲವು ಸೇವೆಯಿಂದ ಗಮನಾರ್ಹರಾದ ಎನ್. ರಾಜು ಅವರು, ಕುಷ್ಟಗಿ ಅಗ್ನಿಶಾಮಕ ಠಾಣೆಯ ಮುಖ್ಯಮಂತ್ರಿ ಪದಕ ಪಡೆದ ಮೊದಲಿಗರು ಎನ್ನುವ ಹೆಮ್ಮೆಗೆ ಪಾತ್ರರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ
Uppinangady: ಸರಣಿ ಅಪಘಾತ; 19 ಮಂದಿಗೆ ಗಾಯ
Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.