ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾರತೀಯ ಹಾಕಿ ತಂಡಕ್ಕೆ ಪದಕ ಗೆಲ್ಲಲು ಉತ್ತಮ ಅವಕಾಶ: ಧನರಾಜ್
Team Udayavani, Jul 14, 2021, 11:14 PM IST
ಹೊಸದಿಲ್ಲಿ : ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾರತೀಯ ಹಾಕಿ ತಂಡ ಉತ್ತಮ ಪ್ರದರ್ಶನ ನೀಡ ಲಿದ್ದು, ಪದಕ ಗೆಲ್ಲುವ ಸಾಧ್ಯತೆ ಇದೆ ಎಂದು ಮಾಜಿ ಹಾಕಿ ಆಟಗಾರ ಧನರಾಜ್ ಪಿಳ್ಳೆ ಹೇಳಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿದ ಧನರಾಜ್, “ನಮ್ಮ ಹಾಕಿ ತಂಡ ಅತ್ಯಂತ ಸಮರ್ಥವಾಗಿದೆ. ನನ್ನ ಪೀಳಿಗೆಯ ಆಟಗಾರರು ಗೆಲ್ಲಲಾಗದ ಪದಕವನ್ನು ಈಗಿನ ಆಟಗಾರರು ಗೆಲ್ಲುವ ನಿರೀಕ್ಷೆ ಹಾಗೂ ವಿಶ್ವಾಸ ಇದೆ’ ಎಂದು ಅಭಿಪ್ರಾಯಪಟ್ಟಿದ್ದಾರೆ.
“ಭಾರತದ ಹಾಕಿ ತಂಡಕ್ಕೆ ಫಿಟ್‌ನೆಸ್ ಅತ್ಯಂತ ದೊಡ್ಡ ಆಸ್ತಿಯಾಗಿದೆ. ಕಳೆದ 5 ವರ್ಷಗಳಲ್ಲಿ ನಮ್ಮವರು ಉತ್ತಮ ಪ್ರದರ್ಶನ ನೀಡಿದ್ದಾರೆ. ಇದನ್ನು ಟೋಕಿಯೊದಲ್ಲೂ ಮುಂದುವರಿಸಬೇಕು’ ಎಂದಿದ್ದಾರೆ ಪಿಳ್ಳೆ.
“ನಾನು ಬೆಂಗಳೂರಿನಲ್ಲಿಯೇ ಇದ್ದೆ. ಕೋವಿಡ್ ನಿಯಮಾವಳಿಯಿಂದಾಗಿ ತಂಡವನ್ನು ಭೇಟಿಯಾಗಲು ಸಾಧ್ಯವಾಗಿಲ್ಲ. ಆದರೆ ತಂಡಕ್ಕೆ ಶುಭ ಸಂದೇಶ ಕಳುಹಿಸಿದ್ದೇನೆ’ ಎಂದರು.
ಇದನ್ನೂ ಓದಿ : 2020ರ ಗಲಭೆ ಪ್ರಕರಣಗಳ ತನಿಖೆ ವಿಫಲ : ದೆಹಲಿ ಪೊಲೀಸರಿಗೆ 25 ಸಾವಿರ ರೂ. ದಂಡ
ಭಾರತಕ್ಕೆ ಪಾಕ್ ಆಟಗಾರನ ಬೆಂಬಲ
ಪಾಕಿಸ್ಥಾನದ ಮಾಜಿ ಹಾಕಿ ಆಟಗಾರ ಹಸನ್ ಸರ್ದಾರ್ ಭಾರತಕ್ಕೆ ಬೆಂಬಲ ಸೂಚಿಸಿದ್ದು, ಮನ್‌ಪ್ರೀತ್ ಪಡೆ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಪದಕ ಗೆಲ್ಲಲಿದೆ ಎಂದು ಹೇಳಿದ್ದಾರೆ.
“ಪಾಕಿಸ್ಥಾನದ ಹಾಕಿ ತಂಡ ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳದ ಕಾರಣ ನಾನು ಭಾರತ ತಂಡವನ್ನು ಬೆಂಬಲಿಸುತ್ತೇನೆ. ಕಳೆದ ಎರಡು-ಮೂರು ವರ್ಷಗಳಲ್ಲಿ ಭಾರತ ಅದ್ಭುತವಾಗಿ ಆಡಿದೆ. ವಿಶ್ವದ ಅಗ್ರ ತಂಡಗಳನ್ನು ಸೋಲಿಸಿದೆ. ಹಿಗಾಗಿ ಮಾನಸಿಕವಾಗಿ ಸದೃಢವಾಗಿರುವ ಭಾರತೀಯ ಪುರುಷರ ತಂಡ ಆಕ್ರಮಣಕಾರಿಯಾಗಿ ಆಡಿದರೆ ಟೋಕಿಯೊದಲ್ಲಿ ಪದಕ ಗೆಲ್ಲಬಹುದು’ ಎಂದು ಸರ್ದಾರ್ ಭರವಸೆ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.