ಆಷಾಢ ಮಾಸ ನಂಬಿಕೆ ಹಿಂದಿದೆ ಹಲವು ವಿಚಾರ

ಕೈಗಳಿಗೆ ಮದರಂಗಿ ಹಚ್ಚಿಕೊಳ್ಳು ವುದಕ್ಕೆ ಸಂಪ್ರದಾಯ ಬದ್ಧವಾದ ಮಾನ್ಯತೆಯನ್ನೂ ನೀಡಲಾಗಿದೆ.

Team Udayavani, Jul 15, 2021, 1:49 PM IST

ಆಷಾಢ ಮಾಸ ನಂಬಿಕೆ ಹಿಂದಿದೆ ಹಲವು ವಿಚಾರ

ಆಷಾಢ ಮಾಸ ಈಗಾಗಲೇ ಲಗ್ಗೆ ಇಟ್ಟಾಗಿದೆ. ಮಳೆಗಾಲದಲ್ಲಿ ಬರುವ ಆಷಾಢ ಮಾಸವನ್ನು ಶೂನ್ಯ ಮಾಸ, ಅಮಂಗಳಕರ ಮಾಸವೆಂದೂ ಕರೆಯುತ್ತಾರೆ. ಇದಕ್ಕೆ ಸಾಂಪ್ರದಾಯಿಕ ಕಾರಣ ಏನೇ ಇರಬಹುದು. ಆದರೆ ಹಿಂದೂ ಸಂಸ್ಕೃತಿಯ ಪ್ರತಿಯೊಂದು ಆಚರಣೆಯ ಹಿಂದೆಯೊಂದು ಮಹತ್ವದ ಕಾರಣವಂತೂ ಇದ್ದೇ ಇರುತ್ತದೆ. ಆಷಾಢ ಮಾಸದಲ್ಲಿ ಭಾರೀ ಮಳೆಯಾಗುತ್ತದೆ. ಇದರೊಂದಿಗೆ ಕೃಷಿಯಾಧಾರಿತ ಚಟುವಟಿಕೆಗಳೂ ಬಿರುಸು ಪಡೆಯುತ್ತದೆ. ಹೀಗಾಗಿ ಎಲ್ಲೆಡೆಯೂ ಕೃಷಿ ಚಟುವಟಿಕೆಗಳು ನಡೆಯುತ್ತಿರುತ್ತವೆ. ಇದರಿಂದ ಮನೆಮಂದಿಗೂ ಕೈ ತುಂಬಾ ಕೆಲಸಗಳಿರುತ್ತವೆ. ಹೀಗಾಗಿ ಬೇರೆಲ್ಲ ಕಾರ್ಯಗಳಿಗೆ ಬ್ರೇಕ್‌ ಹಾಕಲಾಗುತ್ತದೆ.

ಕಾರಣ ಕೃಷಿ ಕಾರ್ಯಗಳಿಗೆ ಕಾರ್ಮಿಕರು ಸಿಗದೇ ಹೋಗಬಹುದು ಎನ್ನುವ ವಿಚಾರವೂ ಇದರಲ್ಲಿ ಸೇರಿಕೊಂಡಿದೆ. ಹಿಂದೂ ಸಂಸ್ಕೃತಿಯಲ್ಲಿ ಆಷಾಢ ಮಾಸ ಅಮಂಗಳಕರವೆಂದೇ ಪರಿಗಣಿಸಲಾಗಿದ್ದು, ಯಾವುದೇ ಶುಭ ಕಾರ್ಯಗಳನ್ನು ನಡೆಸಲಾಗುವುದಿಲ್ಲ. ಒಂದು ವೇಳೆ ನಡೆಸಿದರೆ ಇದಕ್ಕೆ ದೇವರ ಅನುಗ್ರಹ ಪ್ರಾಪ್ತಿಯಾಗುವುದಿಲ್ಲ ಎನ್ನುವ ನಂಬಿಕೆ ಇದೆ. ಹೆಚ್ಚಿನ ಕಾರ್ಯಗಳು ಈ ಸಂದರ್ಭದಲ್ಲಿ ಸ್ಥಗಿತಗೊಳುವುದರಿಂದ ಇದನ್ನು ಶೂನ್ಯ ಮಾಸ ಎಂದೂ ಕರೆಯಲಾಗುತ್ತದೆ.

ಹಿರಿಯರು ದೈವಿಕ ಕಾರಣವನ್ನು ನೀಡಿ ಶುಭ ಕಾರ್ಯಗಳಿಗೆ ನಿಷಿದ್ಧ ಹೇರಿದ್ದರೂ ಇದರ ಹಿಂದೆಯೂ ಒಂದು ಕಾರಣವಿದೆ. ಮಳೆಗಾಲವೆಂದರೆ ಯಾವುದೇ ಕೆಲಸಕ್ಕೆ ಅಡ್ಡಿ ಆತಂಕಗಳು ಉಂಟಾಗುವುದು ಸಹಜ. ಮಾತ್ರವಲ್ಲದೆ ಅತಿಥಿಗಳ ಉಪಚಾರದಲ್ಲೂ ಸಮಸ್ಯೆಗಳಾಗುತ್ತವೆ. ಹೀಗಾಗಿ ಅತಿಥಿಗಳು ಬೇಸರಗೊಳ್ಳಬಹುದು. ಈ ಕಾರಣದಲ್ಲಿ ಈ ಅವಧಿಯಲ್ಲಿ ಶುಭ ಕಾರ್ಯಗಳಿಗೆ ಮನ್ನಣೆ ನೀಡುವುದಿಲ್ಲ.

