ವಿಟ್ಲ ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷೆ ಮತ್ತು ಹಾಲಿ ಸದಸ್ಯ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ
Team Udayavani, Jul 14, 2021, 9:44 PM IST
ವಿಟ್ಲ : ವಿಟ್ಲ ಪಟ್ಟಣ ಪಂಚಾಯತ್ ಹಿರಿಯ ಸದಸ್ಯ ಅಶೋಕ್ ಕುಮಾರ್ ಶೆಟ್ಟಿ ಮತ್ತು ಮಾಜಿ ಅಧ್ಯಕ್ಷೆ ದಮಯಂತಿ ಅವರು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಅಶೋಕ್ ಕುಮಾರ್ ಶೆಟ್ಟಿ ಅವರು ದ.ಕ.ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿಯಾಗಿದ್ದು, ಈ ಸ್ಥಾನಕ್ಕೂ ರಾಜಿನಾಮೆ ಸಲ್ಲಿಸಿದ್ದಾರೆ.
ಜಿಲ್ಲಾ ಯೋಜನಾ ಸಮಿತಿ ಸದಸ್ಯರಾಗಿ, ವಿರೋಧ ಪಕ್ಷದ ನಾಯಕರಾಗಿ ಕೆಲಸ ಮಾಡಿದ್ದರು. ಸತತ ನಾಲ್ಕು ಬಾರಿ ಚುನಾವಣೆಯಲ್ಲಿ ಜಯಗಳಿಸಿ, ಮೂರು ಬಾರಿ ಗ್ರಾಮ ಪಂಚಾಯತ್ ಸದಸ್ಯರಾಗಿ, ಒಂದು ಬಾರಿ ಪಟ್ಟಣ ಪಂಚಾಯತ್ ಸದಸ್ಯರಾಗಿ ಆಯ್ಕೆಗೊಂಡಿದ್ದರು. ಕೇವಲ ರಾಜಕೀಯ ಕ್ಷೇತ್ರವಲ್ಲದೇ ಉತ್ತಮ ಕ್ರೀಡಾಪಟುವಾಗಿದ್ದು, ದೇಹದಾರ್ಢ್ಯ ಸ್ಫರ್ಧೆಯಲ್ಲಿ ಪದಕ ಪಡೆದಿದ್ದರು.
ಇದನ್ನೂ ಓದಿ : ಕಾಲೇಜು ಉಪನ್ಯಾಸಕರ ವರ್ಗಾವಣೆ ಪ್ರಕ್ರಿಯೆ ಆರಂಭ : ಜು.16ಕ್ಕೆ ತಾತ್ಕಾಲಿಕ ಪಟ್ಟಿ ಪ್ರಕಟ
ದಮಯಂತಿ ಅವರು ವಿಟ್ಲ ಪಟ್ಟಣ ಪಂಚಾಯತ್ ಎರಡನೇ ಅವಧಿಯಲ್ಲಿ ಅಧ್ಯಕ್ಷರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Fraud Case: ಗೂಗಲ್ ಪೇ ಮಾಡಿದೆ ಎಂದು ಹೇಳಿ ಮೋಸ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.