ಬಿಜೆಪಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಸೈಕಲ್ ಜಾಥಾ
Team Udayavani, Jul 14, 2021, 9:36 PM IST
ದೇವರಹಿಪ್ಪರಗಿ: ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ದೇವರಹಿಪ್ಪರಗಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸೈಕಲ್ ಜಾಥಾ ಹಮ್ಮಿಕೊಳ್ಳಲಾಗಿತ್ತು. ಮಂಗಳವಾರ ಕಾಂಗ್ರೆಸ್ ಪಕ್ಷದ ವತಿಯಿಂದ ಪಟ್ಟಣದ ಕರ್ನಾಟಕ ಬ್ಯಾಂಕ್‌ದಿಂದ ಡಾ| ಅಂಬೇಡ್ಕರ್ ವೃತ್ತದವರೆಗೆ ಸೈಕಲ್ ಜಾಥಾ ಹಮ್ಮಿಕೊಳ್ಳಲಾಗಿತ್ತು.
ಸೈಕಲ್ ಏರಿದ ಎಲ್ಲ ಮುಖಂಡರು, ಯುವಕರು, ಕಾರ್ಯಕರ್ತರು ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ಡಾ| ಅಂಬೇಡ್ಕರ್ ವೃತ್ತದಲ್ಲಿ ಸಭೆ ನಡೆಸಿ ಮಾತನಾಡಿದ ಕೆಪಿಸಿಸಿ ಸದಸ್ಯ ಬಿ.ಎಸ್. ಪಾಟೀಲ ಯಾಳಗಿ, ಬಿಜೆಪಿ ಭಂಡ ಸರ್ಕಾರವಾಗಿದ್ದು ಜನಸಮಾನ್ಯರ ಬೇಕು ಬೇಡಿಕೆಗಳನ್ನು ಸಂಪೂರ್ಣವಾಗಿ ಕಡೆಗಣಿಸಿದೆ. ದಿನನಿತ್ಯ ಬೆಲೆ ಏರಿಕೆ ಮಾಡುತ್ತ ಜನಜೀವನದ ಜೊತೆ ಚೆಲ್ಲಾಟವಾಡುತ್ತಿದೆ. ದಿನನಿತ್ಯ ಪ್ರತಿಭಟನೆ ಮಾಡಿದರೂ ಕ್ಯಾರೆ ಎನ್ನದೆ ತನ್ನ ದುರಾಡಳಿತ ಮುಂದುವರಿಸಿದೆ. ಇದರಿಂದ ಜನಸಾಮಾನ್ಯರು ಬೇಸತ್ತು ಹೋಗಿದ್ದಾರೆ.
ಈ ಸರ್ಕಾರ ಹೋಗುವವರೆಗೆ ರಾಜ್ಯದ ಜನರು ನೆಮ್ಮದಿಯಿಂದ ಇರುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಶೀರಶೇಠ ಬೇಪಾರಿ, ಯುವ ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ಪ್ರಕಾಶ ಗುಡಿಮನಿ, ಯುವ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಮುನೀರ ಬಿಜಾಪುರ, ಕಾಂಗ್ರೆಸ್ ಕಾರ್ಯದರ್ಶಿ ಗುರುರಾಜ ಆಕಳವಾಡಿ ಮಾತನಾಡಿದರು. ರಾಜಕುಮಾರ ಸಿಂದಗೇರಿ, ಶಬ್ಬಿರ ಮುಲ್ಲಾ, ರಾಮಣ್ಣ ನಾಯೊRàಡಿ, ರಮೇಶ ದಳವಾಯಿ, ಮಡಿವಾಳಪ್ಪ ಬ್ಯಾಲ್ಯಾಳ, ರಾವುತ್ ಮಾಸ್ತರ ತಳಕೇರಿ, ರಾಘವೇಂದ್ರ ಪಡಗಾನೂರ,ರಾವುತ್ ಎಸ್.ಟಿ. ಪ್ರಕಾಶ ಅವರಾದಿ, ಪ್ರಭು ಖಾನಾಪುರ,ಯಮನಪ್ಪ ಬೂತಾಳಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!
Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
ICC ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.