ಗದಗ ಪಶುವೈದ್ಯಕೀಯ ಮಹಾವಿದ್ಯಾಲಯಕ್ಕೆ 30 ಕೋಟಿ ರೂ. ಗೆ ಅನುಮೋದನೆ: ಸಚಿವ ಪ್ರಭು ಚವ್ಹಾಣ್
Team Udayavani, Jul 15, 2021, 4:58 PM IST
ಬೆಂಗಳೂರು: ಕಳೆದ ಐದು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಗದಗ ಪಶುವೈದ್ಯಕೀಯ ಮಹಾವಿದ್ಯಾಲಯದ ಎರಡನೇ ಹಂತದ ಕಟ್ಟಡ ಕಾಮಗಾರಿ, ಲ್ಯಾಬರೇಟರಿ, ಚಿಕಿತ್ಸಾ ಯಂತ್ರೋಪಕರಣಗಳು ಸೇರಿದಂತೆ ಅವಶ್ಯಕ ಸೌಕರ್ಯ ಪೂರ್ಣಗೊಳಿಸಲು ಇಂದು ನಡೆದ ಸಚಿವ ಸಂಪುಟದ ಸಭೆಯಲ್ಲಿ ರೂ.30 ಕೋಟಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.
ವಲಯವಾರು ಪ್ರಾದೇಶಿಕ ಅಸಮತೋಲನೆ ಕುರಿತು ಡಾ.ನಂಜುಂಡಪ್ಪನವರ ವರದಿ ಅನ್ವಯ 2009ರಲ್ಲಿಯೇ ಪಶುವೈದ್ಯಕೀಯ ಮಹಾವಿದ್ಯಾಲಯವನ್ನು ಸ್ಥಾಪಿಸಲು ರೂ.50 ಕೋಟಿಗೆ ಅಂದು ಬಿ.ಎಸ್ ಯಡಿಯೂರಪ್ಪನವರ ನೇತೃತ್ವದ ಬಿಜೆಪಿ ಸರ್ಕಾರ ಅನುಮೋದನೆ ನೀಡಿತ್ತು. ಗದಗ ಜಿಲ್ಲಾಧಿಕಾರಿ ಮೂಲಕ 156.21 ಎಕರೆ ಜಮೀನನ್ನು ಸ್ವಾಧಿನಪಡಿಸಿಕೊಳ್ಳಲಾಗಿದ್ದು ಈಗಾಗಲೇ ಮೊದಲನೇ ಹಂತದ ಕಾಮಗಾರಿ ರೂ.30.16 ಕೋಟಿ ವೆಚ್ಚದಲ್ಲಿ ಪೂರ್ಣಗೊಂಡಿದ್ದು ಭಾರತೀಯ ಪಶುವೈದ್ಯಕೀಯ ಪರಿಷತ್ತು ಗದಗ ಜಿಲ್ಲೆಗೆ ಭೇಟಿ ನೀಡಿ ಇನ್ನೂ ಹಲವು ಮೂಲಭೂತ ಸೌಕರ್ಯಗಳ ಅವಶ್ಯಕೆತೆ ಇರುವುದರ ಕುರಿತು ವರದಿ ನೀಡಿತ್ತು. ಇದರ ಅನ್ವಯ ಗದಗ ಪಶುವೈದ್ಯಕೀಯ ಮಹಾವಿದ್ಯಾಲಯಕ್ಕೆ ಭೇಟಿ ನೀಡಿ ಅಲ್ಲಿನ ಕುಂದುಕೋರತೆಗಳನ್ನು ಸಚಿವರು ಖುದ್ದಾಗಿ ಪರಿಶೀಲನೆ ನಡೆಸಿದ್ದರು. ಅಲ್ಲದೇ ಈ ಕುರಿತಾಗಿ ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ ಪಾಟೀಲ್ ಅವರ ಜೊತೆ ಸಭೆ ನಡೆಸಲಾಗಿತ್ತು ಎಂದರು.
ಇದನ್ನೂ ಓದಿ:ಜು.21ರಂದು ಕೆಲವು ಶಾಸಕರೊಂದಿಗೆ ದೆಹಲಿಗೆ ಹೋಗುತ್ತೇನೆ: ರೇಣುಕಾಚಾರ್ಯ
ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ವೃತ್ತಿ ಭವಿಷ್ಯದ ದೃಷ್ಟಿಯಿಂದ ಮುಖ್ಯಮಂತ್ರಿಗಳೊಂದಿಗೆ ಈ ವಿಷಯವನ್ನು ಚರ್ಚಿಸಲಾಗಿತ್ತು. ಸದ್ಯ ಮಿನಿಮಮ್ ಸ್ಟಾಂಡರ್ಡ್ ಫಾರ್ ವೆಟರ್ನಟಿ ಎಜುಕೇಶನ್ ರೆಗ್ಯುಲೇಶನ್ – 2016 ರ ಅನ್ವಯ ಕಾಮಗಾರಿ ಪೂರ್ಣಗೊಳ್ಳಲು ಅಗತ್ಯವಿದ್ದ ರೂ. 30 ಕೋಟಿ ನೀಡಲಾಗಿದೆ ಎಂದು ಪ್ರಭು ಚವ್ಹಾಣ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್
Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.