ಆಷಾಢ ಮಾಸದಲ್ಲಿ ಮದುವೆಯಂತ ಶುಭ ಕಾರ್ಯಗಳನ್ನು ನಡೆಸಿದರೆ, ದಂಪತಿಗಳು ಕೂಡಿ ಬಾಳಿದರೆ ಅವರಿಗೆ ಹುಟ್ಟುವ ಸಂತಾನ ಒಂಭತ್ತು ತಿಂಗಳ ಅನಂತರ ಅಂದರೆ ಚೈತ್ರ ಮಾಸದಲ್ಲಿ ಹುಟ್ಟುವ ಸಾಧ್ಯತೆ ಇರುತ್ತದೆ. ಅದು ಬಿರುಬೇಸಗೆಯ ದಿನವಾಗಿರುತ್ತದೆ. ಆ ಅವಧಿಯಲ್ಲಿ ಹೆರಿಗೆಯೂ ಕಷ್ಟ. ಹೀಗಾಗಿ ಆಷಾಢ ಮಾಸವನ್ನು ಅಮಂಗಳಕರವನ್ನಾಗಿ ಮಾಡಲಾಗಿದೆ.

ಮಳೆಗಾಲದಲ್ಲಿ ಕೃಷಿ ಚಟುವಟಿಕೆಗಳು ಹೆಚ್ಚಾಗಿರುವುದರಿಂದ ಮನೆಯಲ್ಲಿ ಕೆಲಸ ಕಾರ್ಯಗಳು ಅಧಿಕವಾಗಿರುತ್ತದೆ. ಹೀಗಾಗಿ ಅತ್ತೆ, ಸೊಸೆಯ ನಡುವೆ ಭಿನ್ನಾಭಿಪ್ರಾಯಗಳು ಬರುವ ಸಾಧ್ಯತೆ ಇರುತ್ತದೆ. ಇದನ್ನು ತಪ್ಪಿಸುವ ಸಲುವಾಗಿ ಮಳೆಗಾಲದಲ್ಲಿ ಅವರನ್ನು ದೂರ ಮಾಡಲಾಗುತ್ತದೆ.
ಮಳೆಗಾಲ ಆರಂಭವಾಗುತ್ತಿದ್ದಂತೆ ಗಾಳಿಯಲ್ಲಿ ಆವರಿಸುವ ಸೋಂಕಿನಿಂದ ರಕ್ಷಿಸಲು ಹೆಣ್ಮಕ್ಕಳು ಕೈಗೆ ಮದರಂಗಿಯನ್ನು ಹಚ್ಚಿಕೊಳ್ಳುವ ಸಂಪ್ರದಾಯವಿದೆ. ಹೀಗಾಗಿ ಆಷಾಢ ಮಾಸದಲ್ಲಿ ಕೈಗಳಿಗೆ ಮದರಂಗಿ ಹಚ್ಚಿಕೊಳ್ಳುವುದಕ್ಕೆ ಸಂಪ್ರದಾಯ ಬದ್ಧವಾದ ಮಾನ್ಯತೆಯನ್ನೂ ನೀಡಲಾಗಿದೆ.

ಆಷಾಢ ಮಾಸದಲ್ಲಿ ಮನೆಯಲ್ಲಿ ಶುಭ ಕಾರ್ಯಗಳು ನಡೆಯದೇ ಇದ್ದರೂ ರಥಯಾತ್ರೆ, ಚತುರ್ಮಾಸ ವ್ರತ, ಪೂಜೆ, ಮೆರವಣಿಗೆಗಳೆಲ್ಲ ನಡೆಯುತ್ತದೆ. ಇದಕ್ಕೆ ಕಾರಣ ಏನೇ ಇದ್ದರೂ ಸಾಮಾಜಿಕವಾಗಿ ಎಲ್ಲರನ್ನೂ ಒಗ್ಗೂಡಿಸುವ ಪ್ರಯತ್ನ ಇಲ್ಲಿದೆ. ಆಷಾಢ ಮಾಸದಲ್ಲಿ ಕೃಷಿ
ಚಟುವಟಿಕೆಗಳನ್ನು ಪೂಜೆ ನಡೆಸುವ ಮೂಲಕ ಪ್ರಾರಂಭಿಸಿದರೆ ಬೆಳೆ ಹುಲುಸಾಗಿ ಬೆಳೆಯುತ್ತದೆ ಎನ್ನುವ ನಂಬಿಕೆಯೂ ಇದೆ.

ಟಾಪ್ ನ್ಯೂಸ್

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

World Diabetes Day; ಮಧುಮೇಹದಲ್ಲಿದೆ ಹಲವು ರೀತಿ; ಇಲ್ಲಿದೆ ಅದರ ಸಂಪೂರ್ಣ ವಿವರ

World Diabetes Day; ಮಧುಮೇಹದಲ್ಲಿದೆ ಹಲವು ರೀತಿ; ಇಲ್ಲಿದೆ ಅದರ ಸಂಪೂರ್ಣ ವಿವರ

3-health

Mother: ತಾಯಂದಿರ ಮಾನಸಿಕ ಆರೋಗ್ಯ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.